<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬೆಂಗಳೂರು ರಸ್ತೆ ಸ್ವಚ್ಛತೆಗೆ ಸಿಎಂ ಡಿಕೆಶಿ ಅಖಾಡಕ್ಕೆ: ಫುಟ್ ಪಾತ್ ತೆರವು ಪರಿಶೀಲನೆ

ಬೆಂಗಳೂರು ರಸ್ತೆ ಸ್ವಚ್ಛತೆಗೆ ಸಿಎಂ ಡಿಕೆಶಿ ಅಖಾಡಕ್ಕೆ: ಫುಟ್ ಪಾತ್ ತೆರವು ಪರಿಶೀಲನೆ
Summary: CM DK Shivakumar reviews footpath clearance work to improve traffic system in Bengaluru city and facilitate public movement. Here are the important points he gave to the officials during the city rounds regarding the clearance of footpath encroachments.

Belagavi News :

ಬೆಂಗಳೂರು: ನಗರದ ಪುಟ್ ಪಾತ್ ತೆರವು ಕಾರ್ಯಾಚರಣೆ ಪ್ರಗತಿಯನ್ನು ಸಿಎಂ ಡಿ.

ಕೆ. ಶಿವಕುಮಾರ್ ಶುಕ್ರವಾರ ಪರಿಶೀಲಿಸಿದರು. ಹೆಚ್ ಎಎಲ್ ಏರ್ ಪೋರ್ಟ್, ದೊಡ್ಡನೆಕ್ಕುಂದಿಯ ಕಾರ್ತಿಕ್ ನಗರ ಸೇರಿದಂತೆ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಾಮಗಾರಿಯ ಸ್ಥಿತಿಗತಿಗಳನ್ನು ವೀಕ್ಷಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ ಸಚಿವನಾಗಿದ್ದ ಸಂದರ್ಭದಲ್ಲಿ ಈ ವಿಚಾರವಾಗಿ ಎಲ್ಲಾ ಪಕ್ಷಗಳ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ ತಿಳಿಸಿದರು.

ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರನ್ನು ಒಳಗೊಂಡ ಸಭೆಯಲ್ಲಿ, ನಗರದ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಒತ್ತುವರಿಗಳನ್ನು ತೆರವುಗೊಳಿಸುವ ಅಗತ್ಯದ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿತ್ತು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ನಗರದಲ್ಲಿ ಪಾದಚಾರಿಗಳಿಗೆ ಅನುಕೂಲವಾಗುವಂತೆ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಉದ್ದೇಶದಿಂದ ಫುಟ್ ಪಾತ್ ಗಳ ತೆರವು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ನಗರದ ಪುಟ್ ಪಾತ್ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೀದಿ ವ್ಯಾಪಾರಿಗಳ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಸುಮಾರು 60,000 ವ್ಯಾಪಾರಿಗಳ ಸಮೀಕ್ಷೆ ನಡೆಸಲಾಗಿದ್ದು, ಅವರಿಗೆ ಗುರುತಿನ ಚೀಟಿ ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು. ಅಲ್ಲದೆ, 30,000ಕ್ಕೂ ಹೆಚ್ಚು ಬೀದಿ ವ್ಯಾಪಾರಿಗಳು ತಳ್ಳುಗಾಡಿಗಳಿಗೆ ಅರ್ಜಿ ಸಲ್ಲಿಸಿದ್ದು, ಅವರಿಗೆ ತ್ರಿಚಕ್ರ ವಾಹನಗಳನ್ನು ಒದಗಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

ಈ ಕಾರ್ಯದ ಮೇಲ್ವಿಚಾರಣೆಯನ್ನು ಸಚಿವ ಕೃಷ್ಣ ಬೈರೇಗೌಡರು ಮುನ್ನಡೆಸುತ್ತಿದ್ದಾರೆ ಎಂದು ತಿಳಿಸಿದ ಅವರು, ಸುಪ್ರೀಂ ಕೋರ್ಟ್ ನ ಸ್ಪಷ್ಟ ನಿರ್ದೇಶನಗಳನ್ನು ಪಾಲಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ನಾಗರಿಕರ ಸಂಚಾರ ಹಕ್ಕುಗಳನ್ನು ರಕ್ಷಿಸುವ ಜೊತೆಗೆ, ಬೀದಿ ವ್ಯಾಪಾರಿಗಳ ಜೀವನೋಪಾಯಕ್ಕೂ ಆದ್ಯತೆ ನೀಡಲಾಗುವುದು. ನಿಗದಿತ ಪ್ರದೇಶಗಳಲ್ಲಿ ವ್ಯಾಪಾರ ಮಾಡಲು ಸೂಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online