<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಅಪಾರ್ಟ್ಮೆಂಟ್ ನಿವಾಸಿಗಳ ಸಮಸ್ಯೆಗೆ ಸ್ಪಂದಿಸಿದ ಡಿಕೆಶಿ : 'ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು'

ಅಪಾರ್ಟ್ಮೆಂಟ್ ನಿವಾಸಿಗಳ ಸಮಸ್ಯೆಗೆ ಸ್ಪಂದಿಸಿದ ಡಿಕೆಶಿ : 'ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು'
Summary: In a conversation with apartment owners, CM DK Shivakumar said that the full rights of the property should belong to the owners. There was a significant discussion on the problems and rights of flat owners.

Belagavi News :

ಕರ್ನಾಟಕ ಅಪಾರ್ಟ್ಮೆಂಟ್ ಕರಡು ವಿಧೇಯಕ 2026 ಕುರಿತು ನಡೆದ ಮಹತ್ವದ ಸಂವಾದದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು , ಕಷ್ಟಪಟ್ಟು ಸಂಪಾದಿಸಿದ ಆಸ್ತಿಯ ಸಂಪೂರ್ಣ ಹಕ್ಕು ಅದರ ಮಾಲೀಕರಿಗೆ ಸೇರಬೇಕು ಎಂದು ಪ್ರತಿಪಾದಿಸಿದ್ದಾರೆ.

ವಿಕಾಸ ಸೌಧದಲ್ಲಿ ಬುಧವಾರ ನಡೆದ ಅಪಾರ್ಟ್ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಸ್ತಿ ಖರೀದಿ ಮತ್ತು ನಿರ್ವಹಣೆ ವೇಳೆ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ ಎಂದು ಹೇಳಿದರು.

"ಕಷ್ಟಪಟ್ಟು ಗಳಿಸಿದ ಆಸ್ತಿಯ ಸಂಪೂರ್ಣ ಹಕ್ಕು ಅದರ ಮಾಲೀಕರಿಗೆ ಸೇರಬೇಕು. ಅಪಾರ್ಟ್ಮೆಂಟ್ ನಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ " ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್, ಕೆ.ಜೆ ಜಾರ್ಜ್ ಬಿಡಿಎ ಅಧ್ಯಕ್ಷ ಎನ್ .ಎ. ಹ್ಯಾರಿಸ್ ಹಾಗೂ ಅಪಾರ್ಟ್ಮೆಂಟ್ ಸಂಘಗಳ ಒಕ್ಕೂಟದ ಅಧ್ಯಕ್ಷ ರಾಜೀವ್ ಗೌಡ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಕರ್ನಾಟಕ ಅಪಾರ್ಟ್ಮೆಂಟ್ ಮಾಲಿಕತ್ವ ಮತ್ತು ನಿರ್ವಹಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ಫ್ಲ್ಯಾಟ್ ಮಾಲೀಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಈ ಕರುಡು ವಿಧೇಕವನ್ನು ರೂಪಿಸಲಾಗುತ್ತಿದೆ.

ಇ - ಖಾತಾ ಕ್ರಾಂತಿಗೆ ವೇಗ - ಬೆಂಗಳೂರಿನ 26 ಲಕ್ಷ ಆಸ್ತಿಗಳಿಗೆ ಇ - ಖಾತಾ ವಿತರಣೆ ; ಅಪಾರ್ಟ್ಮೆಂಟ್ ಸಮಸ್ಯೆ ಪರಿಹಾರಕ್ಕೆ ಕ್ರಮ :

ರಾಜ್ಯದಲ್ಲಿ ಆಸ್ತಿ ಮಾಲೀಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇ - ಖಾತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ಅಪಾರ್ಟ್ಮೆಂಟ್ ಕುರಿತ ಸಮಾಜದಲ್ಲಿ ಮತನಾಡಿದ ಅವರು , ಜನರು ಕಷ್ಟಪಟ್ಟು ನಿರ್ಮಿಸುವ ಮನೆಮದ್ದು ಖರೀದಿಸುವ ಆಸ್ತಿಯನ್ನು ಯಾವುದೇ ಅಡೆತಡೆಯಿಲ್ಲದೆ ಅನುಭವಿಸುವಂತಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಬೆಂಗಳೂರಿನ ಸುಮಾರು 40 ಲಕ್ಷ ಆಸ್ತಿಗಳ ಪೈಕಿ ಈಗಾಗಲೇ 26 ಲಕ್ಷ ಆಸ್ತಿಗಳಿಗೆ ಇ - ಖಾತಾ ನೀಡಲಾಗಿದೆ ಎಂದು ಮಾಹಿತಿ ನೀಡಿದ ಸಿಎಂ, ಮನೆ ಬಾಗಿಲಿಗೆ ಇ - ಖಾತಾ ನೀಡುವ ವ್ಯವಸ್ಥೆ ಆಸ್ತಿ ದಾಖಲೆ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತಂದಿದೆ ಎಂದು ಹೇಳಿದರು.

ಅಪಾರ್ಟ್ಮೆಂಟ್ ಗಳಲ್ಲಿ ಎದುರಾಗುವ ಎಸ್ ಟಿಪಿ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೆಲವು ಡೆವೆಲಪರ್ ಗಳಿಂದ ಉಂಟಾಗುವ ಗೊಂದಲಗಳನ್ನು ಬಗೆಹರಿಸಿ, ಆಗ್ತಿ ದಾಖಲೆಗಳ ಸರಾಗ ವರ್ಗಾವಣೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಆಸ್ತಿ ಖರೀದಿದಾರರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಹೊಸ ಅಪಾರ್ಟ್ಮೆಂಟ್ ವಿಧೇಯಕವನ್ನು ರೂಪಿಸಲಾಗುತ್ತಿದೆ. ಈ ಕುರಿತು ಸಾರ್ವಜನಿಕರು ಹಾಗೂ ಸಂಘ - ಸಂಸ್ಥೆಗಳು ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ಆಗಸ್ಟ್ 6ರವರೆಗೆ ನಗರಭಿವೃದ್ಧಿ ಸಚಿವರಿಗೆ ಸಲ್ಲಿಸಬಹುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಹೊಸ ಕಾನೂನು ಜಾರಿಗೆ ಬಂದರೆ ಅಪಾರ್ಟ್ಮೆಂಟ್ ಮಾಲೀಕರ ಹಕ್ಕುಗಳು, ನಿರ್ವಹಣೆ ಹಾಗೂ ದಾಖಲೆ ವರ್ಗಾವಣೆ ಪ್ರಕ್ರಿಯೆಯಲ್ಲಿ ಮತ್ತಷ್ಟು ಪಾರದರ್ಶಕತೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ - ಬ್ಯೂಸಿನೆಸ್ ಕಾರಿಡಾರ್, ಹೈ- ರೈಸ್ ಕಟ್ಟಡಗಳಿಗೆ ಒಟ್ಟು ಎಂದ ಸಿಎಂ ಡಿಕೆ ಶಿವಕುಮಾರ್ :

ನಗರ ಅಭಿವೃದ್ಧಿ, ಹೂಡಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸುತ್ತಾರೆ.

ಬೆಂಗಳೂರು ಬ್ಯುಸಿನೆಸ್ ಯೋಜನೆ ಅಡಿ 132 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಾಣವಾಗುತ್ತಿದ್ದು, ಭೂಸ್ವಾಧೀನಕ್ಕಾಗಿ ರೈತರಿಗೆ ಗರಿಷ್ಠ ಪರಿಹಾರ ನೀಡಲಾಗುತ್ತಿದೆ ಎಂದರು. ಹೈ - ರೈಸ್ ಕಟ್ಟಡ ನಿರ್ಮಾಣ, ರಸ್ತೆ ವಿಸ್ತರಣೆ ಹಾಗೂ ಹಳೆಯ ಕಟ್ಟಡಗಳ ಮರು ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

ಬೆಂಗಳೂರನ್ನು ವಿದೇಶಿ ಹೂಡಿಕೆದಾರರ ಪ್ರಮುಖ ತಾಣವನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ. ದಾವೋಸ್ ಪ್ರವಾಸದ ವೇಳೆ ಜಾಗತಿಕ ಹೂಡಿಕೆದಾರರು ಬೆಂಗಳೂರಿನಲ್ಲಿ ಹೂಡಿಕೆಗೆ ಆಸಕ್ತಿ ತೋರಿದ್ದಾರೆ ಎಂದು ಸಿಎಂ ತಿಳಿಸಿದರು.

ನಗರದ ರಸ್ತೆ ಗುಂಡಿ ಸಮಸ್ಯೆ ಪರಿಹಾರಕ್ಕೆ ಈಗಾಗಲೇ ₹ 4000 ಕೋಟಿ ವೆಚ್ಚ ಮಾಡಲಾಗಿದೆ ಹಾಗೂ ಭವಿಷ್ಯದಲ್ಲಿ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬರಲಿದೆ ಎಂದು ಅವರು ಹೇಳಿದರು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online