Belagavi news:
ಬೆಂಗಳೂರು ಜೂನ್ 4: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಸಿಎಂ ಡಿ.ಕೆ. ಶಿವಕುಮಾರ್ ಜೊತೆ ನಿನ್ನೆ (ಜೂನ್ 3) ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಸೇರಿದಂತೆ 12 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು.
ಮೊದಲ ಹಂತದಲ್ಲಿ ಕೆಲವೇ ನಾಯಕರನ್ನು ಸಂಪುಟಕ್ಕೆ ಸೇರಿಸಲಾಗಿದ್ದು ಈ ಕುರಿತು ವ್ಯಾಪಕ ಚರ್ಚೆಗಳ ನಂತರವೇ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಹಂತ ಹಂತವಾಗಿ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಹಲವು ಲೆಕ್ಕಾಚಾರಗಳು ಹಾಗೂ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.
ಸಚಿವ ಸ್ಥಾನ ಹಂಚಿಕೆ ಪ್ರಕ್ರಿಯೆಯ ಬಳಿಕವೂ ಒಳ ಚರ್ಚೆಗಳು ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ವಲಯದಲ್ಲಿ ಚರ್ಚೆಯಾಗುತ್ತಿದೆ.
ಕರ್ನಾಟಕ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಖಾತೆ ಹಂಚಿಕೆ ಹಾಗೂ ಎರಡನೇ ಹಂತದ ಸಂಪುಟ ವಿಸ್ತರಣೆ ಕುರಿತು ತೀವ್ರ ಚರ್ಚೆಗಳು ಆರಂಭವಾಗಿವೆ.
ಪಕ್ಷದ ವಿವಿಧ ನಾಯಕರು ತಮ್ಮದೇ ರೀತಿಯ ರಾಜಕೀಯ ಲೆಕ್ಕಾಚಾರಗಳಲ್ಲಿ ತೊಡಗಿಸಿಕೊಂಡಿದ್ದು ಮುಂದಿನ ಖಾತೆ ಹಂಚಿಕೆ ಮತ್ತು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.
ಹೈಕಮಾಂಡ್ ನ ಅಂತಿಮ ನಿರ್ಧಾರ ಯಾವ ರೀತಿಯ ರಾಜಕೀಯ ಸಮೀಕರಣಗಳನ್ನು ರೂಪಿಸಲಿದೆ ಎಂಬುದು ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ನೂತನ ಸಚಿವರಿಗೆ ಯಾವ ಖಾತೆ?
ನೂತನವಾಗಿ ಪ್ರಮಾಣವಚನ ಸ್ವೀಕರಿಸುವ ಸಚಿವರಿಗೆ ಇನ್ನೂ ಖಾತೆ ಹಂಚಿಕೆ ಆಗಿಲ್ಲ ಈ ಹಿನ್ನೆಲೆಯಲ್ಲಿ ಯಾವ ಸಚಿವರಿಗೆ ಯಾವ ಖಾತೆ ಸಿಗಬಹುದು ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳು ಆರಂಭವಾಗಿವೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಎಂ. ಬಿ. ಪಾಟೀಲ್ ಸಚಿವರಿಗೆ ಖಾತೆ ಹಂಚಿಕೆ ಮಾಡುವುದು ಮುಖ್ಯಮಂತ್ರಿಯವರ ಪರಮಾಧಿಕಾರಿಯವಾಗಿದೆ ಎಂದು ತಿಳಿಸಿದ್ದಾರೆ. ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ನಾವು ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಮತ್ತೊರ್ವ ಸಚಿವ ಯು.ಟಿ. ಖಾದರ್ ಯಾವುದೇ ಖಾತೆ ನೀಡಿದರು ಅದನ್ನು ನಿಭಾಯಿಸಲು ಸಿದ್ಧನಿದ್ದೇನೆ. ಖಾತೆ ಯಾವುದು ಎಂಬುದಕ್ಕಿಂತ ಕೆಲಸ ಮುಖ್ಯ ಎಂದು ಪ್ರತಿಕ್ರಿಯಿಸಿದ್ದಾರೆ.
ಖಾತೆ ಹಂಚಿಕೆ ಕುರಿತು ಅಂತಿಮ ನಿರ್ಧಾರಕ್ಕಾಗಿ ಎಲ್ಲರ ಗಮನ cm ಹಾಗೂ ಹೈಕಮಾಂಡ್ ನತ್ತ ನೆಟ್ಟಿದ್ದು, ಮುಂದಿನ ದಿನಗಳಲ್ಲಿ ಅಧಿಕೃತ ಘೋಷಣೆ ನಿರೀಕ್ಷೆಯಲ್ಲಿದೆ.
ಎರಡನೇ ಪಟ್ಟಿಯ ಬಗ್ಗೆ ಹೆಚ್ಚಿದ ಚಿಂತೆ:
ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವರಾಗಲು ಶಾಸಕರ ಎರಡನೇ ಪಟ್ಟಿಯನ್ನು ಹೈಕಮಾಂಡ್ ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆಯಿದ್ದು ಇದರ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.
ಎರಡನೇ ಹಂತದ ಸಚಿವ ಸ್ಥಾನ ಹಂಚಿಕೆಯಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದರ ಕುರಿತು ಹಲವು ಲೆಕ್ಕಾಚಾರಗಳು ನಡೆಯುತ್ತಿವೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಹಲವರು ಮತ್ತೆ ಸ್ಥಾನ ಪಡೆಯಲು ನಿರೀಕ್ಷೆಯಲ್ಲಿದ್ದಾರೆ. ಅದೇ ರೀತಿ ಮೊದಲ ಬಾರಿ ಶಾಸಕರಾದವರು ಹಾಗೂ ಹಿರಿಯ ನಾಯಕರಾಗಿದ್ದರು ಈವರೆಗೆ ಸಚಿವ ಸ್ಥಾನ ಸಿಗದವರು ಕೂಡ ರೇಸ್ ನಲ್ಲಿ ಇದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂತೋಷ್ ಲಾಡ್ , ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುವ ಹಿನ್ನೆಲೆಯಲ್ಲಿ ಎಲ್ಲರ ಗಮನ ಇದೀಗ ದೆಹಲಿಯತ್ತ ನೆಟ್ಟಿದೆ.
ಎರಡನೇ ಪಟ್ಟಿಯ ಘೋಷಣೆಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತಷ್ಟು ರಾಜಕೀಯ ಚಟುವಟಿಕೆಗಳು ಮತ್ತು ಸಮೀಕರಣಗಳು ಸ್ಪಷ್ಟ ವಾಗುವ ನೀರಿಕ್ಷೆ ಇದೆ.
Also Read: