BELAGAVI NEWS :
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಡಳಿತ ಹೊಸ ಚೈತನ್ಯ ತುಂಬುವ ಕೆಲಸಕ್ಕೆ ಯಂತ್ರಕ್ಕೆ ಚಾಲನೆ ನೀಡಿದ್ದಾರೆ. ವಿಧಾನ ಸೌದದಲ್ಲಿ ಗುರುವಾರ ರಾಜ್ಯದ ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಜಂಟಿ ಸಭೆ ನಡೆಸಿದ ಅವರು, ಸರಕಾರದ ಆದ್ಯತಾ ಯೋಜನೆಗಳನ್ನು ಸ್ವಾರಿತವಾಗಿ ಜಾರಿಗೆ ತರಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಮೊದಲ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಆರು ಪ್ರಮುಖ ಜನ ಪರ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, ಸರಕಾರದ ಭರವಸೆಗಳು ಶೀಘ್ರದಲ್ಲೇ ಜನರಿಗೆ ತಲುಪಬೇಕು ಎಂದು ಒತ್ತಿ ಹೇಳಿದರು. ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ನಿರ್ದೇಶಸಿದರು.
ಸಭೆಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ರಾಜರ ಆಡಳಿತ ವ್ಯವಸ್ಥೆಯ ಯಶಸ್ಸಿ ನಲ್ಲಿ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು."ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳೇ ಬೆನ್ನೆಲುಬು. ಆಡಳಿತದಲ್ಲಿ ಜವಾಬ್ದಾರಿ, ಪಾರದರ್ಶಕತೆ ಮತ್ತು ಕಾರ್ಯ ಕ್ಷಮತೆ ಕಾಪಾಡಬೇಕು"ಎಂದು ಹೇಳಿದರು.
ಇದೇ ವೇಳೆ, ರಾಜ್ಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಮಾದಕ ವಸ್ತುಗಳ ಜಾಲ ಹಾಗೂ ರೌಡಿಸಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮತ್ತು ಆಡಳಿತರೂಢ ಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ರಾಜಿ ಇರಬಾರದು ಎಂದು ಎಚ್ಚರಿಸಿದ ಅವರು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪರಿಣಾಮಕಾರಿ ಯೋಜನೆ ರೂಪಿಸುವಂತೆ ಸೂಚಿಸಿದರು.
ಸರ್ಕಾರದ ಆಡಳಿತ ಜನಸಾಮಾನ್ಯರ ನಿರೀಕ್ಷೆಗಳಿಗೆ ತಕ್ಕಂತೆ ಸಾಗಬೇಕು ಎಂದು ಹೇಳಿದ ಸಿಎಂ, ಅಧಿಕಾರಿಗಳು ಜನಪರ ಮನೋಭಾವದೊಂದಿಗೆ ಕಾರ್ಯನಿರ್ವಹಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಬೇಕು ಎಂದು ತಿಳಿಸಿದರು. ರಾಜ್ಯದ ಅಭಿವೃದ್ಧಿ, ಉತ್ತಮ ಆಡಳಿತ ಹಾಗೂ ಬ್ರಷ್ಟಾಚಾರ ಮುಕ್ತ ವ್ಯವಸ್ಥೆ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಮಾರಂಭದಲ್ಲಿ ನಡೆದ ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಡಳಿತದಲ್ಲಿ ಪಾರದರ್ಶಕತೆಯ ಮತ್ತು ಪ್ರಾಮಾಣಿಕತೆಗೆ ಹೆಚ್ಚಿನ ಒತ್ತು ನೀಡಿದರು. ರಾಜ್ಯದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯ ದುರ್ಬಳಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಇಂತಹ ಅಕ್ರಮಗಳಿಗೆ ತಕ್ಷಣವೇ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
"ಆಡಳಿತದಲ್ಲಿ ಯಾವುದೇ ರೀತಿಯ ಬ್ರಷ್ಟಾಚಾರಕ್ಕೆ ಅವಕಾಶ ಇರಬಾರದು.ಸಾರ್ವಜನಿಕರ ಹಣ ಮತ್ತು ಸಂಪನ್ಮೂಲಗಳ ಬಳಕೆ ಸಂಪೂರ್ಣ ಪಾರದರ್ಶಕವಾಗಿರಬೇಕು.ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು" ಎಂದು ಸಿಎಂ ತಿಳಿಸಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ತೋರಿತವಾಗಿ ಸ್ಪಂದಿಸುವುದು ಅಧಿಕಾರಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು,ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.ಜನರ ವಿಶ್ವಾಸ ಗಳಿಸುವಂತಹ ಆಡಳಿತ ನೀಡುವ ಮೂಲಕ ಸರ್ಕಾರದ ಪ್ರತಿಷ್ಠೆ ಹೆಚ್ಚಿಸಬೇಕು ಹಾಗೂ ಅಧಿಕಾರಿಗಳು ಉತ್ತಮ ಹೆಸರು ಗಳಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಆರು ಪ್ರಮುಖ ಜನಪರ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಲು ನಿರ್ದೇಶನ ನೀಡಿದರು.ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ ಅಥವಾ ವಿಳಂಬ ಕಂಡುಬಂದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾನೂನು ವ್ಯವಸ್ಥೆ ವಿಷಯದಲ್ಲೂ ಕಟ್ಟುನಿಟ್ಟಿನ ನಿಲುವು ವ್ಯಕ್ತಪಡಿಸಿದ ಸಿಎಂ,ರೌಡಿಸಂ, ಜೂಟಾಟ, ಡ್ರಗ್ಸ್ ಜಾಲ ಹಾಗೂ ಇತರೆ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ ಅಧಿಕಾರಿಗಳಿಗೆ ಸೂಚಿಸಿದರು.ಸಮಾಜದ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ ನೀತಿನಲ್ಲಿ ಅಪರಾಧ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು.
ಒಟ್ಟಾರೆ,ಉತ್ತಮ ಆಡಳಿತ, ಬ್ರಷ್ಟಾಚಾರ ಮುಕ್ತ ವ್ಯವಸ್ಥೆ ಮತ್ತು ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವೇ ಸರ್ಕಾರದ ಪ್ರಮುಖ ಆದ್ಯತೆಯೆಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ,ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸ್ಪಷ್ಟಪಡಿಸಿದ ಅವರು,ರೌಡಿಸಂ,ಜುಟಾಟ ಹಾಗೂ ಡ್ರಗ್ಸ್ ದಂಧೆಗಳನ್ನು ಸಂಪೂರ್ಣವಾಗಿ ಬೇರು ಸಹಿತ ನಿರ್ಮೂಲನೆ ಮಾಡುವಂತೆ ಸೂಚಿಸಿದರು.
ಸಮ್ಮೇಳನ ಸಮಾರಂಭದಲ್ಲಿ ನಡೆದ ಹಿರಿಯ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ, ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು."ರೌಡಿಸಂ ಹೆಡೆ ಮುರಿ ಕಟ್ಟಿ,ಸಮಾಜದಲ್ಲಿ ಭಯ ಹುಟ್ಟಿಸುವವರನ್ನು ಕಾನೂನಿನ ಚೌಕಟ್ಟಿನಲ್ಲಿ ಕಟ್ಟಿ ಹಾಕಬೇಕು" ಎಂದು ಅವರು ಸೂಚಿಸಿದರು.
ಪೊಲೀಸ್ ಅಧಿಕಾರಿಗಳಿಗೆ ಮುಕ್ತ ಸ್ವತಂತ್ರ ನೀಡುವುದಾಗಿ ಹೇಳಿದ ಸಿಎಂ,ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮನೆಯದೇ ಕಾನೂನು ಬದ್ಧವಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.ಅಪರಾಧ ಚಟುವಟಿಕೆಗಳ ವಿರುದ್ಧ ತಕ್ಷಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡು,ರಾಜ್ಯದಲ್ಲಿ ಸುರಕ್ಷಿತ ವಾತಾವರಣ ನಿರ್ಮಾಣ ಮಾಡುವುದು ಪೊಲೀಸ ಇಲಾಖೆಯ ಪ್ರಮುಖ ಹೊಣೆಗಾರಿಕೆ ಎಂದು ಅವರು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ,ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಬದ್ಧತೆ ಕಾಪಾಡವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
Also Read:
ಇರಾನ್ - ಶಾಂತಿ ಮಾತುಕತೆಗೆ ಇಸ್ರೇಲ್ ಅಡ್ಡಿ: ಟ್ರಂಪ್ ನಿಂದ ಮಹತ್ವದ ಹೇಳಿಕೆ