Belagavi News:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ನಡೆದ 'ಚಲೋ ಸಂಸದ್' ಪ್ರತಿಭಟನೆಯ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ, ಪೊಲೀಸರು ಮತ್ತು ಪ್ರತಿಭಟನಾ ಕಾರದ ನಡುವೆ ಹಲ್ಲುತೂರಾಟ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ ದಾಖಲಿಸಲು ನಿರ್ಧರಿಸಿದ್ದಾರೆ.
ಪ್ರತಿಭಟನೆಯ ವೇಳೆ ಕೆಲ ಪ್ರತಿಭಟನಾ ಕಾರರು ಪೊಲೀಸರತ್ತ ಹಲ್ಲು ಎಸೆದಿದ್ದು, ಈ ಘಟನೆಯಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಇದರ ನಡುವೆ, ಕೆಲವು ಪೊಲೀಸರು ಕೂಡ ಪ್ರತಿಭಟನಾಕಾರರದ್ದ ಕಲ್ಲು ಎಸೆಯುತ್ತಿರುವಂತೆ ಕಾಣುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ದ ನೈಜತೆ ಹಾಗೂ ಘಟನೆಯ ಸಂಪೂರ್ಣ ವಿವರಗಳ ಕುರಿತು ಅಧಿಕಾರಿಗಳಿಂದ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಗಳು ಹಾಗೂ ವೈರಲ್ ವಿಡಿಯೋಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸುವೆ. ದೆಹಲಿಯ ಹಲವು ಬಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಹೆಚ್ಚುವರಿ ಪೊಲೀಸರು ಪಡೆಗಳನ್ನು ನಿಯೋಜಿಸಲಾಗಿದೆ.
ಚಲೋ ಸಂಸದ್ ಪ್ರತಿಭಟನೆ - ಸಾವಿರಾರು ಪ್ರತಿಭಟನಾ ಕಾರರ ಜಮಾವಣೆ , ಮಧ್ಯ ದೆಹಲಿಯಲ್ಲಿ ಬಿಗಿ ಭದ್ರತೆ :
'ಚಲೋ ಸಂಸದ್' ಮೆರವಣಿಗೆಗೆ ಸಾವಿರಾರು ಪ್ರತಿಭಟನಾಕಾರರು ಜವಾಯಿಸಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯು ಮಧ್ಯ ದೆಹಲಿಯಾದ್ಯಂತ ಭದ್ರತೆಯನ್ನು ಅಭೂತಪೂರ್ವವಾಗಿ ಬಿಗಿಗೊಳಿಸಲಾಯಿತು. ಸಂಸತ್ ಭವನ, ಜನತಾ ಮಂತರ್ ಹಾಗೂ ಪ್ರಮುಖ ಸರ್ಕಾರಿ ಕಚೇರಿಗಳ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅರೈಸಣಿಕ ಪಡೆಗಳನ್ನು ನಿಯೋಜಿಸಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಲವು ಪ್ರದೇಶಗಳಲ್ಲಿ ಸಂಚಾರದ ಮೇಲೂ ನಿಬಂಧ ಹೇರಲಾಗಿದ್ದು, ಭದ್ರತಾ ತಪಾಸಣೆಗಳನ್ನು ತೀವ್ರಗೊಳಿಸಲಾಗಿತ್ತು.
ಮೆರವಣಿಗೆಯಲ್ಲಿ ಕಲ್ಲು ತೂರಾಟ - ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್, ಭಾರಿ ಪೊಲೀಸ್ ಬಂದೋಬಸ್ತ್ - ಕಾನೂನು ಕ್ರಮ ಆರಂಭ :
ಮೆರವಣಿಗೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಯ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೆಡ್ ಗಳನ್ನು ಅಳವಡಿಸಿ, ಭಾರಿ ಪ್ರಮಾಣದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು. ಭದ್ರತೆಯನ್ನು ಬಿಗಿಗೊಳಿಸಿದರು ಮೆರವಣಿಗೆಯ ವೇಳೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ಕೆಲ ಕಾಲ ಉದ್ವಿಗ್ನಗೊಂಡಿದೆ.
ಘಟನೆಯ ಬಳಿಕ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಕಾನೂನು ವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿ ಕೊಡದಂತೆ ಮನವಿ ಮಾಡಲಾಗಿದೆ.
ಕಲ್ಲು ದೂರಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸಿ ಆರೋಪಿಗಳನ್ನು ಗುರುತಿಸಿ ಕಾರ್ಯ ಕೈಗೊಂಡಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಪ್ಡೇಟ್ಗಳಿಗಾಗಿ ನಮ್ಮೊಂದಿಗೆ ಸಂಪರ್ಕದಲ್ಲಿರಿ.