<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಕಾವೇರಿ ನದಿ ದುರಂತ: ಮುತ್ತತ್ತಿಯಲ್ಲಿ 5 ಜನರ ಜಲಸಮಾಧಿ ಘಟನೆ

ಕಾವೇರಿ ನದಿ ದುರಂತ: ಮುತ್ತತ್ತಿಯಲ್ಲಿ 5 ಜನರ ಜಲಸಮಾಧಿ ಘಟನೆ
Summary: A terrible incident has occurred at the tourist spot of Muttathi. Five people have drowned in the Cauvery river, causing panic among the locals. In the wake of this tragedy, the minister has instructed to immediately install barricades on the banks of the Cauvery river to avoid further disasters. A serious discussion has started again about the safety of tourists.

Belagavi News:

ಮುಖ್ಯಾಂಶಗಳು:

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಐವರು ಕಾವೇರಿ ನದಿ ಪಾಲು

ಹಾವೇರಿ ನದಿಯಲ್ಲಿ ಬ್ಯಾರಿ ಕೇಡ್ ಅಳವಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

Sponsored

ನಿಗದಿತ ಸ್ಥಳದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಮಂಡ್ಯ ಡಿಸಿಗೆ ನಿರ್ದೇಶನ

ಮುತ್ತತ್ತಿ ದುರಂತ: ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ನೀರುಪಾಲು

ಬೆಂಗಳೂರು/ ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಪ್ರವಾಸಿ ಸ್ಥಳದಲ್ಲಿ ಭೀಕರ ದುರಂತ ಸಂಭವಿಸಿದೆ. ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಮುಳುಗಿ ಸಾವನ್ನಪ್ಪಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಪ್ರವಾಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ನದಿ ನೀರಿನ ಆಳ ಮತ್ತು ಹರಿವಿನ ತೀವ್ರತೆಯೇ ಅಪಾಯಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆಯ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Sponsored

ಮುತ್ತತ್ತಿ ಪ್ರದೇಶದಲ್ಲಿ ಇಂತಹ ಅಪಘಾತಗಳು ಪುನರಾವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆ ಆರಂಭವಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ್ ಸಚಿವ ರಾಮಲಿಂಗಾ ರೆಡ್ಡಿ ಅವರು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂತಹ ದುರ್ಘಟನೆಗಳು ಮತ್ತೆ ಮರುಕಳಿಸದಂತೆ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪ್ರವಾಸಿ ತಾಣಗಳಲ್ಲಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಸಚಿವರು ಒತ್ತಾಯಿಸಿದ್ದಾರೆ.

ಕಾವೇರಿ ನದಿ ತೀರದಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು 'ಸೇಫ್ ಜೋನ್' ಬ್ಯಾರಿಕೇಡ್ ಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಜೊತೆಗೆ ಜಾಗೃತಿ ಫಲಕಗಳನ್ನು ಸ್ಥಾಪಿಸಿ, ಅಗತ್ಯವಿದ್ದಲ್ಲಿ ಗೈಡ್ಗಳನ್ನು ನಿಯೋಜಿಸುವ ಮೂಲಕ ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ಆದೇಶಿಸಲಾಗಿದೆ. ನಿಗದಿತ ಸುರಕ್ಷಿತ ಪ್ರದೇಶದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅಲ್ಲದೇ, ಸ್ಥಳೀಯವಾಗಿ ಗೈಡ್ ಗಳನ್ನು ನಿಯೋಜಿಸಿ, ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ. ನಿಗದಿತ ಸುರಕ್ಷಿತ ಪ್ರದೇಶದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.

Sponsored

Also Read :

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಗೆ ಶಾಕ್! ಚಂಪತ್ ರಾಯ್, ಟ್ರಸ್ಟಿ ಅನಿಲ್ ಮಿಶ್ರಾ ಹುದ್ದೆಗೆ ರಾಜೀನಾಮೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online