Belagavi News :
ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಜಂತರ್ ಮಂತರ್ ನಲ್ಲಿ CJP ಕಾರ್ಯಕರ್ತರ ಸಂಭ್ರಮಾಚರಣೆ
ದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದೆಹಲಿಯ ಜಂತರ್ -ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ " ಕಾಕ್ ರೋಚ್ ಜನತಾ ಪಾರ್ಟಿ (CJP)" ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
NEET ಪರೀಕ್ಷಾ ಅಕ್ರಮದ ವಿರುದ್ಧ ದೇಶಾದ್ಯಂತ ವ್ಯಕ್ತವಾಗುತ್ತಿರುವ ಆಕ್ರೋಶದ ನಡುವೆಯೇ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜಂತರ್ -ಮಂತರ್ ನಲ್ಲಿ ನಡೆಯುತ್ತಿದ್ದ CJP ಪ್ರತಿಭಟನಾ ಸ್ಥಳದಲ್ಲಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಯಿತು. ಸಿಜೆಪಿ ಸಂಸ್ಥಾಪಕ " ಅಭೀಜಿತ್ ದೀಪ್ಕೆ" ಸೇರಿದಂತೆ ಹಲವು ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.
NEET-UG ಪರೀಕ್ಷೆಯಲ್ಲಿನ ಅಕ್ರಮಗಳ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯ ನಡುವೆಯೇ ಈ ಬೆಳವಣಿಗೆ ನಡೆದಿದ್ದು, ಸಿಜೆಪಿ ಕಾರ್ಯಕರ್ತರು ಇದನ್ನು ತಮ್ಮ ಹೋರಾಟಕ್ಕೆ ಸಿಕ್ಕ ಪ್ರತಿಕ್ರಿಯೆ ಎಂದು ಬಣ್ಣಿಸಿದ್ದಾರೆ.