<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಕಾವೇರಿ ನೀರು ಹಂಚಿಕೆ ವಿವಾದ : CWRC ಸಭೆಯಲ್ಲಿ ತಮಿಳುನಾಡು ಪಟ್ಟು, ಕರ್ನಾಟಕದ ನೀಲುವು ಏನು ?

ಕಾವೇರಿ ನೀರು ಹಂಚಿಕೆ ವಿವಾದ : CWRC ಸಭೆಯಲ್ಲಿ ತಮಿಳುನಾಡು ಪಟ್ಟು, ಕರ್ನಾಟಕದ ನೀಲುವು ಏನು ?
Summary: The Cauvery water sharing issue has come up for discussion again in the CWRC meeting. Tamil Nadu is demanding the release of its share of water, while Karnataka has made it clear that it cannot release water in the current situation.

Belagavi News :

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ವಾದ ಮತ್ತು ಪ್ರತಿವಾದ ನಡೆದಿದೆ. ತಮ್ಮ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಒತಾಯಿಸುತ್ತಿದ್ದು, ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಕೊರತೆ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ನೈರುತ್ಯ ಮುಂಗಾರು ಮಳೆಯ ಕೊರತೆ ಎದುರಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಅಭಾವ ತೀವ್ರವಾಗಿದೆ ಎಂದು ಕರ್ನಾಟಕ ಸಭೆಯಲ್ಲಿ ವಿವರಿಸಿದೆ. "ತಮಿಳುನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದ್ದರು ಕೃಷಿಗಾಗಿ ನೀರು ಕೇಳಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಸಮಸ್ಯೆಯ ಎದುರಾಗಿದೆ " ಎಂದು ರಾಜ್ಯದ ಅಧಿಕಾರಿಗಳು ವಾದಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದ ಪ್ರಸ್ತುತ ಪರಿಸ್ಥಿತಿ, ಜಲಾಶಯಗಳ ನೀರಿನ ಮಟ್ಟ ಹಾಗೂ ಬರದ ಸ್ಥಿತಿಗತಿಗಳ ಕುರಿತು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಆದರೂ ತಮಿಳುನಾಡು ತನ್ನ ಪಾಲಿನ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿದೆ.

ಇದಕ್ಕೆ ಪ್ರತಿಕ್ರೀಯಿಸಿದ ಕರ್ನಾಟಕ , ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಖಡಕ್ ನಿಲುವು ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ಬರ ಅಧ್ಯಯನ ತಂಡವನ್ನು ಕಳುಹಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ನಡುವೆ ನಡೆದ CWRC ಸಭೆ ಕಾವೇರಿ ನೀರು ವಿವಾದವನ್ನು ಮತ್ತೊಮ್ಮೆ ಮುನ್ನಡೆಗೆ ತಂದಿದೆ.

CWRC ಸಭೆಯಲ್ಲಿ ಕರ್ನಾಟಕದ ಖಡಕ್ ವಾದ - KRS ನಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ :

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ KRS ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಮತ್ತು ಬರ ಪರಿಸ್ಥಿತಿ ಮುಂದುವರೆದಿದ್ದು, ಜೂನ್ ತಿಂಗಳಲ್ಲಿ ಜಲಾಶಯಗಳಿಗೆ ಬಹುತೇಕ ಶೂನ್ಯ ಒಳಹರಿವು ದಾಖಲಾಗಿತ್ತು ಎಂದು ಕರ್ನಾಟಕ ಸಭೆಯಲ್ಲಿ ವಿವರಿಸಿದೆ. ಜುಲೈ ನಲ್ಲಿ ಕೆಲವೆಡೆ ಸ್ವಲ್ಪ ಮಳೆಯಾಗಿದ್ದರಿಂದ ಬರಿದಾಗಿದ್ದ ಜಲಾಶಯಗಳಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಮುಂಗಾರು ಮತ್ತೆ ಚುರುಕುಗಳು ಸ್ಪಷ್ಟ ಮುನ್ಸೂಚನೆ ಇಲ್ಲದ ಹಿನ್ನೆಲೆಯಲ್ಲಿ , ಪ್ರಸ್ತುತ ಇರುವ ನೀರನ್ನು ಮುಂದಿನ ಮಳೆಗಾಲದವರೆಗೆ ಕುಡಿಯುವ ನೀರಿನ ಅಗತ್ಯಕ್ಕಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಕರ್ನಾಟಕ ವಾದಿಸಿದೆ.

ರಾಜ್ಯದಲ್ಲಿ ಸಂಪೂರ್ಣ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಕೃಷಿಗೆ ನೀರು ಕೇಳುತ್ತಿದ್ದರು ಪರಿಸ್ಥಿತಿಯ ಕಾರಣದಿಂದ ನೀರು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಸಭೆಯಲ್ಲಿ ತಿಳಿಸಿದೆ. ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದರೂ ಕೃಷಿಗಾಗಿ ನೀರು ಕೇಳಲಾಗುತ್ತಿದೆ, ಆದರೆ ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ ಎಂದು ರಾಜ್ಯದ ಅಧಿಕಾರಿಗಳು ಹೇಳಿದ್ದಾರೆ.

ತಮಿಳುನಾಡು ತನ್ನ ಪಾಲಿನ ಕಾವೇರಿ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರೂ, ಕರ್ನಾಟಕಕ್ಕೆ ತಕ್ಷಣ ನೀರು ಬಿಡುವಂತೆ CWRC ಸಭೆಯಲ್ಲಿ ಯಾವುದೇ ಸ್ಪಷ್ಟ ನಿರ್ದೇಶನ ನೀಡಲಾಗಿಲ್ಲ ಎಂದು ತಿಳಿದುಬಂದಿದೆ.

CWRC ಸಭೆ ಮುಕ್ತಾಯದ ಬಳಿಕ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯ ಬೆಳವಣಿಗೆಗಳ ಕುರಿತು ಮಾಹಿತಿ ಪಡೆದರು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online