Belagavi News:
ಉಪಮುಖ್ಯಮಂತ್ರಿಯಾಗಿದ್ದ ಡಿಕೆ ಶಿವಕುಮಾರ್ ಇದೀಗ ಮುಖ್ಯಮಂತ್ರಿ ಆಗಿದ್ದಾರೆ ಅವರು ಮೊದಲ ಬಾರಿಗೆ ತಮ್ಮ ಸ್ವ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಮೆಟ್ರೋ ಸಂಚರಿಸಲು ಮುಖ್ಯಮಂತ್ರಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಭೇಟಿ ರಾಜಕೀಯ ಹಾಗೂ ಆಡಳಿತಾತ್ಮಕವಾಗಿ ಸಾಕಷ್ಟು ಮಹತ್ವ ಪಡೆದಿದ್ದು, ಸಾರ್ವಜನಿಕರ ಗಮನ ಸೆಳೆದಿದೆ.
ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರ ಭೇಟಿ ಹಿನ್ನೆಲೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ, ಜನರೊಂದಿಗೆ ನೇರ ಸಂವಾದ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದೇ ವೇಳೆ ಮೆಟ್ರೋ ಮೂಲಕ ಸಂಚಾರ ನಡೆಸುವ ನಿರ್ಧಾರ ಸಾರ್ವಜನಿಕ ಸಾರಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ ಬಳಕೆಯನ್ನು ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಸಂದರ್ಭದಲ್ಲಿ, ಉನ್ನತ ಹುದ್ದೆಯ ನಾಯಕರು ಮೆಟ್ರೋ ಪ್ರಯಾಣ ಆಯ್ಕೆ ಮಾಡಿರುವುದು ವಿಶೇಷ ಮಹತ್ವ ಪಡೆದಿದೆ. ಇದರಿಂದ ಜನರಲ್ಲಿ ಮೆಟ್ರೋಲ್ ಬಳಕೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ಪ್ರಯತ್ನ ನಡೆಯುತ್ತಿದೆ.
ಡಿಕೆ ಶಿವಕುಮಾರ್ ಅವರ ಈ ಬೇಟಿ ವೇಳೆ ಪಕ್ಷದ ಮುಖಂಡರು, ಸ್ಥಳೀಯ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಜೊತೆಗೆ ಹೊಸ ಯೋಜನೆಗಳ ಘೋಷಣೆಯ ನಿರೀಕ್ಷೆಯು ಇದೆ. ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿರುವ ಈ ಭೇಟಿ ಮತ್ತು ಮೆಟ್ರೋ ಸಂಚಾರ ಕಾರ್ಯಕ್ರಮದತ್ತ ಸಾರ್ವಜನಿಕರು ಹೆಚ್ಚಿನ ಆಸಕ್ತಿ ತೋರಿದ್ದಾರೆ.
ಮೊದಲ ಬಾರಿಗೆ ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ:
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸಿಎಂ ಆದ ಬಳಿಕ ಮೊದಲ ಬಾರಿಗೆ ತಮ್ಮ ಸ್ವ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಾರೋಹಳ್ಳಿ ಹಾಗೂ ಕನಕಪುರ ತಾಲೂಕಿನಲ್ಲಿ ಆಯೋಜಿಸಿರುವ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದಿದ್ದು, ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಭಾರಿ ಉತ್ಸಾಹ ಕಂಡುಬಂದಿದೆ.
ವಿಶೇಷವೆಂದರೆ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಕನಕಪುರ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಕನಕಪುರದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಾವಿರಾರು ಬೆಂಬಲಿಗರು ಭಾಗವಹಿಸುವ ನಿರೀಕ್ಷೆ ಇದೆ. ಇದೇ ವೇಳೆ ಕ್ಷೇತ್ರದ ಅಭಿವೃದ್ಧಿ ಯೋಜನೆಗಳು, ಮೂಲ ಸೌಕರ್ಯ ಕಾಮಗಾರಿಗಳು ಹಾಗೂ ಜನರ ಬೇಡಿಕೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯೂ ಇದೆ. ಸಿಎಂ ಆಗಿ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸುತ್ತಿರುವ ಡಿಕೆ ಶಿವಕುಮಾರ್ ಅವರ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಕಾರ್ಯಕ್ರಮದತ್ತ ಎಲ್ಲರ ಗಮನ ನೆಟ್ಟಿದೆ.
ವಾಹನ ಸವಾರರಿಗೆ ತೊಂದರೆ ಆಗದಂತೆ ಮೆಟ್ರೋ ಪ್ರಯಾಣ ಆಯ್ಕೆ ಮಾಡಿದ ಸಿಎಂ ಡಿಕೆ ಶಿವಕುಮಾರ್ :
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ತಮ್ಮ ಸ್ವಕ್ಷೇತ್ರ ಕನಕಪುರ ಪ್ರವಾಸ ಕೈಗೊಂಡಿದ್ದು, ಜೀರೋ ಟ್ರಾಫಿಕ್ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಆಗುವ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಮೆಟ್ರೋ ಪ್ರಯಾಣವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ವಿಧಾನಸೌಧ ಪೆಟ್ರೋ ನಿಲ್ದಾಣದಿಂದ ಕನಕಪುರ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋದಲ್ಲಿ ಸಂಚರಿಸಲಿರುವ ಸಿಎಂ, ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಹಾರೋಹಳ್ಳಿ ಹಾಗೂ ಕನಕಪುರ ಭಾಗಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಕ್ಕೆ ವಿಶೇಷ ಮಹತ್ವ ದೊರೆತಿದೆ.
ಕೃತಜ್ಞತಾ ಸಮರ್ಪಣ ಕಾರ್ಯಕ್ರಮದಲ್ಲಿ, ಜನಸಂಪರ್ಕ ಸಭೆಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಲಿರುವ ಸಿಎಂ, ದಿನವಿಡೀ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರವಾಸ ಪೂರ್ಣಗೊಂಡ ಬಳಿಕ ಇಂದು ರಾತ್ರಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಕನಕಪುರ, ಹಾರೋಹಳ್ಳಿ ಸೇರಿದಂತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆ ಸುಗಮವಾಗಿರಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರ ಅಡಚಣೆ ಉಂಟಾಗದಂತೆ ಮೆಟ್ರೋ ಪ್ರಯಾಣದ ನಿರ್ಧಾರ ಕೈಗೊಂಡಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಪ್ರವಾಸ ರಾಜಕೀಯ ವಲಯದಲ್ಲೂ ಗಮನ ಸೆಳೆದಿದೆ.
Also Read:
"ಹಾನಗಲ್ ನಲ್ಲಿ ಮುಸ್ಲಿಂ ಸಮುದಾಯದ ಮನವಿ : ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಒತ್ತಾಯ"