<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಕಾಂಗ್ರೆಸ್ ನಾಯಕರ ಜಾಲಿ ಟ್ರಿಪ್ ವಿವಾದ : ಸರ್ಕಾರದ ವಿರುದ್ಧ ವಿಪಕ್ಷಗಳ ತೀವ್ರ ವಾಗ್ದಾಳಿ

ಕಾಂಗ್ರೆಸ್ ನಾಯಕರ ಜಾಲಿ ಟ್ರಿಪ್ ವಿವಾದ : ಸರ್ಕಾರದ ವಿರುದ್ಧ ವಿಪಕ್ಷಗಳ ತೀವ್ರ ವಾಗ್ದಾಳಿ
Summary: Amidst the drought situation in the state, the opposition parties have expressed strong objection to the trip of Congress leaders. BJP and JDS have launched a strong attack on the government, alleging that 'people are in trouble while the leaders are on a jolly trip'.

Belagavi News :

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭೀಕರ ಬರಗಾಲ ಉಂಟಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ತೀವ್ರವಾಗಿ ನಡೆಸಿವೆ. ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷಗಳು, ತಕ್ಷಣವೇ ಬರಪೀಡಿತ ಪ್ರದೇಶಗಳನ್ನು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಹಾಗೂ ಸಾಲಮನ್ನಾ ಘೋಷಿಸುವಂತೆ ಒತ್ತಾಯಿಸಿವೆ.

ಬಿಜೆಪಿ ಮತ್ತು ಜೆಡಿಎಸ್ ನಾಯಕರು, ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದರೂ, ಕಾಂಗ್ರೆಸ್ ನಾಯಕರು ಹಾಗೂ ಶಾಸಕರು ಪ್ರವಾಸಗಳಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಬದಲು ಬೇರೆ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಅವರು ಟೀಕಿಸಿದ್ದಾರೆ.

ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, "ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇದೇ ಪರಿಸ್ಥಿತಿ. ಬರಗಾಲ ಬಂದಾಗ ಸರ್ಕಾರ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೆವು. ನಮ್ಮ ಆಡಳಿತದ ಕಾರ್ಯವೈಖರಿಯಿಂದ ಕಾಂಗ್ರೆಸ್ ಪಾಠ ಕಲಿಯಬೇಕು " ಎಂದು ವಾಗ್ದಾಳಿ ನಡೆಸಿದರು.

ಬರದಿಂದ ತತ್ತರಿಸಿರುವ ರೈತರ ನೆರವಿಗೆ ಸರ್ಕಾರ ತಕ್ಷಣವೇ ಸ್ಪಂದಿಸಿ, ಬರಪೀಡಿತ ಪ್ರದೇಶಗಳನ್ನು ಘೋಷಿಸುವುದು, ರೈತರ ಸಾಲ ಮನ್ನಾ ಮಾಡುವುದು ಹಾಗೂ ಸಮರ್ಪಕ ಪರಿಹಾರ ವಿತರಿಸುವುದು ಅಗತ್ಯ ಎಂದು ವಿಪಕ್ಷಗಳು ಆಗ್ರಹಿಸಿವೆ.

ಬರ ಘೋಷಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ಬಿಜೆಪಿ - ಜೆಡಿಎಸ್ ಕಿಡಿ ; ರೈತರ ₹ 1 ಲಕ್ಷ ಸಾಲ ಮನ್ನಾ ಗೆ ಆಗ್ರಹ :

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಬರಬೇಡಿ ಪರಿಸ್ಥಿತಿ ತೀವ್ರಗೊಂಡಿರುವ ಬೆನ್ನಲ್ಲೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ. ತಕ್ಷಣವೇ ರಾಜ್ಯವನ್ನು ಬರಪೇಡಿದ ಎಂದು ಘೋಷಿಸಿ ರೈತರಿಗೆ ಪರಿಹಾರ ಹಾಗೂ ಸಾಲಮನ್ನಾ ನೀಡುವಂತೆ ಎರಡು ಪಕ್ಷಗಳು ಆಗ್ರಹಿಸಿವೆ.

ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, "ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಳೆ ಬೆಳೆಯಬೇಡಿ ಎಂದು ಹೇಳುತ್ತಿದ್ದಾರೆ. ರೈತರು ಬೆಳೆ ಬೆಳೆದೆ ಹೇಗೆ ಬದುಕಬೇಕು? ಹಾಗಿದ್ದರೆ ರೈತರಿಗೆ ಸರ್ವತಿಕ ರಜೆ ಘೋಷಿಸಿ ಬಿಡಿ" ಎಂದು ಟೀಕಿಸಿದರು.

ಇದೇ ವೇಳೆ, ಕಾವೇರಿ ನದಿಯ ನೀರು ತಮಿಳುನಾಡಿಗೆ ಹರಿದು ಹೋಗುತ್ತಿರುವಾಗ ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು. "ರಾಜ್ಯವನ್ನು ಬರಪೀಡಿತ ಎಂದು ಘೋಷಿಸಿದರೆ ಕೇಂದ್ರ ಸರ್ಕಾರ ನಿಯೋಗ ಕಳುಹಿಸಿ ವರದಿ ಆಧರಿಸಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಸರ್ಕಾರ ಬರ ಘೋಷಣೆ ಮಾಡದಿದ್ದರೆ ಆ ನೆರವು ದೊರೆಯುವುದಿಲ್ಲ. ಕಾಂಗ್ರೆಸ್ ಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕೂಡಲೇ ಬರ ಘೋಷಣೆ ಮಾಡಬೇಕು" ಎಂದು ಒತ್ತಾಯಿಸಿದರು.

ಎಸ್ ಡಿ ಆರ್ ಎಫ್ ಅನುದಾನವನ್ನು ಹೇಗೆ ಬಳಸಲಾಗಿದೆ ಎಂಬ ಪ್ರಶ್ನೆಯನ್ನು ಎತ್ತಿದ ಆರ್ ಅಶೋಕ್, ರಾಜ್ಯ ಸರ್ಕಾರ ರೈತರ ₹ 1 ಲಕ್ಷದವರೆಗೆ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನೊಂದೆಡೆ, ಜೆಡಿಎಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ರಾಜ್ಯದ ಜಲಾಶಯಗಳ ಆತಂಕ ಕಾರ್ಯ ಸ್ಥಿತಿಯನ್ನು ಉಲ್ಲೇಖಿಸಿದೆ. ರಾಜ್ಯದ 36,202 ಕೆರೆಗಳ ಪೈಕಿ ಕೇವಲ 584 ಕೆರೆಗಳು ಮಾತ್ರ ಭರ್ತಿಯಾಗಿದ್ದು, 5,862 ಕೆರೆಗಳು ಸಂಪೂರ್ಣ ಖಾಲಿಯಾಗಿವೆ. 734 ಗ್ರಾಮಗಳಿಗೆ ಟ್ಯಾಂಕರ್ ಮೂಲಕವೇ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಳ್ಳುವ ಹಂತ ತಲುಪಿದ್ದು, ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಜೆಡಿಎಸ್ ಆರೋಪಿಸಿದೆ.

ರೈತರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಜೆಡಿಎಸ್, ತಕ್ಷಣವೇ ರಾಜ್ಯವನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ರೈತರ ಸಾಲಮನ್ನಾ, ಬೆಳೆ ನಷ್ಟಕ್ಕೆ ಪರಿಹಾರ ಹಾಗೂ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online