balagavi news:
ಚಿಕ್ಕಮಗಳೂರು: ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಸೀರೆಯ ಹಗ್ಗ ಸುತ್ತಿಕೊಂಡು 14 ವರ್ಷದ ಬಾಲಕಿ ದುರ್ಮರಣ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಟ್ಟಗೆರೆ ಸಮೀಪದ ಕಲ್ಲೊಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೃತ ಬಾಲಕಿಯನ್ನು ಸಪ್ತಮಿ (14) ಎಂದು ಗುರುತಿಸಲಾಗಿದೆ.
ಸಪ್ತಮಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಅಜ್ಜಿಯ ಮನೆಗೆ ಬಂದಿದ್ದಳು. ಮನೆಯ ಅಟ್ಟದ ಮೇಲೆ ಆಟವಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಅಟ್ಟದಿಂದ ಏಣಿಯ ಮೂಲಕ ಕೆಳಗೆ ಇಳಿಯುವ ಸಂದರ್ಭ ಏಣಿಗೆ ಕಟ್ಟಿದ್ದ ಸೀರೆ ಹಗ್ಗ ಆಕೆಯ ಕುತ್ತಿಗೆಗೆ ಸುತ್ತಿಕೊಂಡು ಆಕಸ್ಮಿಕವಾಗಿ ಬಿಗಿದು ಕೊಂಡಿದೆ.
ತಕ್ಷಣ ಕುಟುಂಬದವರು ಹಾಗೂ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಸಪ್ತಮಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಬಾಲಕಿಯ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದ್ದು , ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆ ಕುರಿತು ಸ್ಥಳೀಯ ಪೊಲೀಸರು ಪರಿಶೀಲನೆ ಆರಂಭಿಸಿದ್ದಾರೆ.
ಘಟನಾ ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಇಂದು ಆಕಸ್ಮಿಕ ದುರ್ಘಟನೆ ಎಂದು ತಿಳಿದುಬಂದಿದೆ. ಬೇಸಿಗೆ ರಜೆಗೆ ಸಂತಸದಿಂದ ಅಜ್ಜಿ ಮನೆಗೆ ಬಂದಿದ್ದ ಬಾಲಕಿ ಇಂತಹ ದುರ್ಘಟನೆಯಲ್ಲಿ ಸಾವನ್ನಪ್ಪಿರುವುದು ಎಲ್ಲರ ಮನ ಕಲಕುವಂತಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕಿ ಸಪ್ತಮಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಶೃಂಗೇರಿ ಠಾಣಾಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಆಕಸ್ಮಿಕ ಘಟನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯ ಅಟ್ಟದಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆ ಹಗ್ಗ ಸುತ್ತಿಕೊಂಡು ಪರಿಣಾಮ ಬಾಲಕಿ ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಲ್ಲಿ ಸ್ಪಷ್ಟವಾಗಿದೆ. ಮೃತ ಸಪ್ತಮಿ ಮರ್ಕಲ್ ಗ್ರಾಮದ ಕೋಗಿನ ಬೈಲು ನಿವಾಸಿಯಾಗಿದ್ದು , ಬೇಸಿಗೆ ರಜೆ ಹಿನ್ನೆಲೆ ತಾಯಿಯೊಂದಿಗೆ ಅಜ್ಜ - ಅಜ್ಜಿಯ ಮನೆಗೆ ಬಂದಿದ್ದರು.
ಅಟ್ಟಕ್ಕೆ ಏರಿಳಿಯಲು ಬಳಸಲಾಗುತ್ತಿದ್ದ ನೈಲಾದ್ ಸೀರೆಯಿಂದ ಮಾಡಿದ ಹಗ್ಗವನ್ನು ಹಿಡಿದು ಕೆಳಕ್ಕೇ ಇಳಿಯುವ ವೇಳೆ ಕಾಲು ಜಾರಿ ಹಗ್ಗ ಕುತ್ತಿಗೆಗೆ ಸುತ್ತಿಕೊಂಡಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬದವರ ತಕ್ಷಣ ಬಾಲಕಿಯನ್ನು ಶೃಂಗೇರಿ ಸರ್ಕಾರ ಆಸ್ಪತ್ರೆಗೆ ದಾಖಲಿಸಿದರು, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಪ್ತಮಿ ಮೃತಪಟ್ಟಿದ್ದಾಳೆ.
ಬಾಲಕಿಯ ತಂದೆ ಗಜೇಂದ್ರ ನೀಡಿದ ದೂರಿನ ಮೇರೆಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Also Read:
ದರ್ಶನ ಬೇಟಿಯಾದ ವಿಜಯಲಕ್ಷ್ಮಿ : ವಿವಾಹ ವಾರ್ಷಿಕೋತ್ಸವದ ದಿನದ ವಿಶೇಷ ಬೆಳವಣಿಗೆ