<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಕ್ಯಾಬಿನೆಟ್ ವಿಸ್ತರಣೆ ಕುತೂಹಲ: ಸಚಿವ ಸ್ಥಾನ ಕುರಿತು ಜಮೀರ್ ಅಹ್ಮದ್ ಹೇಳಿದ್ದೇನು?

ಕ್ಯಾಬಿನೆಟ್ ವಿಸ್ತರಣೆ ಕುತೂಹಲ: ಸಚಿವ ಸ್ಥಾನ ಕುರಿತು ಜಮೀರ್ ಅಹ್ಮದ್ ಹೇಳಿದ್ದೇನು?
Summary: Amidst the heated debate in the political circles over the state cabinet expansion, former minister Zameer Ahmed has expressed confidence that he will get a ministerial berth in the second list. However, he clarified that he is not upset or dissatisfied even if he does not get the opportunity, saying that the party's decision is final. This statement by Zameer has further increased the political curiosity about the cabinet expansion.

Belagavi News:

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳು ಜೋರಾಗಿರುವ ನಡುವೆಯೇ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನು ಭೇಟಿ ಮಾಡಿ ಕೆಳಕಾಳ ಮಹತ್ವದ ಚರ್ಚೆ ನಡೆಸಿದ್ದರು. ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, " ನಮ್ಮದು ಹೈಕಮಾಂಡ್ ಪಕ್ಷ. ಎಲ್ಲಾ ತೀರ್ಮಾನಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಮೊದಲ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಿದ್ದೆ, ಆದರೆ ಅವಕಾಶ ಸಿಗಲಿಲ್ಲ. ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಸಿಗದಿದ್ದರೂ ಯಾವುದೇ ಬೇಸರವಿಲ್ಲ" ಎಂದು ಹೇಳಿದರು .

" ನಾನು ಯಾವತ್ತೂ ಸಚಿವ ಸ್ಥಾನಕ್ಕಾಗಿ ಬಹಿರಂಗವಾಗಿ ಬೇಡಿಕೆ ಇಟ್ಟಿಲ್ಲ. ನನ್ನ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ನೆಚ್ಚಿನ ನಾಯಕ ಸಚಿವರಾಗಬೇಕು ಎಂದು ಅವರು ಬಯಸುವುದು ಸಹಜ" ಎಂದು ಸ್ಪಷ್ಟಪಡಿಸಿದರು. ಜೊತೆಗೆ, "ನನಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ನನ್ನ ಮುಖದಲ್ಲಿ ಬೇಸರ ಕಾಣಿಸುತ್ತಿದೆಯೇ? ನಾನು ಹೈಕಮಾಂಡ್ ಗೆ ಹತ್ತಿರವಾಗಿದ್ದೇನೆ. ಕೇರಳ ಹಾಗೂ ತೆಲಂಗಾಣ ಚುನಾವಣೆಗಳಲ್ಲಿ ಪಕ್ಷದ ಪರವಾಗಿ ಪ್ರಚಾರ ಕೂಡ ಮಾಡಿದ್ದೇನೆ ಎಂದರು.

ವಿಧಾನಪರಿಷತ್ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, "ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ 140 ಶಾಶಕರು ಒಗ್ಗಟ್ಟಿನಿಂದ ಇದ್ದರು, ಒಬ್ಬ ಅಭ್ಯರ್ಥಿಗೆ ಅಗತ್ಯ ಇರುವ 28 ಮತಗಳು ಸಿಕ್ಕರು ಗೆಲವು ಖಚಿತ ನಮಗೆ ಹೆಚ್ಚುವರಿ ಮತಗಳ ಅಗತ್ಯವಿಲ್ಲ " ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಶಾಸಕರನ್ನು ಸಂಪರ್ಕಿಸಿರುವ ಆರೋಪಗಳ ಬಗ್ಗೆ ಮಾತನಾಡಿದ ಜಮೀರ್, "ನಮಗೆ ಅದರ ಅಗತ್ಯವೇ ಇಲ್ಲ. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಬೆಂಬಲ ನಮ್ಮಲ್ಲಿದೆ," ಎಂದು ಹೇಳಿದರು.

ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ನಡೆದಿದ್ದು ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕಾರಣವಾಗಿದೆ.

ಬೆಂಗಳೂರು ಹೊರವಲಯದ ಬಿಡದಿಯ ವಂಡರ್ ಲಾದಲ್ಲಿ ಮಂಗಳವಾರ ಸಂಜೆ ನಡೆದ ಸಭೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರು ಸಚಿವರು ಹಾಗೂ ಶಾಸಕರು ಭಾಗವಹಿಸಿ ವಿಧಾನ ಪರಿಷತ್ ಚುನಾವಣೆ ಮತ್ತು ಪಕ್ಷದ ಮುಂದಿನ ರಾಜಕೀಯ ತಂತ್ರಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣಧೀರ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಸಚಿವರಾದ ಕೆ.ಜೆ. ಜಾರ್ಜ್ , ಕೆ.ಎಚ್. ಮುನಿಯಪ್ಪ, ಎಂ.ಬಿ. ಪಾಟೀಲ್ , ದಿನೇಶ್ ಗುಂಡೂರಾವ್, ಯು. ಟಿ. ಖಾದರ್, ಆರ್. ವಿ. ದೇಶಪಾಂಡೆ ಹಾಗೂ ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದರು. ಜೊತೆಗೆ ಸಿಎಲ್ ಪಿ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಮತ್ತು ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್ತ ಹಾಗೂ ಗೋಪಿನಾಥ್ ಪಳನಿಸ್ವಾಮಿ ಕೂಡ ಉಪಸ್ಥಿತರಿದ್ದರು.

ವಿಧಾನಪರಿಷತ್ ಚುನಾವಣೆಗೆ ಮುನ್ನ ನಡೆದ ಈ ಸಭೆ ಕಾಂಗ್ರೆಸ್ ಪಾಳಯದಲ್ಲಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದು, ಗೆಲುವಿನ ತಂತ್ರ ರೂಪಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

Also Read:

Breaking News: ದೇವಸ್ಥಾನಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದಳು

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online