<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಉರ್ದು ಶಾಲೆಗಳ ಸಮಯದಲ್ಲಿ ಬದಲಾವಣೆ : ಕರ್ನಾಟಕ ಸರ್ಕಾರ ನಿರ್ಧಾರ

ಉರ್ದು ಶಾಲೆಗಳ ಸಮಯದಲ್ಲಿ ಬದಲಾವಣೆ : ಕರ್ನಾಟಕ ಸರ್ಕಾರ ನಿರ್ಧಾರ
Summary: ಕರ್ನಾಟಕದಲ್ಲಿ ಉರ್ದು ಮಾಧ್ಯಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ನಿರ್ಧಾರಕ್ಕೆ ಕಾರಣವೇನು? ಶಿಕ್ಷಣ ಇಲಾಖೆ ಯಾಕೆ ಈ ಮಹತ್ವದ ತೀರ್ಮಾನಕೈಗೊಂಡಿದೆ ಎಂಬುದರ ಕುರಿತು ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರಲ್ಲಿ ಹಲವು ಪ್ರಶ್ನೆಗಳು ಉದ್ಭವಿಸಿವೆ.

belagavi news:

ಶಾಲಾ ಸಮಯ ಬದಲಾವಣೆಯ ಹಿನ್ನೆಲೆ ಅದರ ಉದ್ದೇಶ ವಿದ್ಯಾರ್ಥಿಗಳ ಮೇಲಿನ ಪರಿಣಾಮ ಹಾಗೂ ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಹೊಸ ಅವಧಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಉರ್ದು ಶಾಲೆಗಳ ಅವಧಿ ಬದಲಾವಣೆ ಶಿಕ್ಷಣ ಸಂಸ್ಥೆಗೆ ಹೇಗೆ ಸಹಕಾರಿಯಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ವರದಿಯನ್ನು ಓದಿ.

2025 - 26ನೇ ಶೈಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಸಹಕಾರಿ ಅನುದಾನಿತ ಹಾಗೂ ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ ಹಿರಿಯ ಮತ್ತು ಪ್ರೌಢಶಾಲೆ ಗಳ ಶಾಲಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಮಹತ್ವದ ನಿರ್ಧಾರಕ್ಕೆ ಸಂಬಂಧಿಸಿದಂತೆ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ.

ಈ ಹೊಸ ಆದೇಶದಂತೆ ರಾಜ್ಯದ ಉರ್ದು ಶಾಲೆಗಳ ದಿನನಿತ್ಯದ ಅವಧಿ (School Timing) ಪರಿಷ್ಕರಣೆಗೊಳಪಡಿಸಲ್ಪಟ್ಟಿದು. ಇದು ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರಿಗೆ ನೇರ ಪರಿಣಾಮ ಬೀರುವ ನಿರ್ಧಾರವಾಗಿದೆ. ಶಿಕ್ಷಣ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಈ ಬದಲಾವಣೆ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

Sponsored

ಹಾಗಾದರೆ 2025 26 ಶೈಕ್ಷಣಿಕ ಸಾಲಿನ ಹೊಸ ಉರ್ದು ಶಾಲೆಗಳ ವೇಳಾಪಟ್ಟಿ ಹೇಗಿದೆ? ಯಾವ ಸಮಯದಿಂದ ಯಾವ ಸಮಯದವರೆಗೆ ತರಗತಿಗಳು ನಡೆಯಲಿವೆ? ಎಂಬ ಸಂಪೂರ್ಣ ಇವರ ವನ್ನು ಈ ಕೆಳಗಿನ ನೀಡಲಾಗಿದೆ, ಮುಂದಿನ ಮಾಹಿತಿಗಾಗಿಯು ಓದುವುದನ್ನು ಮುಂದುವರಿಸಿ.

ಬೆಂಗಳೂರು (ಫೆಬ್ರುವರಿ 2): ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ (Ramzan Festival) ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯದಲ್ಲಿ ಪರಿಷ್ಕರಣೆ ಮಾಡಲಾಗಿದೆ. ರಂಜಾನ್ ತಿಂಗಳ ಅವಧಿಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಅನುಕುಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹೊಸ ಆದೇಶದ ಪ್ರಕಾರ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಬೆಳಿಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ಮಾತ್ರ ತರಗತಿ ನಡೆಯಲಿವೆ. ಈ ಬಗ್ಗೆ ಉರ್ದು ಮತ್ತು ಇತರೆ ಅಲ್ಪಸಂಖ್ಯಾತರ ಭಾಷ ಶಾಲೆಗಳ ನಿರ್ದೇಶನಾಲಯ ಅಧಿಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಎಲ್ಲ ಸಂಬಂಧಿತ ಶಾಲೆಗಳು ಈ ಹೊಸ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಅನುಸರಿಸಬೇಕಾಗಿದೆ.

ಈ ಶಾಲಾ ಸಮಯ ಬದಲಾವಣೆಯ ರಂಜಾನ್ ತಿಂಗಳಲ್ಲಿ ಉಪವಾಸ ಆಚರಿಸುವ ವಿದ್ಯಾರ್ಥಿಗಳು ಈ ಶಿಕ್ಷಕರ ಆರೋಗ್ಯ ಮತ್ತು ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ ಎಂದು ತಿಳಿಸಲಾಗಿದೆ.

Sponsored

ಬೆಳಗ್ಗೆ 8 ರಿಂದ ಮಧ್ಯಾಹ್ನ 12:45 ರವರೆಗೆ ತರಗತಿ:

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸುತ್ತಿರುವ ಅಧಿಕೃತ ಸುತ್ತೋಲೆಯ ಪ್ರಕಾರ, ಕರ್ನಾಟಕ ರಾಜ್ಯದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಪರಿಷ್ಕೃತ ಶಾಲಾ ಸಮಯ ಅನ್ವಯವಾಗಲಿದೆ. ಈ ಹೊಸ ವೇಳಾಪಟ್ಟಿ ರಂಜಾನ್ ತಿಂಗಳು ಆರಂಭವಾಗುವ ದಿನದಿಂದ 2026 ಮಾರ್ಚ್ 20ರವರೆಗೆ ಜಾರಿಯಲ್ಲಿ ಇರಲಿದೆ.

ಪರಿಷ್ಕೃತ ಆದೇಶದಂತೆ, ಉರ್ದು ಮಾಧ್ಯಮ ಶಾಲೆಗಳು ಬೆಳಗ್ಗೆ 8:00 ಯಿಂದ ಮಧ್ಯಾಹ್ನ 12:45 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಸಾಮಾನ್ಯ ದಿನಗಳಲ್ಲಿ ಈ ಶಾಲೆಗಳು ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20 ರವರೆಗೆ ನಡೆಯುತ್ತಿದ್ದವು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಪರಿಗಣಿಸಿ ಹಾಗೂ 2002ರಲ್ಲಿ ಜಾರಿಯಲ್ಲಿದ್ದ ಹಳೆಯ ಆದೇಶವನ್ನು ಪುನರ ಪರಿಶೀಲಿಸಿದ ನಂತರ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ರಂಜಾನ್ ತಿಂಗಳಲ್ಲಿ ವಿದ್ಯಾರ್ಥಿಗಳು ಈ ಶಿಕ್ಷಕರ ಆರೋಗ್ಯ ಹಾಗೂ ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಈ ಶಾಲಾ ಸಮಯ ಬದಲಾವಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Sponsored

2025- 26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ ಹಿರಿಯ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿಯ ವೇಳಾಪಟ್ಟಿಯನ್ನು ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಈ ಪರಿಷ್ಕೃತ ವ್ಯವಸ್ಥೆ ರಂಜಾನ್ ತಿಂಗಳು ಆರಂಭವಾಗುವ ದಿನಾಂಕದಿಂದ 20-03-2026 ರವರೆಗೆ ಮಾತ್ರ ಜಾರಿಯಲ್ಲಿ ಇರಲಿದೆ ಎಂದು ಅಧಿಕೃತ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಶಾಲೆಗಳ ಕಾರ್ಯಾವಧಿ ಕಡಿಮೆಯಾಗುವ ಹಿನ್ನೆಲೆಯಲ್ಲಿ, ಕಳೆದುಹೋಗುವ ಪಾಠ ಮತ್ತು ಕೆಲಸದ ಸಮಯವನ್ನು ಇತರೆ ರಜಾ ದಿನಗಳಲ್ಲಿ ಶಾಲೆಗಳನ್ನು ಕಾರ್ಯನಿರಯಿಸುವ ಮೂಲಕ ಸರಿದೂಗಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ಇದಲ್ಲದೆ, ರಾಜ್ಯದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ರಂಜಾನ್ ತಿಂಗಳಲ್ಲಿ ಉಪವಾಸ ವ್ರತ ಆಚರಿಸುವ ಕಾರಣ ಅವರಿಗೆ ಪ್ರತಿದಿನ ಸಂಜೆ ಅರ್ಧ ಗಂಟೆ ಮುಂಚಿತವಾಗಿ ಶಾಲೆಯಿಂದ ತೆರೆಯಲು ಅನುಮತಿ ನೀಡಬಹುದಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಆದರೆ 2025 26ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಪರೀಕ್ಷೆಗಳು ನಿಗದಿಟ್ಟ ಪರೀಕ್ಷಾ ವೇಳಾಪಟ್ಟಿಯಂತೆಲೇ ನಡೆಸಬೇಕು ಎಂದು ಸೂಚಿಸಲಾಗಿದೆ. ಜೊತೆಗೆ, 2025 26ನೇ ಸಾಲಿಗೆ ನಿಗದಿಪಡಿಸಿರುವ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳು ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಶಿಕ್ಷಣಿ ಇಲಾಖೆ ಸ್ಪಷ್ಟಪಡಿಸಿದೆ.

Sponsored

ಈ ನಿರ್ಧಾರವು ರಂಜಾನ್ ತಿಂಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಧಾರ್ಮಿಕ ಆಚರಣೆಗಳಿಗೆ ಗೌರವ ನೀಡುವ ಜೊತೆಗೆ ಶಿಕ್ಷಣ ಕಾರ್ಯದಲ್ಲಿ ಸಮತೋಲನ ಕಾಪಾಡುವ ಉದ್ದೇಶದಿಂದ ಕೈಗೊಳ್ಳಲಾಗಿದೆ.

ಬಿಜೆಪಿ ಆಕ್ಷೇಪಕ್ಕೆ ಗೃಹ ಸಚಿವ ತಿರುಗೇಟು:

ಉರ್ದು ಮಾಧ್ಯಮ ಶಾಲೆಗಳ ವೇಳಾಪಟ್ಟಿ, ಪರಿಷ್ಕರಣೆ ಕುರಿತು ಭಾರತೀಯ ಜನತಾ ಪಕ್ಷ (ಬಿಜೆಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರವು ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದೆ. ಯಾವುದೇ ಹಿಂದೂ ಹಬ್ಬಗಳ ಸಂದರ್ಭದಲ್ಲೂ ಸರ್ಕಾರ ಇದೇ ರೀತಿಯ ಕ್ರಮ ಕೈಗೊಳ್ಳುತ್ತದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್ ಇದು ಅಲ್ಪಸಂಖ್ಯಾತರ ಓಲೈಕೆಯ ಪ್ರಶ್ನೆಯೇ ಅಲ್ಲ ಎಂದು ಸ್ಪಷ್ಟಪಡಿಸಿದರು. ಸಂವಿಧಾನದಲ್ಲಿ ಎಸ್ಸಿ /ಎಸ್ಟಿ ಸಮುದಾಯಗಳಿಗೆ ಮೀಸಲಾತಿ ನೀಡಿರುವುದು ಹಾಗೂ ಹಿಂದುಳಿದ ವರ್ಗಗಳನ್ನು ಪರಿಗಣಿಸುವುದು ಅವರನ್ನು ಇತರರಿಗೆ ಸಮಾನರನ್ನಾಗಿ ಮಾಡುವ ಎಂಬ ಉದ್ದೇಶದಿಂದಲೇ ಎಂದು ಅವರು ಹೇಳಿದರು.

Sponsored

" ಸಾವಿರಾರು ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತಲು ಇತಹ ಪ್ರೋತ್ಸಾಹ ಅಗತ್ಯ. ಉರ್ದು ಮಾಧ್ಯಮದ ಮಕ್ಕಳು ಇತರ ಮಕ್ಕಳೊಂದಿಗೆ ಸಮಾನವಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ರೀತಿಯ ಸಣ್ಣ ಪ್ರೋತ್ಸಾಹ ನೀಡುತ್ತಿದೆ."ಎಂದು ಗೃಹ ಸಚಿವರು ಹೇಳಿದರು.

ಇಂತಹ ಕ್ರಮಗಳನ್ನು ಸಹಿಸದವರು ಸಮಾನತೆಯ ವಿರೋಧಿಗಳೆಂದು ಅರ್ಥವಾಗುತ್ತದೆ ಎಂದು ಬಿಜೆಪಿ ಟೀಕೆಗೆ ಬೃಹ ಸಚಿವ ಪರಮೇಶ್ವರ್ ತೆರಿಗೇಟು ನೀಡಿದರು ಕಾರಣವಾಗಿದೆ.

ಇನ್ನಷ್ಟು ಓದಿರಿ:

ವಿಟಿಯು ಘಟಿಕೋತ್ಸವ: "ತಂತ್ರಜ್ಞಾನ ಮಾನವ ಸಮಸ್ಯೆಗಳಿಗೆ ಪರಿಹಾರವಾಗಲಿ" - ನೌಕಾ ಅಧಿಕಾರಿ

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online