belagavi news :
ರಾಜ್ಯದ ರಾಜಕಾರಣ ಮಹತ್ವದ ಬೆಳವಣಿಗೆ ಇಂದು ನಡೆಯಲಿದ್ದು, ಆಡಳಿತರೂಢ. ಕಾಂಗ್ರೆಸ್ ಪಕ್ಷದ( CLP)ಸಭೆ ಇಂದು ಸಂಜೆ ನಡೆಯಲಿದೆ.ಈ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿಆಯ್ಕೆಯ ಕುರಿತು ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆಯಿದ್ದು, ರಾಜ್ಯದ ಮುಂದಿನ ಸರ್ಕಾರದ ರೂಪೇಶಗಳ ಬಗ್ಗೆ ಸ್ಪಷ್ಟ ಚಿತ್ರನ ಹೊರಬೀಳುವ ನಿರೀಕ್ಷೆ ಹೆಚ್ಚಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆಯ ವಹಿಸಲಿದ್ದಾರೆ. ಉನ್ನತ ಮೂಲಗಳ ಪ್ರಕಾರ, ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿ ನಾಯಕತ್ವದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವ ಸಾಧ್ಯತೆ ಇದೆ.
ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಯ ಇರುವ ನಾಯಕರ ಭವಿಷ್ಯವು ನಿರ್ಧಾರವಾಗಲಿದೆ.ವಿಧಾನ ಸೌಧದ ಸಮ್ಮೇಳನದ ಸಭಾಂಗಣದಲ್ಲಿದ್ದು,ಎಲ್ಲಾ ಕಾಂಗ್ರೆಸ್ ಶಾಸಕರು ಕಡ್ಡಾಯವಾಗಿ ಈ ಶಾಸಕಾಂಗ ಸಭೆಗೆ ಹಾಜರಾಗಿರುವಂತೆ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಅವರು ಪತ್ರದ ಮೂಲಕ ಸೂಚಿಸಿದ್ದಾರೆ.ಸಭೆಯ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ತಿಳಿಸಲಾಗುವುದು ಎಂಬ ನಿರೀಕ್ಷೆ ಇದೆ. ರಾಜ್ಯದ ರಾಜಕೀಯ ದಿಕ್ಕು ಸ್ಪಷ್ಟವಾಗುವ ಸಾಧ್ಯತೆ ಇದ್ದು, ರಾಜ್ಯದ ಜನತೆ ಮತ್ತು ರಾಜಕೀಯ ವಲಯಗಳು ಈ ಸಭೆಯ ಕಡೆಗೆ ಎಲ್ಲರ ಚಿತ್ತ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು : ಡಿಕೆ ಶಿವಕುಮಾರ್ ಆಯ್ಕೆ ಬಹುತೇಕ ಖಚಿತ?
ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಗಳಲ್ಲಿ, ರಾಜ್ಯಪಾಲ ಥಾವರ್ ಚಂದ್ ನೆಹಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಶುಕ್ರವಾರ ಅಂಗೀಕರಿಸುವ ಸಚಿವ ಸಂಪುಟವನ್ನು ವಿಭಜಿಸಿದ ನಂತರ ಕಾಂಗ್ರೆಸ್ ಶಾಸಕಂಗ ಪಕ್ಷದ ಸಭೆಯನ್ನು ಇಂದು ನಡೆಸಲಿದ್ದಾರೆ.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನ ಆಯ್ಕೆ ನಡೆಯಲಿದ್ದು, ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಡಿಕೆ ಶಿವಕುಮಾರ್ ಅವರನ್ನು ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಇದರೊಳಗೆ ಅವರು ರಾಜ್ಯದ ಮುಖ್ಯಮಂತ್ರಿ ಯಾಗುವ ದಾರಿ ಸುಗಮವಾಗುವ ನಿರೀಕ್ಷೆ ಇದೆ.
ಪ್ರಸ್ತುತ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಭೆ ಅಧ್ಯಕ್ಷತೆಯನ್ನು ವಹಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ, ವಿಧಾನ ಪರಿಷತ್ ಸಭಾ ನಾಯಕ ಎನ್ ಎನ್ ಬೋಸರಾಜು ಮತ್ತು ಪಕ್ಷದ ಎಲ್ಲಾ ಕಾರ್ಯದಕ್ಷರು ಈ ಸಭೆಯಲ್ಲಿ ಉಪಸ್ಥಿತಿ ಇರಲಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯ ಅಧ್ಯಕ್ಷ ಅಲ್ಲಮ ಪ್ರಭು ಪಾಟೀಲ್ ಅವರು ಕಳಿಸಿರುವ ಸೂಚನಾ ಪತ್ರದಲ್ಲಿ, ಎಲ್ಲ ಶಾಸಕರು ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಲಾಗಿದೆ. ಸಭೆಯಲ್ಲಿ ಕೈಗೊಳ್ಳುವ ನಿರ್ಧಾರ ರಾಜ್ಯದ ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸುವ ಮಹತ್ವದ ಘಟ್ಟವಾಗಿದ್ದು, ಕಾಂಗ್ರೆಸ್ ನಾಯಕತ್ವದ ಮುಂದಿನ ಹೆಜ್ಜೆ ಎತ್ತ ರಾಜ್ಯದ ಗಮನ ನೆಟ್ಟಿದೆ.
ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಿದ್ದರಾಮಯ್ಯ ರಾಜೀನಾಮೆ, ಹೊಸ ಸಿಎಂ ಘೋಷಣೆಗೆ ಕಾದು ನಿಂತ ರಾಜ್ಯ ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಿರ್ಧಾರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಹೆಚ್ಚಾಗಿದೆ.
ಈ ನಡುವೆ ಶಾಸಕಾಂಗ ಪಕ್ಷದ ಸಭೆಯ ನಂತರ ಮುಂದೆ ಮುಖ್ಯಮಂತ್ರಿ ಹೆಸರನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ. ಕೆಲವು ತಿಂಗಳುಗಳಿಂದ ರಾಜ್ಯ ರಾಜಕೀಯದಲ್ಲಿ ಕೇಳಿ ಬಂದಿರುವ ಚರ್ಚೆಗಳಂತೆ, ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಕ್ಷದ ಮೂಲಗಳು ಸೂಚಿಸಿವೆ.
ರಾಜ್ಯನಾಮಿಗೂ ಮುನ್ನ ಗುರುವಾರ ತಮ್ಮ ನಿವಾಸದಲ್ಲಿ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಅಯೋಜಿಸಿದ್ದ ಉಪಹಾರ ಕೂಟದಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಹಂಚಿಕೊಂಡಿದ್ದರು. ಬಳಿಕ ಲೋಕಸಭಾ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿದ ಅವರು, ಸುದ್ದಿಗೋಷ್ಠಿ ನಡೆಸಿ ರಾಜ್ಯದ ಜನತೆಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
ಮುಂದಿನ ಮುಖ್ಯಮಂತ್ರಿ ಯಾರೆಂಬ ಘೋಷಣೆಯಂತೆ ಈಗ ರಾಜ್ಯದ ಎಲ್ಲರ ಗಮನ ಸೆಳೆದಿದೆ, ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕರ್ನಾಟಕದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಹೊಸ ನಾಯಕತ್ವದೊಂದಿಗೆ ಸರ್ಕಾರ ಯಾವ ರೀತಿ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಿದೆ ಎಂಬುವುದರ ಕುರಿತು ಜನರಲ್ಲಿ ನಿರೀಕ್ಷೆ ಹೆಚ್ಚಾಗಿದೆ.
Also Read:
ಸಿದ್ದರಾಮಯ್ಯ ರಾಜೀನಾಮೆ ಕುರಿತು ಮಾತನಾಡುತ್ತಾ ಕಣ್ಣೀರಿಟ್ಟ ಡಾಕ್ಟರ್ ಎಂ.ಸಿ.ಸುಧಾಕರ್