<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಕಾವೇರಿ ವಿವಾದ ತೀವ್ರ: ತಮಿಳ್ನಾಡಿಗೆ ನೀರು ಬಿಡುವ ಆದೇಶ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಕಾವೇರಿ ವಿವಾದ ತೀವ್ರ: ತಮಿಳ್ನಾಡಿಗೆ ನೀರು ಬಿಡುವ ಆದೇಶ ವಿರೋಧಿಸಿ ಬಿಜೆಪಿ ಪ್ರತಿಭಟನೆ
Summary: Police have detained several people during a protest by BJP leaders against the order to release Cauvery water. BJP leaders expressed anger against the government, condemning the decision to release water to Tamil Nadu. Political activities have intensified further in the state over the Cauvery issue

belagavi news :

ಕಾವೇರಿ ನೀರು ವಿವಾದ: ಕೆಆರ್‌ಎಸ್ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರು ವಶಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಆದೇಶವನ್ನು ವಿರೋಧಿಸಿ ಮಂಡ್ಯದ ಕೆಆರ್‌ಎಸ್ ಅಣೆಕಟ್ಟಿನ ಬಳಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಆರ್‌ಎಸ್ ಅಣೆಕಟ್ಟಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ವಿಧಾನ ಪರಿಷತ್ ಸದಸ್ಯ ಸಿ.ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರೂ. ಬಿಜೆಪಿ ನಾಯಕರನ್ನು ಕೋಶನ್ ಕೆ ಪಡೆದ ಬಳಿಕ ಪ್ರತಿಭಟನೆ ಅಂತ್ಯಗೊಂಡಿತು.

ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಲುವಾಗಿ ನಾರಾಯಣಸ್ವಾಮಿ ಸೇರಿದಂತೆ ಹಲಗೂ ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಹಿಂಪಡೆಯಬೇಕು ಎಂದು ನಾಯಕರು ಆಗ್ರಹಿಸಿದರು.

ಪ್ರತಿಭಟನೆ ಹೇಳಿ ಮಾತನಾಡಿದ ಸಿ.ಟಿ.ರವಿ, "ಮುಖ್ಯಮಂತ್ರಿಗಳು ಕರ್ನಾಟಕದ ಹಿತ ಕಾಪಾಡಬೇಕು. ನೀವು ತಮಿಳುನಾಡಿನ ವಾಟರ್ ಮ್ಯಾನ್ ಅಲ್ಲ, ಕರ್ನಾಟಕದ ಮುಖ್ಯಮಂತ್ರಿ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ರೈತರ ಹಿತ ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಸರ್ವ ಪಕ್ಷ ಸಭೆಯನ್ನು ಮೊದಲೇ ನಡೆಸಬೇಕಿತ್ತು. ಕಾವೇರಿ ವಿಚಾರದಲ್ಲಿ ರೈತರ ಪರವಾಗಿ ಸರ್ಕಾರ ಗಟ್ಟಿಯಾದ ನಿಲುವು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಾವೇರಿ ನೀರು ವಿಚಾರವಾಗಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಬಿಜೆಪಿ ಪ್ರತಿಭಟನೆ ಬಳಿಕ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಕಾವೇರಿ ನೀರು ವಿವಾದ : ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ, ರೈತರ ಸೀತಾ ಮರೆತಿದ್ದಾರೆಂದು ಆರೋಪ

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರ ರೈತರ ಹಿತವನ್ನು ಮರೆತಿದೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದಲ್ಲಿದ್ದಾಗ ಮೇಕೆದಾಟು ಪಾದಯಾತ್ರೆ ನಡೆಸಿದ್ದರು. ಆದರೆ ಈಗ ಅಧಿಕಾರದಲ್ಲಿದ್ದರೂ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುವತ್ತಿಲ್ಲ ಎಂದು ಟಿಕಿಸಿದರು.

ಕಾವೇರಿ ವಿಚಾರದ ಸರ್ಕಾರ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು. ಏಪ್ರಿಲ್ ಮತ್ತು ಮೇ ತಿಂಗಳಲ್ಲೇ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕಾಗಿತ್ತು.. ಆದರೆ ಸರ್ಕಾರ ಆ ಸಮಯದಲ್ಲಿ ಆಂತರಿಕ ವಿಚಾರಗಳಲ್ಲೇ ತೊಡಗಿತ್ತು ಎಂದು ಆರೋಪಿಸಿದರು.

ಡಿಕೆ ಶಿವಕುಮಾರ್ ಅವರು ಹಲವು ಬಾರಿ ದೆಹಲಿಗೆ ಭೇಟಿ ನೀಡಿದ್ದರೂ, ಕಾವೇರಿ ರೈತರ ಪರವಾಗಿ ಕೇಂದ್ರದೊಂದಿಗೆ ಚರ್ಚಿಸಲು ಹೋಗಿಲ್ಲ ಎಂದು ವಿಜಯೇಂದ್ರ ಹೇಳಿದರು. ಸರ್ವ ಪಕ್ಷ ಸಭೆ ಕರೆಯುವ ನಿರ್ಧಾರ ತಡವಾಗಿದೆ ಎಂದು ಟೀಕಿಸಿದ ಅವರು, "ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ" ಎಂದು ವ್ಯಂಗ್ಯವಾಡಿದರು.

ಈ ಹಿಂದೆ ತಮಿಳುನಾಡಿಗೆ ನೀರು ಹರಿಸಿದಾಗಲೇ ಸರ್ವ ಪಕ್ಷ ಸಭೆ ನಡೆಸಬೇಕಿತ್ತು. ಈಗ ಸಭೆ ಕರೆಯುವುದು ತಡವಾದ ಕ್ರಮವಾಗಿದೆ ಎಂದು ಅವರು ಹೇಳಿದರು, ಸರ್ಕಾರವು ತಮಿಳುನಾಡು ಮುಖ್ಯಮಂತ್ರಿ ಅವರನ್ನು ಖುಷಿ ಪಡಿಸಲು ನೀರು ಬಿಡುಗಡೆ ಮಾಡುತ್ತಿದೆ ಎಂದು ಆರೋಪಿಸಿದರು.

ಕಾವೇರಿ ರೈತರ ಹಿತಕ್ಕಾಗಿ ಸರ್ಕಾರ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. "ನನ್ನ ಕುರ್ಚಿ ಹೋದರು ಪರವಾಗಿಲ್ಲ, ನೀರು ಬಿಡುವುದಿಲ್ಲ ಎಂದು ಹೇಳುವ ಧೈರ್ಯ ಸರ್ಕಾರಕ್ಕೆ ಇರಬೇಕು" ಎಂದು ವಿಜಯೇಂದ್ರ ಸವಾಲು ಹಾಕಿದರು. ಕಾವೇರಿ ವಿಚಾರದಲ್ಲಿ ರಾಜ್ಯದ ರೈತರ ಪರವಾಗಿ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಕಾವೇರಿ ವಿವಾದ : ಯಡಿಯೂರಪ್ಪರಿಂದ ಸರ್ಕಾರದ ವಿರುದ್ಧ ವಾಗ್ದಾಳಿ, ರೈತರ ಪರ ಹೋರಾಟದ ಎಚ್ಚರಿಕೆ

ಕಾವೇರಿ ಬಿಡುಗಡೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ . ಕರ್ನಾಟಕದ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ರೈತರ ಪರವಾಗಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಮುಖ್ಯಮಂತ್ರಿ ಅವರು ರಾಜ್ಯದ ಹಿತವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು. ಕಾವೇರಿ ನೀರು ವಿಚಾರದಲ್ಲಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದು ಹೇಳಿದರು.

ಕಾವೇರಿ ಸಮಸ್ಯೆ ಕುರಿತು ನ್ಯಾಯಾಲಯದ ಮೊರೆ ಹೋಗಿ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಸರ್ಕಾರ ರಾಜಕೀಯದಲ್ಲಿ ತೊಡಗಿದೆ ಎಂದು ಟೀಕಿಸಿದರು. ರಾಜ್ಯದ ಜನರಿಗೆ ಹಾಗೂ ರೈತರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ ಎಂದು ಅವರು ಹೇಳಿದರು.

" ಒಂದು ಹನಿ ನೀರನ್ನೂ ತಮಿಳನಾಡಿಗೆ ಬಿಡಲು ಸಾಧ್ಯವಿಲ್ಲ" ಎಂದು ಹೇಳಿದ ಯಡಿಯೂರಪ್ಪ, ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಮೇಕೆದಾಟು ಯೋಜನೆ ಜಾರಿಯಾದರೆ ಕಾವೇರಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಅಭಿಪ್ರಾಯ ಪಟ್ಟರು.

ಮುಂದಿನ ದಿನಗಳಲ್ಲಿ ಮಳೆ ಕೊರತೆಯಾದರೆ ಕುಡಿಯುವ ನೀರಿನ ಸಂಕಷ್ಟ ಎದುರಾಗಬಹುದು. ಆದ್ದರಿಂದ ಸರ್ಕಾರ ರೈತರ ಮತ್ತು ರಾಜ್ಯದ ಜನರ ಹಿತದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದರು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online