<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಚೆನ್ನಮ್ಮ ಅಂತಿಮ ಯಾತ್ರೆ ಇಂದು : ಬೆಂಗಳೂರಿನಿಂದ ಹೊಳೆನರಸಿಂಪುರದವರೆಗೆ ಭಾವಪೂರ್ಣ ಬೀಳ್ಕೊಡುಗೆ

ಚೆನ್ನಮ್ಮ ಅಂತಿಮ ಯಾತ್ರೆ ಇಂದು : ಬೆಂಗಳೂರಿನಿಂದ ಹೊಳೆನರಸಿಂಪುರದವರೆಗೆ ಭಾವಪೂರ್ಣ ಬೀಳ್ಕೊಡುಗೆ
Summary: Chief Minister DK Shivakumar and former Chief Minister Siddaramaiah paid their last respects to Chennamma's mortal remains at her Padmanabhanagar residence and expressed their condolences to former Prime Minister H.D. Deve Gowda. The final yatra will begin from Bengaluru to Holenarasimpura at 11:05 am, and the public will be allowed to have their last darshan.

belagavi news :

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ್ ಅವರ ಪತ್ನಿ ಚೆನ್ನಮ್ಮ ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಬೆಂಗಳೂರಿನ ಪದ್ಮನಾಭನಗರದಲ್ಲಿ ವ್ಯವಸ್ಥೆ ಮಾಡಲಾಗಿದೆ. ದೇವೇಗೌಡ ಅವರ ನಿವಾಸದ ಸಮೀಪದ ಮೈದಾನದಲ್ಲಿ ಇಂದು ಬೆಳಗ್ಗೆ 11 ಗಂಟೆಯವರೆಗೆ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಬೆಳಗ್ಗೆ 11:05 ಕ್ಕೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆ ನರಸಿಂಹಪುರ ದತ್ತ ಅಂತಿಮ ಯಾತ್ರೆ ಆರಂಭವಾಗಲಿದೆ. ಬಳಿಕ ಪಾರ್ಥಿವ ಶರೀರವನ್ನು ರೇವಣ್ಣ ಅವರ ನಿವಾಸಕ್ಕೆ ಕೊಂಡೊಯ್ಯಲಾಗುವುದು.

ಸೋಮವಾರ ಬೆಳಗ್ಗೆ 7ರಿಂದ 9:30ರವರೆಗೆ ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ಹಾಸನದ ಮಾವಿನಕೆರೆ ಸಮೀಪದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕುಟುಂಬದವರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು, ಗಣ್ಯರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಸಂತಾಪ ಸೂಚಿಸಿದ್ದು, ಅಂತಿಮ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಇದೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಇಂದು ಬೆಳಿಗ್ಗೆ 11:05 ಬೆಂಗಳೂರಿನ ಪದ್ಮನಾಮ ನಾಮ ನಗರದಿಂದ ಹಾಸನ ಜಿಲ್ಲೆಯ ಹೊಳೆನರಸಿಂಪುರದತ್ತ ಆರಂಭವಾಗಲಿದೆ. ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ರಸ್ತೆ ಮಾರ್ಗವಾಗಿ ಕೊಂಡೊಯ್ಯಲಾಗುತ್ತಿದ್ದು, ಮಾರ್ಗದುದ್ದಕ್ಕೂ ಸಾವಿರಾರು ಅಭಿಮಾನಿಗಳು ಮತ್ತು ಸಾರ್ವಜನಿಕರು ಅಂತಿಮ ನಮನ ಸಲ್ಲಿಸುವ ನಿರೀಕ್ಷೆ ಇದೆ.

ಅಂತಿಮ ಯಾತ್ರೆಯು ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕುದುಬಳ್ಳಿ ಕ್ರಾಸ್, ಕಿರಿಸಾವೆ, ಚನ್ನರಾಯಪಟ್ಟಣ, ಎಲೆಯೂರು, ಹಾಸನ ಡೈರಿ ಸರ್ಕಲ್, ಭೂನಳ್ಳಿ ಕ್ರಾಸ್, ಶಾಂತಿ ಹಾಗೂ ಗ್ರಾಮ ಎನ್.ಆರ್.ಸರ್ಕಲ್ ಮೂಲಕ ಮೊಸಳೆ ಹೊಸಳ್ಳಿಗೆ ತಲುಪಲಿದೆ. ಬಳಿಕ ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೋಮವಾರ ಬೆಳಗ್ಗೆ 7 ರಿಂದ 9: 30 ರವರೆಗೆ ಜನರು ಅಂತಿಮ ನಮನ ಸಲ್ಲಿಸಬಹುದು.

ಇದಾದ ನಂತರ ಹಾಸನದ ಮಾವಿನಕಾಯಿ ಸಮೀಪದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, "ದೇಶದ ಮಾಜಿ ಪ್ರಧಾನಿಯ ಧರ್ಮ ಪತ್ನಿ ಹಾಗೂ ಕೇಂದ್ರ ಸಚಿವರು ತಾಯಿ ಎಂಬುದನ್ನು ಪರಿಗಣಿಸಿ ಚೆನ್ನಮ್ಮ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಸರ್ಕಾರ ತೀರ್ಮಾನಿಸಿದೆ" ಎಂದು ತಿಳಿಸಿದ್ದಾರೆ.

ಇದೇ ವೇಳೆ, ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲೂ ಚೆನ್ನಮ್ಮ ಅವರಿಗೆ ಗೌರವ ನಮನ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ. ಅವರ ನಿಧನಕ್ಕೆ ರಾಜ್ಯದ ರಾಜಕೀಯ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದು, ಅಂತಿಮ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪಕ ಸೂಚಿಸುತ್ತಿದ್ದು, ಶನಿವಾರ ರಾತ್ರಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ ಪಾರ್ತಿವ ಶರೀರದ ಅಂತಿಮ ದರ್ಶನ ಪಡೆದರು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ಪತ್ನಿ ಸಮೇತರಾಗಿ ದೇವೇಗೌಡರ ನಿವಾಸಕ್ಕೆ ಆಗಮಿಸಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪಕ್ಕದಲ್ಲಿ ಕೆಲಕಾಲ ಕುಳಿತು ಮಾತುಕತೆ ನಡೆಸಿದ ಅವರು, ಕುಟುಂಬದವರಿಗೆ ಸಾಂತ್ವನ ಹೇಳಿ ದುಃಖದಲ್ಲಿ ಭಾಗಿಯಾದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, "ಚೆನ್ನಮ್ಮ ಅವರು ರಾಜ್ಯದ ದೊಡ್ಡ ರಾಜಕೀಯ ಕುಟುಂಬದ ಜೊತೆ ನಿಂತು ಸೇವೆ ಸಲ್ಲಿಸಿದ ತಾಯಿ. ಈ ಲೋಕದಲ್ಲಿ ಯಾರು ಶಾಶ್ವತವಲ್ಲ. ಕುಟುಂಬವು ಇಂದು ಒಂದು ಧೀಮಂತ ಮಹಿಳೆಯನ್ನು ಕಳೆದುಕೊಂಡಿದೆ. ಅವರ ಬದುಕು ಸಮಾಜಕ್ಕೆ ಮಾದರಿಯಾಗಿದೆ. ಸೋಮವಾರ ಹಾಸನದಲ್ಲಿ ನಡೆಯಲಿರುವ ಅಂತ್ಯ ಸಂಸ್ಕಾರದಲ್ಲಿ ನಾವೆಲ್ಲರೂ ಭಾಗವಹಿಸುತ್ತೇವೆ. ಈ ದುಃಖವನ್ನು ಬರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಚೆನ್ನಮ್ಮ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ದೇವೇಗೌಡ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದರು.

ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸುತ್ತಿದ್ದು, ರಾಜ್ಯಾದ್ಯಂತ ಸಂತಾಪದ ವಾತಾವರಣ ನಿರ್ಮಾಣವಾಗಿದೆ.

ಈ ವೇಳೆ ಭಾವುಕರಾಗಿದ್ದ ಎಚ್.ಡಿ.ದೇವೇಗೌಡ ಅವರ ಪಕ್ಕದಲ್ಲಿ ಕೆಲಕಾಲ ಕುರಿತು ಸಾಂತ್ವನ ಹೇಳಿದ ಸಿದ್ದರಾಮಯ್ಯ, ದೇವೇಗೌಡರ ಭುಜದ ಮೇಲೆ ಕೈ ಇಟ್ಟು ಧೈರ್ಯ ತುಂಬಿದರು. ಬಳಿಕ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ದುಃಖದಲ್ಲಿ ಭಾಗಿಯಾದರು.

ಚೆನ್ನಮ್ಮ ಅವರ ಅಂತಿಮ ದರ್ಶನಕ್ಕೆ ಹಲವು ರಾಜಕೀಯ ನಾಯಕರು, ಸಚಿವರು ಹಾಗೂ ಗಣ್ಯರು ಆಗಮಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವ ಕೃಷ್ಣ ಬೈರೇಗೌಡ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಸಚಿವರಾದ ಚೆಲುವರಾಯಸ್ವಾಮಿ ಮತ್ತು ಜಮೀರ್ ಅಹ್ಮದ್ ಖಾನ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ ದೇವೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳಿದರು.

85 ವರ್ಷದ ಚನ್ನಮ್ಮ ಅವರು ಶನಿವಾರ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ನಿಧನರಾದರು. ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಬುದುವಾರ ರಾತ್ರಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶನಿವಾರ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರಾಗಿ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆ ಎಳೆದರು.

ಚೆನ್ನಮ್ಮ ಅವರ ನಿಧನದಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತಮ್ಮ ಜೀವನ ಸಂಗಾತಿಯನ್ನು ಕಳೆದುಕೊಂಡಿದ್ದು, ಕುಟುಂಬದ ಮೇಲೆ ದುಃಖದ ಛಾಯೆ ಆವರಿಸಿದೆ. ಅವರ ಅಗಲಿಕೆಗೆ ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ವಲಯಗಳಿಂದ ವ್ಯಾಪಕ ಸಂತಾಪ ವ್ಯಕ್ತವಾಗಿದ್ದು, ಅಂತಿಮ ದರ್ಶನಕ್ಕಾಗಿ ಪದ್ಮನಾಭನಗರ ನಿವಾಸಕ್ಕೆ ಜನಸಾಗರ ಹರಿದು ಬಂದಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online