belagavi news :
ತುಮಕೂರು: ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ್ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆಯುವುದು ತಮ್ಮ ಕುಟುಂಬದ ಸಂಪ್ರದಾಯ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಠಕ್ಕೆ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ಆಶೀರ್ವಾದ ಪಡೆದಿರುವುದು ಹೇಳಿದರು.
"ಹಿಂದಿನಿಂದಲೂ ತಮ್ಮ ಇಡೀ ಕುಟುಂಬ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುತ್ತ ಬಂದಿದೆ. ಮುಂದಿನ ದಿನಗಳಲ್ಲಿ ಕಂದಾಯ ಖಾತೆಯ ಜವಾಬ್ದಾರಿಯನ್ನು ನಿರ್ವಹಿಸುವ ಸಂದರ್ಭದಲ್ಲಿ ಮಠದ ಆಶೀರ್ವಾದ ಅತ್ಯಂತ ಮುಖ್ಯವಾಗಿದೆ" ಎಂದು ಪರಮೇಶ್ವರ್ ತಿಳಿಸಿದರು.
ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಅವರು "ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 4 ದಿನಗಳಾಗಿವೆ. ರಾಜ್ಯದ ಅಭಿವೃದ್ಧಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಅವರು ತಮ್ಮದೇ ಆದ ಕಾರ್ಯ ಯೋಜನೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ" ಎಂದು ಹೇಳಿದರು.
ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತು ಮಾತನಾಡಿದ ಡಿಸಿಎಂ, ಜಿಲ್ಲೆಯ ನೀರಾವರಿ ಯೋಜನೆಗಳು ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಆದ್ಯತೆ ನೀಡಲಾಗುವುದು ಎಂದರು. ವಿಶೇಷವಾಗಿ ಎತ್ತಿನಹೊಳೆ ಯೋಜನೆಯಿಂದ ಜೂನ್ ಮತ್ತು ಜುಲೈ ವೇಳೆಗೆ ಜಿಲ್ಲೆಗೆ ನೀರು ಹರಿಯಬೇಕಾಗಿದ್ದರೂ, ಅರಣ್ಯ ಇಲಾಖೆಯ ಭೂಸ್ವಾಧೀನ ಸಮಸ್ಯೆಗಳಿಂದ ಯೋಜನೆ ವಿಳಂಬವಾಗಿದೆ ಎಂದು ತಿಳಿಸಿದರು.
"ಅರಣ್ಯ ಇಲಾಖೆಗೆ ಸಂಬಂಧಿಸಿದ ಭೂಸ್ವಾಧೀನ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಿ, ತುಮಕೂರು ಜಿಲ್ಲೆಗೆ ನೀರು ತಲುಪಿಸುವ ಕೆಲಸಕ್ಕೆ ವೇಗ ನೀಡಲಾಗುವುದು" ಎಂದು ಪರಮೇಶ್ವರ ಭರವಸೆ ನೀಡಿದರು.
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರೊಂದಿಗೆ ತಮ್ಮದು ಐದು ದಶಕಗಳ ಸ್ನೇಹ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ರಾಜಣ್ಣ ಅವರ ಸಚಿವ ಸಂಪುಟ ಸೇರ್ಪಡೆಯಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಸ್ಪಷ್ಟಪಡಿಸಿದ್ದರು.
ತುಮಕೂರಿನ ರಾಜಣ್ಣ ಅವರ ನಿವಾಸದಲ್ಲಿ ಕೆಲಕಾಲ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, "ರಾಜಣ್ಣ ಅವರದ್ದು, ನನ್ನದು 50 ವರ್ಷದ ಗೆಳೆತನ. ನಾವು ಒಟ್ಟಿಗೆ ರಾಜಕೀಯ ಮಾಡಿದ್ದೇವೆ. ಪಕ್ಷದಲ್ಲಿ ಎಲ್ಲವೂ ಒಗ್ಗಟ್ಟಾಗಿದ್ದೇವೆ ಎಂದು ಸಂದೇಶ ಜನರಿಗೆ ಹೋಗಬೇಕು. ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ರಾಜಣ್ಣ ಅವರ ಸಚಿವ ಸಂಪುಟ ಸೇರ್ಪಡೆಗೆ ಪ್ರಯತ್ನಿಸುತ್ತಿದ್ದೇವೆ" ಎಂದು ತಿಳಿಸಿದರು.
ಇದೇ ವೇಳೆ ರೈತರ ಸಮಸ್ಯೆಗಳ ಕುರಿತು ಮಾತನಾಡಿದ ಅವರು, "ರಾಜ್ಯದಲ್ಲಿ ಸುಮಾರು 97 ಲಕ್ಷ ರೈತ ಕುಟುಂಬಗಳಿದ್ದು, ಭೂಮಿಯ ಹಕ್ಕು ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಅವುಗಳನ್ನು ಪರಿಸ್ಕರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಮೂಲಕ ಪರಿಣಾಮ ಕ್ರಮ ಕೈಗೊಳ್ಳಲಾಗುವುದು" ಎಂದರು.
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೊಣವಿನಕೆರೆ ಮಠದ ಭೇಟಿ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ, "ಅದು ಅವರ ಖಾಸಗಿ ಭೇಟಿ. ಆದ್ದರಿಂದ ನಾನು ತೆರಳುತ್ತಿಲ್ಲ" ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಮುಖ್ಯಮಂತ್ರಿ ಆಯ್ಕೆ ತೀರ್ಮಾನ. ಪಕ್ಷದ ನಾಯಕತ್ವ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಿದೆ. ಅವರು ಈಗಾಗಲೇ ಉಪಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ನಾವು ಎಲ್ಲರೂ ಅವರೊಂದಿಗೆ ಸೇರಿ ಕೆಲಸ ಮಾಡುತ್ತೇವೆ" ಎಂದರು.
ಸಿದ್ದರಾಮಯ್ಯ ಅವರ ಆಡಳಿತವನ್ನು ಕೂಡ ಶ್ಲಾಘಿಸಿದ ಪರಮೇಶ್ವರ್, "ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವತ್ತ ಸರ್ಕಾರ ಕೆಲಸ ಮಾಡಲಿದೆ. ಉತ್ತಮ ಆಡಳಿತ ಮತ್ತು ಹಣಕಾಸಿನ ಶಿಸ್ತು ಕಾಪಾಡಿದ ಸಿದ್ದರಾಮಯ್ಯ ಅವರಿಗೂ ಅಭಿನಂದನೆಗಳು. ಅವರ ಮಾರ್ಗದರ್ಶನವು ಸರ್ಕಾರಕ್ಕೆ ಲಭ್ಯವಾಗಲಿದೆ" ಎಂದು ಹೇಳಿದರು.
'ರಾಜಣ್ಣ ಜೊತೆ 50 ವರ್ಷದ ಗೆಳೆತನ, ಸಚಿವ ಸಂಪುಟಕ್ಕೆ ಸೇರಿಸಲು ಪ್ರಯತ್ನ' ಎಂದು ಹೇಳಿದ ಡಿ ಸಿಎಂ ಪರಮೇಶ್ವರ್, ಪಕ್ಷದ ಒಗ್ಗಟ್ಟು ಮತ್ತು ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಯೋಜನೆಗಳನ್ನು ಪ್ರಕಟಿಸಿದ್ದು, ದೆಹಲಿ ಮತ್ತು ಪಶ್ಚಿಮ ಬಂಗಾಳದ ಸಿಲಿಗುರಿ ನಡುವಿನ ಪ್ರಯಾಣ ಸಮಯವನ್ನು 18-20 ಗಂಟೆಗಳಿಂದ ಕೇವಲ ಆರು ಗಂಟೆಯಗಳಿಗೆ ಇಳಿಸುವ ಗುರಿ ಹೊಂದಲಾಗಿದೆ.
ಸುಮಾರು ₹1 ಲಕ್ಷ ಕೋಟಿ ವೆಚ್ಚದ ಈ ಹೈ ಸ್ಪೀಡ್ ರೈಲು ಕಾರಿಡಾರ್ ದೆಹಲಿ, ಲಕ್ನೌ, ವಾರಣಾಸಿ,ಹಾಗೂ ಪಾಟ್ನಾ ಸಿಲಿಗುರಿಯನ್ನು ಸಂಪರ್ಕಿಸಲಿದೆ. ಈ ಯೋಜನೆಯಿಂದ ಉತ್ತರ ಭಾರತ ಮತ್ತು ಪೂರ್ವ ಭಾರತ ದ ನಡುವಿನ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದ್ದು, ವ್ಯಾಪಾರ, ಪ್ರವಾಸೋದ್ಯಮ, ಲಾಜಿಸ್ಟಿಕ್ಸ್ ಹಾಗೂ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ಹೊಸ ಉತ್ತೇಜನ ಸಿಗಲಿದೆ.
Also Read: