<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಜನಾಶೀರ್ವಾದದಿಂದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು

ಜನಾಶೀರ್ವಾದದಿಂದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು
Summary: Chief Minister Siddaramaiah said that this victory shows that the people of the state have appreciated the schemes implemented by the Congress government. In other words, he conveyed the message that the government's programmes have received support from the people, which is the main reason for the election victory.

belagavi news:

ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸಾಧಿಸಿದ ಗೆಲುವು ಸರ್ಕಾರದ ಯೋಜನೆಗಳಿಗೆ ಜನರಿಂದ ದೊರೆತ ಬೆಂಬಲದ ಪ್ರತಿಫಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

"ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದಕ್ಕೆ ಇದು ಸ್ಪಷ್ಟ ಸೂಚನೆ. ಇಲ್ಲದಿದ್ದರೆ ಹಿಂದಿನ ಮೂರೂ ಕ್ಷೇತ್ರಗಳು ಉಪಚುನಾವಣೆಗಳಲ್ಲೂ, ಈಗಿನ ಎರಡು ಕ್ಷೇತ್ರಗಳಲ್ಲೂ ನಾವು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ"ಎಂದು ಹೇಳಿದರು. ಇದೇ ವೇಳೆ ಅವರು ವಿಪಕ್ಷಗಳ ವಿರುದ್ಧ ಟೀಕೆ ಮಾಡಿದ್ದು,"ವಿಪಕ್ಷಗಳ ಯಾವುದೇ ತಂತ್ರಗಾರಿಕೆ ಫಲ ನೀಡುವುದಿಲ್ಲ. ಭರ್ಜರಿ ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ"ಎಂದು ಹೇಳಿದರು.

ಶೃಂಗೇರಿ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಎಣಿಕೆ ವೇಳೆ ಗಂಭೀರ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ, ಬಿಜೆಪಿ ಕ್ರಿಮಿನಲ್ ಸಂಚು ರೂಪಿಸಿದ್ದು, ಅಭ್ಯರ್ಥಿ ರಾಜೇಗೌಡ ಅವರಿಗೆ ಬಂದಿದ್ದ 255 ಮಾನ್ಯ ಮತಗಳನ್ನು ಅನರ್ಹಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಮತ ಎಣಿಕೆಯ ಸಮಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೂಲಕ ಮತಪತ್ರಗಳಲ್ಲಿ ತಿದ್ದುಪಡಿ ನಡೆದಿದೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ."ಇದು ಗಂಭೀರ ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಚುನಾವಣಾ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುತ್ತದೆ. ಎಂದು ತಿಳಿಸಿದ್ದಾರೆ. ಇನ್ನೊಂದೆಡೆ ರೈಲ್ವೆ ಇಲಾಖೆಯ ಉದ್ಯೋಗಿಗಳಲ್ಲಿ ಕನ್ನಡಿಗರಿಗೆ ಅವಕಾಶ ನೀಡಲಾಗುತ್ತಿಲ್ಲ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಶ್ನೆಗಳನ್ನು ಕೇಂದ್ರ ಸರಕಾರ ನಡೆಸುತ್ತದೆ ಎಂದು ಹೇಳಿದರು. ಈ ರೀತಿಯ ನಡೆಯ ಕೇಂದ್ರದ ಕನ್ನಡಿಗರ ಮೇಲಿನ ಧೋರಣೆಗಳನ್ನು ತೋರಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ತಾವು ಬದ್ಧನಾಗಿರುವುದಾಗಿ ತಿಳಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, "ಕಾಂಗ್ರೆಸ್ ಸರ್ಕಾರ ತನ್ನ 5 ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತದೆ. ಸಿಎಂ ಬದಲಾವಣೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹೈಕಮಾಂಡ್ ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ" ಎಂದು ಹೇಳಿದರು. ನವದೆಹಲಿಗೆ ತೆರಳುವ ಕುರಿತು ಮಾತನಾಡಿದ ಅವರು,"ವರಿಷ್ಠರಿಂದ ಕರೆ ಬಂದರೆ ಹೋಗುತ್ತೇನೆ. ಇಲ್ಲವೇ ನಾನು ಹೋಗಬೇಕಾದರೆ ರಾಹುಲ್ ಗಾಂಧಿಯವರ ಅಪಾಯಿಂಟ್ಮೆಂಟ್ ಸಿಕ್ಕಾಗ ಭೇಟಿ ಮಾಡುತ್ತೇನೆ" ಎಂದು ಹೇಳಿ ತಿಳಿಸಿದ್ದಾರೆ.

Also read :

ಟಿವಿಕೆ ಮುಖ್ಯಸ್ಥ ವಿಜಯ ದೊಡ್ಡ ರಾಜಕೀಯ ಹೆಜ್ಜೆ - ಸರ್ಕಾರ ರಚನೆಗೆ ಹಕ್ಕು ಸಲ್ಲಿಕೆ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online