<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

Davangere breaking: ಚಿಗಟೇರಿ ಜಿಲ್ಲಾಸ್ಪತ್ರೆಯ OTನಲ್ಲಿ ಆಕ್ಸಿಜನ್ ಸಿಲೆಂಡರರ್ಟ್ ಸ್ಪೋಟ

Davangere breaking: ಚಿಗಟೇರಿ ಜಿಲ್ಲಾಸ್ಪತ್ರೆಯ OTನಲ್ಲಿ ಆಕ್ಸಿಜನ್ ಸಿಲೆಂಡರರ್ಟ್ ಸ್ಪೋಟ
Summary: Davanagere breaking: An oxygen cylinder explosion occurred in the Operation Theatre (OT) of Chigateri District Hospital in Jambe. An atmosphere of anxiety has been created in the hospital for some time. What caused the explosion, whether there were any casualties or injuries, information from the authorities and complete details of the incident know here.

Belagavi News:

ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಅಪರೇಷನ್ ಥಿಯೇಟರ್ (OT) ನಲ್ಲಿ ಆಕ್ಸಿಜನ್ ಸಿಲೆಂಡರ್ ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ. ಏಕಾಏಕಿ ಸಂಭವಿಸಿದ ಸ್ಪೋಟದಿಂದ ಆಪರೇಷನ್ ಥಿಯೇಟರ್ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು. ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿವೆ.

ಸ್ಪೋಟದ ಪರಿಣಾಮ ಆಪರೇಷನ್ ಥಿಯೇಟರ್ ಸುತ್ತಮುತ್ತಲಿನ ಹಲವು ಕೊಠಡಿಗಳಿಗೂ ಹಾನಿಯಾಗಿದ್ದು, ಆಸ್ಪತ್ರೆ ಆವರಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಆರೋಗ್ಯ ಇಲಾಖೆ ಸಿಬ್ಬಂದಿ ತಕ್ಷಣ ಹೊರಗೆ ಧಾವಿಸಿ ಸುರಕ್ಷಿತ ಸ್ಥಳಕ್ಕೆ ತೆರಳಿದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ಮುಂದುವರಿದಿದ್ದು, ನಷ್ಟದ ಪ್ರಮಾಣವನ್ನು ಅಧಿಕಾರಿಗಳು ಅಂದಾಜಿಸುತ್ತಿದ್ದಾರೆ.

ಈ ನಡುವೆ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಹಿರಿಯ ಸಿಬ್ಬಂದಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಸ್ಪೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳಾಗಿರುವ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಘಟನೆ ಆಸ್ಪತ್ರೆಯ ಸುರಕ್ಷತಾ ಕ್ರಮಗಳ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಸಿಬ್ಬಂದಿಯ ಮಾಹಿತಿ ಪ್ರಕಾರ, ಏಕಾಏಕಿ ಆಪರೇಷನ್ ಥಿಯೇಟರ್ ನಲ್ಲಿ ಸ್ಪಾರ್ಕ್ ಕಾಣಿಸಿಕೊಂಡಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಅರಿತು ತಕ್ಷಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು. ಸಿಬ್ಬಂದಿ ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ.

"ಅದೃಷ್ಟವಶಾತ್ ಆ ಸಮಯದಲ್ಲಿ ಯಾವುದೇ ರೋಗಿ ಆಪರೇಷನ್ ಥಿಯೇಟರ್ ನಲ್ಲಿ ಇರಲಿಲ್ಲ. ಇಲ್ಲದಿದ್ದರೆ ಭಾರೀ ದುರಂತ ಸಂಭವಿಸುವ ಸಾಧ್ಯತೆ ಇತ್ತು. ನಾವು ಕೊಡಲೇ ಹೊರ ಬಂದಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದೇವೆ. ಇದು ನಮಗೆ ಮರುಜೀವ ಸಿಕ್ಕ ಅನುಭವವಾಗಿದೆ." ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಘಟನೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿತು. ಸ್ಪೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದು. ಆಸ್ಪತ್ರೆಯ ಸುರಕ್ಷತಾ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ

ಆಕ್ಸಿಜನ್ ಸಿಲೆಂಡರ್ ಸ್ಪೋಟದಿಂದ ಹೊತ್ತಿಕೊಂಡ ಬೆಂಕಿ

ಲಕ್ಷಾಂತರ ರೂ.ಮೌಲ್ಯದ ಯಂತ್ರೋಪಕರಣಗಳಿಗೆ ಹಾನಿ

ಬೆಂಕಿಯ ತೀವ್ರತೆ ಹಚ್ಚಿದರಿಂದ ಅಗ್ನಿಶಾಮಕ ಸಿಬ್ಬಂದಿ ಆಸ್ಪತ್ರೆಯ ಗಾಜು ಒಡೆದು ಒಳಪ್ರವೇಶಿಸಿ ಕಾರ್ಯಾಚರಣೆ ನಡೆಸಿದರು. ಆಪರೇಷನ್ ಥಿಯೇಟರ್ ನಲ್ಲಿ ಇನ್ನೂ ಹಲವು ಆಕ್ಸಿಜನ್ ಸಿಲಿಂಡರ್ ಗಳಿದ್ದ ಹಿನ್ನೆಲೆ, ಅವುಗಳಿಗೂ ಬೆಂಕಿ ತಗುಲಿ ಸ್ಪೋಟಗೊಂಡಿದ್ದರೆ ಪರಿಸ್ಥಿತಿ ಮತ್ತಷ್ಟು ಭೀಕರವಾಗುವ ಸಾಧ್ಯತೆ ಇತ್ತು. ಆದರೆ ಸಮಯೊಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತವನ್ನು ತಪ್ಪಿಸಲು ಸಾಧ್ಯವಾಯಿತು.

ಘಟನೆಯೆಲ್ಲಿ ಆಪರೇಷನ್ ಥಿಯೇಟರ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವೈದ್ಯಕೀಯ ಯಂತ್ರೋಪಕರಣಗಳು ಬೆಂಕಿಗಾಹುತಿಯಾಗಿವೆ. ಸ್ಪೋಟದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.

ಸದ್ಯ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು, ಆಸ್ಪತ್ರೆಯ ಸುರಕ್ಷತಾ ಹಾಗೂ ಸ್ಪೋಟದ ಕಾರಣದ ಕುರಿತು ಅಧಿಕಾರಿಗಳು ಸಮಗ್ರ ತನಿಖೆ ನಡೆಸುತ್ತಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online