BELAGAVI NEWS:
ಹೈಕೋರ್ಟ್ ಸ್ಪಷ್ಟಪಡಿಸಿರುವುದೆನೆಂದರೆ ಜನಗಣತಿ ಒಂದು ಮಹತ್ವದ ರಾಷ್ಟ್ರೀಯ ಕಾರ್ಯವಾಗಿದ್ದು ದೇಶದ ಜನಸಂಖ್ಯೆ ಆರ್ಥಿಕ ಹಾಗೂ ಸಾಮಾಜಿಕ ಮಾಹಿತಿಗಳನ್ನು ಸಂಗ್ರಹಿಸಲು ಇದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಈ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ವಿವಿಧ ವಲಯಗಳ ಸಹಕಾರ ಅವಶ್ಯಕವಾಗಿದೆ.
ಅದರಂತೆ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯು ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಹೈಕೋರ್ಟ್ ಸೂಚಿಸಿದೆ. ಅವರು ಇದನ್ನು ವೈಯಕ್ತಿಕ ಅಥವಾ ಸಂಸ್ಥೆಯ ಹಿತಾಸಕ್ತಿಗಿಂತ ಮೇಲಾಗಿ ರಾಷ್ಟ್ರದ ಕರ್ತವ್ಯವಾಗಿ ಪರಿಗಣಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ಬೆಂಗಳೂರು: ಜನಗಣತಿ ಒಂದು ರಾಷ್ಟ್ರೀಯ ಕರ್ತವ್ಯವಾಗಿದ್ದು, ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಹೈಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಜೆಯಲ್ಲಿರುವ ಶಿಕ್ಷಕರನ್ನು ತಕ್ಷಣ ಕರ್ತವ್ಯಕ್ಕೆ ಹಿಂದಿರುಗಿಸಿ ಜನಗಣತಿ ಕಾರ್ಯದಲ್ಲಿ ಭಾಗಿಯಾಗುವಂತೆ ಬೆಂಗಳೂರು ನಗರದ ಖಾಸಗಿ ಶಾಲೆಯ ಪ್ರಾಂಶುಪಾಲರಿಗೆ ನ್ಯಾಯಾಲಯ ನಿರ್ಧೇಶನ ನೀಡಿದೆ. ಇದರ ಜೊತೆಗೆ, ಮುಂದಿನ ಒಂದು ವಾರದೊಳಗೆ ಎಲ್ಲಾ ಶಿಕ್ಷಕರನ್ನು ಕರ್ತವ್ಯಕ್ಕೆ ಹಾಜರು ಪಡಿಸಿ ಅವರು ಜನಗಣತಿ ಆಯುಕ್ತರ ಮುಂದೆ ವರದಿ ಮಾಡುವುದನ್ನು ಖಚಿತಪಡಿಸಬೇಕು ಎಂದು ಸೂಚಿಸಲಾಗಿದೆ. ಈ ಷರತ್ತನ್ನು ಪಾಲಿಸಿದರೆ ಶಾಲೆಯ ಪ್ರಾಂಶುಪಾಲರ ವಿರುದ್ಧ ಜನಗಣತಿ ಕಾಯ್ದೆಯ ಸೆಕ್ಷನ್ 11 ರ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿರುವ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಅಲ್ಲದೆ, ಸುಮಾರು 10 ರಿಂದ 11 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ. ಈ ವೇಳೆ ಪ್ರತಿಯೊಂದು ಮನೆಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಲಿಖಿತವಾಗಿ ದಾಖಲಿಸುವ ಪ್ರಕ್ರಿಯೆ ನಡೆಯಬೇಕಾಗುತ್ತದೆ. ಇಂತಹ ಪ್ರಮುಖ ಕಾರ್ಯದ ಸಮಯದಲ್ಲಿ ಶಾಲೆಯ ಮುಖ್ಯಸ್ಥರು ಈ ರೀತಿಯಾಗಿ ನಡೆದುಕೊಂಡರೆ ಸರ್ಕಾರ ಜನಗಣತಿ ಕಾರ್ಯವನ್ನು ಸಂಪೂರ್ಣಗೊಳಿಸುವುದು ಹೇಗೆ ಸಾಧ್ಯ? ಎಂದು ಹೈಕೋರ್ಟ್ ಪ್ರಶ್ನಿಸಿದೆ.
ಇದರ ಜೊತೆಗೆ ಮುಂದಿನ ವಿಚಾರಣೆ ವೇಳೆ ಅರ್ಜಿದಾರರ ಶಾಲೆಯಲ್ಲಿ ಲಭ್ಯವಿರುವ ಶಿಕ್ಷಕರ ಪಟ್ಟಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದ್ದು ವಿಚಾರಣೆಯನ್ನು ಮುಂದುಡಲಾಗಿದೆ.
ಶಾಲೆಯ ಶಿಕ್ಷಕರನ್ನು ಜನಗಣತಿ ಕಾರ್ಯಕ್ಕೆ ನಿಯೋಜನೆ ಮಾಡದ ಹಿನ್ನೆಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಪ್ರಧಾನ ಜನಗಣತಿ ಅಧಿಕಾರಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಜೆಪಿ ನಗರ 7ನೇ ಹಂತದಲ್ಲಿರುವ ದಿ ಬ್ರಿಗೇಡ್ ಶಾಲೆಯ ಪ್ರಾಂಶುಪಾಲ ಶುಭಾರ್ ಜೈನ್ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿಂದ ನ್ಯಾಯಪೀಠ ಈ ಸೂಚನೆ ನೀಡಿದೆ.
ಪ್ರಕರಣದ ಹಿನ್ನೆಲೆ: ದೇಶದಾದ್ಯಂತ ಮೊದಲ ಹಂತದ ಜನಗಣತಿ ಏಪ್ರಿಲ್ 1ರಿಂದ ಸ್ವಯಂ ಗತಿದೊಂದಿಗೆ ಪ್ರಾರಂಭವಾಗಿದ್ದು ಎರಡನೇ ಹಂತವಾಗಿ ಏಪ್ರಿಲ್ 16 ರಿಂದ ಗಣತಿದಾರರು ಮನೆ ಮನೆಗೆ ತೆರಳಿ ಕುಟುಂಬದ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಏಪ್ರಿಲ್ ಮತ್ತು ಸೆಪ್ಟೆಂಬರ್ 2026ರ ಅಂತ್ಯದೊಳಗೆ ಗಣತಿ ಕಾರ್ಯವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಇದರ ಮುಂದುವರೆದ ಭಾಗವಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಪ್ರಧಾನ ಜನಗಣತಿ ಅಧಿಕಾರಿ ಏಪ್ರಿಲ್ ಒಂಬತ್ತರಂದು ಅರ್ಜಿದಾರರ ಶಾಲೆಗೆ ಪತ್ರ ಬರೆದು ಶಾಲೆಯ ಸಿಬ್ಬಂದಿಯನ್ನು ಜನಗಣತಿ ಕಾರ್ಯಕ್ಕೆ ನಿಯೋಜಿಸಲು ಸೂಚಿಸಿದರು ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಅಲ್ಲದೆ, ಈಗಾಗಲೇ 12 ಮಂದಿ ಶಿಕ್ಷಕರನ್ನು ಜನಗಣತಿಗೆ ನಿಯೋಜಿಸಲಾಗಿದ್ದು ಈಗಾಗಲೇ ಕೆಲಸಕ್ಕೆ ವರದಿ ಮಾಡಿಕೊಂಡಿದ್ದಾರೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವುದಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ಆದ್ದರಿಂದ ಗಣತಿ ಅಧಿಕಾರಿ ಹೊರಡಿಸಿರುವ ಆದೇಶ ರದ್ದು ಮಾಡಬೇಕು ಎಂದು ಕೋರಿದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಶಾಲೆಯಲ್ಲಿರುವ 84 ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸಬಹುದಾಗಿದೆ. ಇನ್ನುಳಿದ ಶಿಕ್ಷಕರು ಬೇಸ್ ಕೆ ರಜೆ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ಪ್ರವಾಸದಲ್ಲಿದ್ದಾರೆ. ಶಿಕ್ಷಕರು ರಜೆ ಪಡೆಯುವುದಕ್ಕೆ ಅವಕಾಶ ಇರುವುದರಿಂದ ತಕ್ಷಣ ಹಿಂದಿರುಗುವಂತೆ ಸೂಚನೆ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಪೀಠಕ್ಕೆ ವಿವರಿಸಿದ್ದರು.
ಸರ್ಕಾರದ ಪರ ವಕೀಲರು ವಾದಿಸುತ್ತಾ ಎಷ್ಟು ಮನಿ ಶಿಕ್ಷಕರನ್ನು ಜನಗಣತಿ ಕಾರ್ಯಕ್ಕೆ ನಿಯೋಜಿಸಬೇಕು ಎಂಬುದನ್ನು ಸಂಬಂಧಿಸಿದ ನೋಟಿಸ್ ನಲ್ಲಿ ಸ್ಪಷ್ಟವಾಗಿ ವಿವರಿಸಲಾಗಿಲ್ಲ ಎಂದು ತಿಳಿಸಿದರು ಹೀಗಾಗಿ ಪ್ರಸ್ತುತ ಶಾಲೆಯಲ್ಲಿ ಎಷ್ಟು ಮಂದಿ ಶಿಕ್ಷಕರು ಲಭ್ಯರಿದ್ದಾರೆ ಎಂಬ ಮಾಹಿತಿಯನ್ನು ಸಲ್ಲಿಸುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು.
Also Read: