<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಕಾಂಗ್ರೆಸ್ ಸಚಿವ ಸಂಪುಟ ಕಸರತ್ತು ತೀವ್ರ : ರಾಹುಲ್ ಜೊತೆ ಇಂದು ನಿರ್ಣಾಯಕ ಸಭೆ

ಕಾಂಗ್ರೆಸ್ ಸಚಿವ ಸಂಪುಟ ಕಸರತ್ತು ತೀವ್ರ : ರಾಹುಲ್ ಜೊತೆ ಇಂದು ನಿರ್ಣಾಯಕ ಸಭೆ
Summary: Even before Deputy Chief Minister DK Shivakumar's oath-taking, the activities of Karnataka Congress leaders in Delhi are in full swing.

belagavi news :

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ . ಜೂನ್ ಮೂರರಂದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿಕೆ ಶಿವಕುಮಾರ್, ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಸಚಿವ ಸಂಪುಟ ರಚನೆಗೆ ವೇಗ ನೀಡಿದ್ದಾರೆ. ಹೊಸ ಸಚಿವ ಸಂಪುಟದ ಅಂತಿಮ ರೂಪರೇಷ ಸಿದ್ದುಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಮಹತ್ವದ ಸಭೆಗಳನ್ನು ನಡೆಸುತ್ತಿದ್ದಾರೆ.

ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿ ಪರಮೇಶ್ವರ್ ಹಾಗೂ ಕೆಜೆ ಜಾರ್ಜ್ ಸೇರಿದಂತೆ ಪ್ರಮುಖ ನಾಯಕರು ರಾಷ್ಟ್ರ ರಾಜಧಾನಿಗೆ ತೆರಳಿ ಸಂಪುಟ ರಚನೆ, ಖಾತೆಗಳ ಹಂಚಿಕೆ ಹಾಗೂ ಸಚಿವ ಸ್ಥಾನಗಳ ಬಗ್ಗೆ ಚರ್ಚಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ಕರ್ನಾಟಕ ನಡೆದ ಸಭೆಯಲ್ಲಿ ಸಚಿವ ಸ್ಥಾನಕ್ಕೆ ಪರಿಗಣಿಸಲಾಗುತ್ತಿರುವ ನಾಯಕರ ಕುರಿತು ಸಮಾಲೋಚನೆ ನಡೆದಿದೆ ಎನ್ನಲಾಗಿದೆ.

ಇದೇ ವೇಳೆ, ಹೊಸ ಸಚಿವ ಸಂಪುಟದಲ್ಲಿ ತಮ್ಮ ಬೆಂಬಲಿಗರಿಗೆ ಅವಕಾಶ ಕಲ್ಪಿಸಲು ಸಿದ್ದರಾಮಯ್ಯ, ಶಿವಕುಮಾರ್ ಹಾಗೂ ಖರ್ಗೆ ಬಣಗಳು ತೀವ್ರ ಲಾಭ ನಡೆಸುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಹಲವರು ಕಾದು ಕುಳಿತಿದ್ದು, ವಿಧಾನ ಪರಿಷತ್ ಸದಸ್ಯ ಯತಿಂದ್ರಾ ಸಿದ್ದರಾಮಯ್ಯ ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಹೈಕಮಾಂಡ್ ಅಂತಿಮ ನಿರ್ಧಾರ ಯಾವತ್ತಾಗಲಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಬಾರಿ ಕುತೂಹಲ ಮನೆ ಮಾಡಿದೆ.

ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಯತಿಂದ್ರ ಸ್ಥಾನ ಪಡೆಯುವ ಭರವಸೆ ಇದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕತ್ವದೊಂದಿಗಿನ ತಮ್ಮ ಸಭೆಯಲ್ಲಿ ಈ ಬಗ್ಗೆ ತಮಗೆ ತಿಳಿಸಲಾಗಿತ್ತು ಎಂದು ಸಿದ್ದರಾಮಯ್ಯ ಪುತ್ರ ತಿಳಿಸಿದ್ದಾರೆ.

ಕರ್ನಾಟಕದ ಹೊಸ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ದೆಹಲಿಯಲ್ಲಿ ತೀವ್ರಗೊಂಡಿವೆ. ಕಾಂಗ್ರೆಸ್ ನಾಯಕರು ಸಚಿವರ ಸಂಪುಟದ ಅಂತಿಮ ರೂಪರೇಷೆ ಸಿದ್ಧಪಡಿಸಲು ಹೈಕಮಾಂಡ್ ಜೊತೆ ನಿರಂತರ ಸಮಾಲೋಚನೆ ನಡೆಸುತ್ತಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಇದು ಮಹತ್ವದ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ ಅವರು ನಿನ್ನೆ ದೆಹಲಿಗೆ ತಡವಾಗಿ ಹಿಂದಿರುಗಿದ್ದರಿಂದ ಕರ್ನಾಟಕ ನಾಯಕರಿಗೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸಚಿವ ಸಂಪುಟದ ಅಂತಿಮ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ಮಂಗಳವಾರ ಬೆಳಿಗ್ಗೆ ಉನ್ನತ ಮಟ್ಟದ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೇ ವೇಳೆ, ಡಿಕೆ ಶಿವಕುಮಾರ್ ಅವರ ನೇತೃತ್ವದ ಸರಕಾರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳ ನೇಮಕಾತಿ ಬಗ್ಗೆ ಚರ್ಚೆಗಳು ಜೋರಾಗಿದೆ. ಸಾಮಾಜಿಕ ಸಮತೋಲನ ಮತ್ತು ಪ್ರಾದೇಶಿಕ ಪ್ರತಿನಿಧಿತ್ವವನ್ನು ಗಮನದಲ್ಲಿಟ್ಟುಕೊಂಡು ದಲಿತ ಸಮುದಾಯಕ್ಕೂ ಡಿಸಿಎಂ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹುದ್ದೆಗೆ ಜಿ ಪರಮೇಶ್ವರ್ ಮತ್ತು ಪ್ರಿಯಾಂಕರ್ ಗೆ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬರುತ್ತಿವೆ.

ಇನ್ನೊಂದೆಡೆ, ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಉಪಮುಖ್ಯಮಂತ್ರಿ ಹುದ್ದೆ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂಬ ಮಾಹಿತಿ ರಾಜಕೀಯದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಹೈಕಮಾಂಡ್ ಯಾವ ಫಾರ್ಮುಲಾಕ್ಕೆ ಮುದ್ರೆ ಹಾಕಲಿದೆ ಎಂಬುದರ ಬಗ್ಗೆ ರಾಜ್ಯದ ರಾಜಕೀಯ ವಲಯದಲ್ಲಿ ಬಾರಿ ಕುತೂಹಲ ಮೂಡಿದೆ.

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ರಾಜಕೀಯಕ್ಕಿಂತ ರಾಜ್ಯ ರಾಜ್ಯಕೀಯದಲ್ಲಿ ಸಕ್ರಿಯವಾಗಿ ಮುಂದುವರೆಯುವ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಪಕ್ಷದ ಉನ್ನತ ನಾಯಕತ್ವವು ಅವರಿಗೆ ರಾಜ್ಯಸಭೆ ಪ್ರವೇಶಿಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳುವಂತೆ ಮನವರಿಸಲು ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸುವೆ.

ಇದೇ ವೇಳೆ, ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಹೊಂದಾಣಿಕೆ ಹಾಗೂ ಪರಿಣಾಮಕಾರಿ ಸಮನ್ವಯ ಸಾಧಿಸಲು ಹೊಸ ವ್ಯವಸ್ಥೆ ರೂಪಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದೆ. ಅದರ ಭಾಗವಾಗಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಂಟಿ ಸಮನ್ವಯ ಸಮಿತಿ ರಚಿಸುವ ಪ್ರಸ್ತಾಪವೂ ಚರ್ಚೆಯಲ್ಲಿದೆ ಎನ್ನಲಾಗಿದೆ.ಈ ಸಮಿತಿಯು ಸರ್ಕಾರದ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳ ನಡುವೆ ಸಮನ್ವಯ ಸಾಧಿಸುವ ಪ್ರಮುಖ ವೇದಿಕೆ ಆಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಮತ್ತು ಪಕ್ಷದ ಸಂಘಟನಾ ಬಲವರ್ಧನೆಗೆ ಈ ಸಮಿತಿ ಮಹತ್ವದ ಪಾತ್ರ ವಹಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಸಚಿವ ಸಂಪುಟ ರಚನೆ, ಪ್ರಮುಖ ಹುದ್ದೆಗಳ ಹಂಚಿಕೆ ಮತ್ತು ಪಕ್ಷ - ಸರ್ಕಾರದ ಸಮನ್ವಯ ಕುರಿತ ಚರ್ಚೆಗಳು ಜೋರಾಗಿರುವ ಹಿನ್ನೆಲೆಯಲ್ಲಿ, ದೆಹಲಿಯಲ್ಲಿ ನಡೆಯುತ್ತಿರುವ ಸಭೆಗಳು ಕರ್ನಾಟಕ ಕಾಂಗ್ರೆಸ್ ನ ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸುವಲ್ಲಿ ನಿರ್ಣಾಯಕವಾಗುವ ಸಾಧ್ಯತೆ ಇದೆ.

Also Read:

ಶಿವಮೊಗ್ಗದಲ್ಲಿ ಜೂನ್ 5 ರಂದು ಉದ್ಯೋಗ ಮೇಳ : SSLC, PUC, ITI ಅಭ್ಯರ್ಥಿಗಳಿಗೆ ನೇರ ಸಂದರ್ಶನ ಅವಕಾಶ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online