Belagavi News :
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಈ ಬೆಳವಣಿಗೆಯ ನಡುವೆಯೇ ತಮಿಳುನಾಡು ಮುಖ್ಯಮಂತ್ರಿ ವಿಜಯ್ ನಟಿಸಿರುವ ' ಜನನಾಯಗನ್ ' ಸಿನಿಮಾ ಪ್ರದರ್ಶನಕ್ಕೂ ತೀವ್ರ ವಿರೋಧ ವ್ಯಕ್ತವಾಗಿದೆ.
ನಗರದ ಗುರುಶ್ರೀ ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನವನ್ನು ತಡೆಯುವಂತೆ ಆಗರಹಿಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಚಿತ್ರಮಂದಿರದತ್ತ ಮುತ್ತಿಗೆ ಹಾಕಲು ಯತ್ನಿಸಿದರು. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ವಿವಾದ, ಮಂಡ್ಯ ಪ್ರತಿಭಟನೆ, ವಿಜಯ್ 'ಜನನಾಯಗನ್ ' ಸಿನಿಮಾ, ಕನ್ನಡಪರ ಸಂಘಟನೆಗಳ ಹೋರಾಟ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಚಿತ್ರಮಂದಿರದ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ತಮಿಳುನಾಡು ವಿರುದ್ಧ ಆಕ್ರೋಶ - ವಿಜಯ್ ಸಿನಿಮಾ ಪ್ರದರ್ಶನ ನಿಲ್ಲಿಸುವಂತೆ ಆಗ್ರಹ :
ಕಾವೇರಿ ನೀರಿನ ವಿಚಾರದಲ್ಲಿ ತಮಿಳುನಾಡು ಕರ್ನಾಟಕದ ಹಿತಾಸಕ್ತಿಗೆ ದಕ್ಕೆ ತಂದಿದೆ ಎಂದು ಆರೋಪಿಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡು ಮುಖ್ಯಮಂತ್ರಿ, ವಿಜಯ ನಟಿಸಿರುವ ' ಜನನಾಯಗನ್' ಸಿನಿಮಾ ವಿರೋಧ ಹಾಗೂ ಕನ್ನಡ ಪರ ಸಂಘಟನೆಗಳ ಹೋರಾಟದಿಂದ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.