<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಮೇ 25ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ;ಹೈಕಮಾಂಡ್ ಸಭೆ ಹಿಂದೆ ರಾಜಕೀಯ ಕುತೂಹಲ

ಮೇ 25ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ;ಹೈಕಮಾಂಡ್ ಸಭೆ ಹಿಂದೆ ರಾಜಕೀಯ ಕುತೂಹಲ
Summary: In a development that has led to a new debate in Karnataka politics, the Congress high command has invited CM Siddaramaiah to Delhi. There are rumors that many political discussions, including a leadership change, are likely to be discussed in the important meeting to be held on May 26.

belagavi news :

ಕರ್ನಾಟಕ ಕಾಂಗ್ರೆಸ್ ನಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ.ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ, ಮೇ 26ರಂದು ನವದೆಹಲಿಗೆ ಆಗಮಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರಿಗೆ ತುರ್ತು ಬುಲಾವ್ ನೀಡಿದೆ.ಈ ಬೇಟಿ ರಾಜಕೀಯದಲ್ಲಿ ಬಾರಿ ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ.ಕಳೆದ ಕೆಲ ತಿಂಗಳಿನಿಂದ ಕಾಂಗ್ರೆಸ್ ವಲಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹ ಕೇಳಿ ಬರುತ್ತಿದ್ದರೆ,ಇದೀಗ ಹೈಕಮಾಂಡ್ ಸಭೆ ಆ ಚರ್ಚೆಗೆ ಇನ್ನಷ್ಟು ಬಲ ನೀಡಿದೆ.

ಮೇ 26ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ರಾಜ್ಯದ ರಾಜಕೀಯ ಪರಿಸ್ಥಿತಿ,ಸರ್ಕಾರದ ಕಾರ್ಯಕ್ಷಮತೆ,ಮುಂದಿನ ಚುನಾವಣಾ ತಂತ್ರಗಳ ಜೊತೆಗೆ ಸಿಎಂ ಹುದ್ದೆ ಬದಲಾವಣೆ ಕುರಿತ ಲೆಕ್ಕಾಚಾರಗಳ ಮೇಲು ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಸಿದ್ದರಾಮಯ್ಯ ದೆಹಲಿ ಭೇಟಿ ಇದೀಗ ರಾಜ್ಯ ರಾಜಕೀಯದ ಹಾಟ್ ಟಾಪಿಕ್ ಆಗಿದೆ.

Sponsored

ಬೆಂಗಳೂರು:ಕರ್ನಾಟಕ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆ ಹಂಚಿಕೆ ಹಾಗೂ ನಾಯಕತ್ವ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳು ಮತ್ತೆ ತೀವ್ರಗೊಂಡಿವೆ.ಕಳೆದ ಹಲವು ತಿಂಗಳಿನಿಂದ ಸದ್ದು ಮಾಡುತ್ತಿದ್ದ ಸಿಎಂ ಬದಲಾವಣೆ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದಂತೆ ಕಾಣಿಸುತ್ತಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ 3 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ,ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೇ 26ರಂದು ನವದೆಹಲಿಗೆ ಆಗಮಿಸುವಂತೆ ತುರ್ತು ಬುಲಾವ್ ನೀಡಿದೆ.ಈ ಬೆಳವಣಿಗೆ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು,ಕಾಂಗ್ರೆಸ್ ರಾಜಕೀಯದತ್ತ ಎಲ್ಲರ ಗಮನ ಸೆಳೆದಿದೆ.

ಮುಖ್ಯಮಂತ್ರಿ ಬುದ್ಧಿ ಹಂಚಿಕೆ ಮುಂದಿನ ರಾಜಕೀಯ ತಂತ್ರಗಳು ಹಾಗೂ ಸರ್ಕಾರದ ಭವಿಷ್ಯದ ಕುರಿತಂತೆ ಮಾತ್ರ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಮಾತುಕತೆಗಳು ಜೋರಾಗಿವೆ.ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ನಾಯಕತ್ವ ಸಮೀಕರಣದ ಬಗ್ಗೆ ಮತ್ತೆ ಊಹಾಪೋಹ ಕೇಳಿ ಬರುತ್ತಿವೆ.

ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲಿ,ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ.ಮೇ 26ರಂದು ನವದೆಹಲಿಯಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಇದೇ ವಿಷಯ ಪ್ರಮುಖ ಕಾರ್ಯಸೂಚಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Sponsored

ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಮೂಡಿರುವ ನಾಯಕತ್ವದ ಗೊಂದಲಗಳಿಗೆ ಶಾಶ್ವತ ಹಾಡಲು ಮುಂದಾಗಿದೆ ಎನ್ನಲಾಗುತ್ತಿದೆ.ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೆಂಬಲಿಗರ ನಡುವೆ ಹರಿಸಿ,ಪಕ್ಷದಲ್ಲಿ ಏಕತೆ ಕಾಪಾಡುವ ಉದ್ದೇಶದಿಂದ ಹೈಕಮಾಂಡ್ ಈ ಸಭೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

ಇದೇ ವೇಳೆ,ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ತೀರ್ಮಾನಕ್ಕೆ ತಾವು ಸಂಪೂರ್ಣ ಬದ್ಧರಾಗಿರುವುದಾಗಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.ಹೈಕಮಾಂಡ್ ಯಾವಾಗಲೂ ಕರೆ ನೀಡಿದರು ದೆಹಲಿಗೆ ತೆರಳಲು ಸಿದ್ಧನಿದ್ದೇನೆ ಎಂದು ಅವರು ಹೇಳಿರುವುದು ರಾಜಕೀಯ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

ಮತ್ತೊಂದೆಡೆ ಸಿದ್ದರಾಮಯ್ಯ ಅವರ ಬೆಂಬಲಿಗರು ಮತ್ತು ಅಹಿಂ ಸಂಘಟನೆಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಈಗಾಗಲೇ ಹೈಕಮಾಂಡ್ ಮೇಲೆ ಒತ್ತಡ ಹೇರಲು ದೆಹಲಿಯಲ್ಲಿ ಬಿಡು ಬಿಟ್ಟಿದ್ದಾರೆ

ಮೇ 26ರಂದು ನಡೆಯಲಿರುವ ಈ ಮಹತ್ವದ ದೆಹಲಿ ಭೇಟಿಗೆ ರಾಜ್ಯ ರಾಜಕೀಯದಲ್ಲಿ ಭಾರಿ ಮಹತ್ವ ಸಿಕ್ಕಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆಯಲಿರುವ ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರದ ಜೊತೆಗೆ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಮತ್ತು ಮುಂಬರುವ ರಾಜ್ಯಸಭಾ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Sponsored

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಸಿದ್ದರಾಮಯ್ಯ ಅವರು ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ನಡೆಸಲಿದ್ದಾರೆ ಎನ್ನಲಾಗಿದೆ.ವಿಶೇಷವಾಗಿ ಸಚಿವ ಸಂಪುಟದಲ್ಲಿ ಬದಲಾವಣೆ,ಅಸಮಾಧಾನಗೊಂಡ ಶಾಸಕರ ಮನವರಿಕೆ ಹಾಗೂ ಮುಂದಿನ ಚುನಾವಣೆ ಸಿದ್ಧತೆಗಳ ಬಗ್ಗೆ ಹೈಕಮಾಂಡ್ ಗಂಭೀರ ಚರ್ಚೆ ನಡೆಸುವ ಸಾಧ್ಯತೆ ಇದೆ.

ಒಟ್ಟಾರೆ,ಮೇ 26ರಂದು ನಡೆಯಲಿರುವ ಈ ಉನ್ನತ ಮಟ್ಟದ ಸಭೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು,ನಾಯಕತ್ವ ಭವಿಷ್ಯ ಮತ್ತು ಪಕ್ಷದ ಒಳ ರಾಜಕೀಯ ಸಮೀಕರಣಗಳನ್ನು ನಿರ್ಧರಿಸುವ ಮಹತ್ವದ ಘಟ್ಟವಾಗಲಿದೆ ಎಂದು ವಿಶ್ಲೇಷಣೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಹೈಕಮಾಂಡ್ ಕರೆದಿರುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಸದಾಶಿವನಗರ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,"ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ನನಗೆ ಗೊತ್ತಿಲ್ಲ"ಎಂದು ಹೇಳಿದರು.

ಸಭೆ ಮುಗಿಸಿಕೊಂಡು ಹೊರಬಂದ ಬಳಿಕ ಪ್ರತಿಕ್ರಿಯಿಸಿದವರು,"ಈ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಪುನರುಚ್ಚರಿಸಿದರು.

Sponsored

Also Read:

ಬೆಂಗಳೂರು ಹವಾಮಾನ : ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ ಜಾರಿ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online