belagvi news :
ತಮಿಳನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿವೆ, ಪಶ್ಚಿಮ ಬಂಗಾಳದಲ್ಲಿ ಬಹುಮತ ಪಡೆದಿರುವ ಬಿಜೆಪಿ ಇಂದು ಸಂಜೆ ಅಮಿಷ ನೇತೃತ್ವದಲ್ಲಿ ಸಭೆ ನಡೆಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಸಜ್ಜಾಗಿದೆ. ಇನ್ನೊಂದೆಡೆ ತಮಿಳುನಾಡಿನಲ್ಲಿ ಸರ್ಕಾರ ರಚನೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಕಾಂಗ್ರೆಸ್ ನ 5 ಶಾಸಕರ ಬೆಂಬಲದಿಂದ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಮುಂದಾಗಿದೆ ಎಂದು ಹೇಳಲಾಗುತ್ತಿದ್ದು, ಇದನ್ನು ಎಐಎಡಿಎಂಕೆ ಟೀಕಿಸಿದೆ. ಈ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪ್ರತಿಕ್ರಿಯಿಸಿ, ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ
ಕಾಂಗ್ರೆಸ್ ಈಗಾಗಲೇ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಕೇರಳದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತ ಗೊಂದಲ ಬಹುತೇಕ ಅಂತ್ಯ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಭಾನುವಾರ ಸಿಎಂ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸುವುದಾಗಿ ಸ್ಪಷ್ಟಪಡಿಸಿದೆ. ಕೇರಳದಲ್ಲಿ ಸಿಎಂ ಸ್ಥಾನಕ್ಕೆ ಮೂವರ ಹೆಸರು ಮುನ್ನಡೆಯಲ್ಲಿರುವ ನಡುವೆಯೇ, ರಾಜ್ಯದ ಹಿರಿಯ ನಾಯಕರೊಂದಿಗೆ ಸಮಾಲೋಚಿಸಿದ ಬಳಿಕ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಮುರಳೀಧರನ್ ತಿಳಿಸಿದ್ದಾರೆ.
ಕೇರಳ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಮಾತನಾಡಿದ ಅವರು, ಪಕ್ಷದ ವೀಕ್ಷಕರು ಈಗಾಗಲೇ ದೆಹಲಿಗೆ ತೆರಳಿದ್ದು, ತಮ್ಮ ವರದಿಯನ್ನು ಇಂದು ಹೈಕಮಾಂಡ್ಗೆ ಸಲ್ಲಿಸಿದ್ದಾರೆ ಎಂದು ಹೇಳಿದರು. ರಾಜ್ಯದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ನಾಳೆ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಅದರ ಮರುದಿನವಾದ ಭಾನುವಾರ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಮುರಳೀಧರನ್ ತಿಳಿಸಿದ್ದಾರೆ.
ತಮಿಳುನಾಡು ರಾಜಕೀಯದಲ್ಲಿ ಸರಕಾರ ರಚನೆ ಕುರಿತ ಚರ್ಚೆ ತೀರಗೊಂಡಿರುವ ನಡುವೆ ಎಐಎಡಿ ಎಂಕೆ ರಾಷ್ಟ್ರೀಯ ವಕ್ತಾರ ಕೋವೈ ಸತ್ಯನ್ ರಾಜ್ಯಪಾಲರ ನಡೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರು ಟಿವಿಕೆ ಪಕ್ಷ ಏಕೈಕ ಅತಿದೊಡ್ಡ ಪಕ್ಷ ಎಂಬ ಹೇಳಿಕೆ ಮತ್ತು ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಟೀಕಿಸಿದ್ದಾರೆ. ಟಿವಿಕೆ 108 ಪಕ್ಷಗಳನ್ನು ಹೊಂದಿದ್ದು, ಕಾಂಗ್ರೆಸ್ ನ 5 ಶಾಸಕರ ಬೆಂಬಲವಿದೆ ಎಂದು ಹೇಳಿಕೊಳ್ಳುತ್ತಿದೆ. ಸರ್ಕಾರ ರಚನೆಗೆ ಇನ್ನೂ ಅಗತ್ಯವಿರುವ ಉಳಿದ ಐದು ಸ್ಥಾನಗಳು ಇಲ್ಲಿವೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ರಾಜ್ಯಪಾಲರು ಸ್ಪಷ್ಟತೆ ಕೇಳುವುದು ಅವರ ಕರ್ತವ್ಯ ಎಂದು ಹೇಳಿ ಎಐಎಡಿಎಂಕೆ ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿದೆ. ಇದೇ ಬೇರೆ ಕಾಂಗ್ರೆಸ್- ಟಿವಿಕೆ ಮೈತ್ರಿ ಅನ್ನು ಟೀಕಿಸಿದ ಅವರು, ಸರಕಾರ ರಚನೆಗೆ 118 ಸ್ಥಾನಗಳು ಅಗತ್ಯವಾಗಿರುವಾಗ ಕೇವಲ ಐದು ಸ್ಥಾನಗಳ ಬೆಂಬಲದಿಂದ ಸರ್ಕಾರ ಸಾಧ್ಯವಿಲ್ಲ ಎಂದು ಹೇಳಿದರು. ಕಾಂಗ್ರೆಸ್ ನ ಭಾಗವಹಿಸುವಿಕೆಯನ್ನು ಅವರು "ಹಡುಗಿನಲ್ಲಿ ರಂಧ್ರ"ಎಂದು ವ್ಯಂಗ್ಯವಾಡಿ, ಅದು ಸರ್ಕಾರ ರಚನೆಯ ಪ್ರಕ್ರಿಯೆಯನ್ನು ಇನ್ನಷ್ಟು ಸಕ್ರಿಯಗೊಳಿಸಿದೆ ಎಂದು ಆರೋಪಿಸಿದ್ದರು.
ವೆಸ್ಟ್ ಬೆಂಗಾಲ್ ನಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಕುರಿತು ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಿಎಂ ಅಭ್ಯರ್ಥಿ ಅಂತಿಮಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸುವೆಂದು ಅಧಿಕಾರಿ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿಯಲ್ಲಿ ಇದೆ ಎಂದು ರಾಜಕೀಯ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ, ಕೇರಳದ ರಾಜಕೀಯದಲ್ಲೂ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಾಗಿ ಚರ್ಚೆಗಳು ತೀವ್ರಗೊಂಡಿವೆ. ವಿರೋಧ ಪಕ್ಷದ ನಾಯಕ ವಿ ಡಿ ಸತೀಸನ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಚೆನ್ನಿತಲ್ ಹಾಗೂ ಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ಹೆಸರುಗಳು ಮುನ್ನಡೆಯಲ್ಲಿ ದ್ದು, ಇವರಲ್ಲಿ ಕೆಸಿ ವೇಣುಗೋಪಾಲ್ ಅವರ ಹೆಸರು ಪ್ರಬಲವಾಗಿ ಚರ್ಚೆಯಲ್ಲಿದೆ ಎಂದು ವರದಿಯಾಗಿದೆ.
Also Read: