belagavi news :
ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಸಂತ ಅವರ ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಪ್ರಕರಣ ಇದೀಗ ಗಂಭೀರ ತಿರುವು ಪಡೆದಿದೆ . ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 29 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದಾರೆ.
ಕೃತಕ ಬುದ್ಧಿಮತ್ತೆ ಹಾಗೂ ಡೀಪ್ ಫೇಕ್ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ನಕಲಿ ದೃಶ್ಯಗಳನ್ನು ಸೃಷ್ಟಿಸಿ ಹರಡಲಾಗಿದೆ ಎಂದು ತನಿಕೆಯಿಂದ ತಿಳಿದು ಬಂದಿದೆ.ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಐಟಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ನಟಿ ರುಕ್ಮಿಣಿ ವಸಂತ ಅವರು ನೀಡಿದ ದೂರಿನಲ್ಲಿ,ತಮ್ಮ ಮುಖವನ್ನು ಬೇರೆ ದೇಹದ ಮೇಲೆ ಅಂಟಿಸಿ ನಕಲಿ ವಿಡಿಯೋ ಮತ್ತು ಫೋಟೋಗಳನ್ನು ಸೂಚಿಸುವ ಮೂಲಕ ತಮ್ಮ ಗೌರವಕ್ಕೆ ಧಕ್ಕೆ ತರಲಾಗಿದೆ ಹಾಗೂ ಚಾರಿತ್ರ್ಯ ಹರಣಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.ಈ ದೂರು ಆದರಿಸಿ FIR ದಾಖಲಿಸಲಾಗಿದೆ.
ಈ ಪ್ರಕರಣದ ಹಿನ್ನೆಲೆಯಲ್ಲಿ ತಂತ್ರಜ್ಞಾನ ದುರ್ಬಳಕೆಯ ವಿರುದ್ಧ ಕಠಿಣ ಕ್ರಮ ಅಗತ್ಯ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.ಸೈಬರ್ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ತನಿಖೆಯನ್ನು ಮತ್ತಷ್ಟು ಚುರುಕುಗಳಿಸಿದ್ದಾರೆ.ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಸಂತ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಡೀಪ್ ಫೇಕ್ ಮತ್ತು ನಕಲಿ ಬಿಕಿನಿ ವಿಡಿಯೋ ಪ್ರಕರಣದಲ್ಲಿ ದೊಡ್ಡ ಮಟ್ಟದ ಕ್ರಮ ಕೈಗೊಂಡಿದ್ದಾರೆ.ಒಟ್ಟು 29 ಸಾಮಾಜಿಕ ಜಾಲತಾಣ ಅಕೌಂಟ್ ಗಳ ವಿರುದ್ಧ ದಾಖಲಿಸಲಾಗಿದ್ದು,ತನಿಖೆ ತಿರುಕುಗೊಂಡಿದೆ.
ಈ ಪ್ರಕರಣದಲ್ಲಿ 9 instagram ಅಕೌಂಟ್ ಗಳು,14 ಟ್ವಿಟರ್ ಅಕೌಂಟ್ಗಳು ಹಾಗೂ 6 ಫೇಸ್ಬುಕ್ ಪೇಜ್ ಗಳು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. AI ಹಾಗೂ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ನಕಲಿ ದೃಶ್ಯಗಳನ್ನು ಸೃಷ್ಟಿಸಿ ಹರಡಿದ ಆರೋಪದ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಲಾಗಿದೆ.
ಐಟಿ ಆ್ಯಕ್ಟ್ 66C, 66D ಹಾಗೂ ಭಾರತೀಯ ನ್ಯಾಯ ಸಮಿತಿ ಸೆಕ್ಷನ್ 75 (3),79, 336,356,351,352 ಮತ್ತು 294ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಮೂಲಕ ಗುರುತಿನ ಕಳವು, ಆನ್ಲೈನ್ ವಂಚನೆ ಹಾಗೂ ಮಹಿಳೆಯ ಗೌಪ್ಯತೆಗೆ ಧಕ್ಕೆ ತರುವ ಕೃತ್ಯಗಳ ವಿರುದ್ಧ ಗಂಭೀರ ಕಾನೂನು ಕ್ರಮ ಆರಂಭವಾಗಿದೆ. ಸೈಬರ್ ಪೊಲೀಸರು ಆರೋಪಿತ ಅಕೌಂಟ್ಗಳ ಡಿಜಿಟಲ್ ಚಟುವಟಿಕೆಗಳನ್ನು ಪರಿಶೀಲಿಸಿದ್ದು,ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ದುರ್ಬಳಕೆ ತೀವ್ರವಾಗುತ್ತಿದ್ದು,ಸೆಲೆಬ್ರಿಟಿಗಳನ್ನ ನಕಲಿ ಚಿತ್ರಗಳನ್ನು ಸೃಷ್ಟಿಸುವ ' ಡೀಪ್ ಫೇಕ್' ದೊಡ್ಡ ಪಿಡುಗಾಗಿ ಪರಿಣಮಿಸಿದೆ.ಈ ಹಿಂದೆ ನಟಿ ರಶ್ಮಿಕ ಮಂದಣ್ಣ ಅವರು ಇದೇ ರೀತಿಯ ಸಮಸ್ಯೆ ಎದುರಿಸಿದ್ದರು.ಆ ಸಂದರ್ಭದಲ್ಲಿ ಬಂಧನಗಳು ನಡೆದಿದ್ದವು.
ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಸಂತ ಅವರ ಡೀಪ್ ಫೇಕ್ ವಿಡಿಯೋ ಹಾಗೂ ನಕಲಿ ಫೋಟೋಗಳ ವೈರಲ್ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.ಈ ಹಿಂದೆ ಹಿರಿಯ ನಟಿ ರಮ್ಯಾ ಹಾಗೂ ನಟ ದರ್ಶನ್ ತೂಗುದೀಪ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್ ಗಳು ಬಂದ ಪ್ರಕರಣಗಳಲ್ಲಿ ಕ್ರಮ ಕೈಗೊಂಡಿದ್ದ ಪೊಲೀಸರು ಹಲವರನ್ನು ಬಂಧಿಸಿದ್ದರು.
ಅದೇ ರೀತಿಯಲ್ಲಿ ಇದೀಗ ರುಕ್ಮಿಣಿ ವಸಂತ ಪ್ರಕರಣದಲ್ಲೂ ಕಠಿಣ ಕ್ರಮಕ್ಕೆ ಮುಂದಾಗುವ ಸಾಧ್ಯತೆ ಇದೆ ಎಂದು ಮೂಲಗಳು ಸೂಚಿಸಿವೆ.ಒಟ್ಟು 29 ಸೋಶಿಯಲ್ ಮೀಡಿಯಾ ಅಕೌಂಟ್ ಗಳ ವಿರುದ್ಧ ಈಗಾಗಲೇ ದಾಖಲಾಗಿದ್ದು,ಕೆಲವು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
AI ಮತ್ತು ಡೀಪ್ ಫೇಕ್ ತಂತ್ರಜ್ಞಾನ ದುರ್ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿತ್ರರಂಗದ ತಾರೆಯರಲ್ಲಿ ಆತಂತ ಹೆಚ್ಚಾಗಿದೆ.ಇಂತಹ ಘಟನೆಗಳು ಸೆಲೆಬ್ರಿಟಿಗಳ ಗೌಪ್ಯತೆ ಹಾಗೂ ಭದ್ರತೆ ಕುರಿತ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು,ಸೈಬರ್ ಕಾನೂನುಗಳ ಕಠಿಣ ಜಾರಿಯ ಅಗತ್ಯವನ್ನು ಮತ್ತೊಮ್ಮೆ ಒತ್ತಿ ಹೇಳುತ್ತಿವೆ.
Also Read: