Belagavi News :
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಓಡಿಸ್ಸಾದ ಸಂಸದ ಧರ್ಮೇಂದ್ರ ಪ್ರಧಾನ್ ಸೋಮವಾರ ಸಂಸತ್ತಿನಲ್ಲಿ ಮುಂಗಾರು ಅಧಿವೇಶನದಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಗಮಿಸಿದರು.
ಧರ್ಮೇಂದ್ರ ಪ್ರಧಾನ್ ಅವರು ಸದನದೊಳಗೆ ಪ್ರವೇಶಿಸುತ್ತಿದ್ದಂತೆ ಲೋಕಸಭೆಯಲ್ಲಿ ಕುತೂಹಲಕಾರಿ ವಾತಾವರಣ ನಿರ್ಮಾಣವಾಯಿತು. ಅವರನ್ನು ಕಂಡ ಬಿಜೆಪಿ ಹಾಗೂ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಸಂಸದರು 'ಧರ್ಮೇಂದ್ರ ಪ್ರಧಾನ್ ಜಿಂದಾಬಾದ್' ಎಂದು ಘೋಷಣೆ ಕೂಗಿ ಆತ್ಮೀಯವಾಗಿ ಸ್ವಾಗತಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದೀಗ ರಾಜಿನಾಮೆ ಬಳಿಕ ಸಂಸತ್ ಅಧಿವೇಶನದಲ್ಲಿ ಅವರು ಮೊದಲ ಹಾಜರಾತಿ ಗಮನ ಸೆಳೆದಿದೆ.
ಲೋಕಸಭೆಯಲ್ಲಿ ಎನ್ ಡಿ ಎ ಸಂಸದರಿಂದ ದೊರೆತ ಸ್ವಾಗತವು ಸದನದೊಳಗಿನ ರಾಜಕೀಯ ಬೆಳವಣಿಗೆಗಳ ನಡುವೆ ವಿಶೇಷ ಗಮನ ಸೆಳೆಯಿತು.
ಧರ್ಮೇಂದ್ರ ಪ್ರಧಾನ್ ನಿರ್ಧಾರಕ್ಕೆ ಬಿಜೆಪಿ ನಾಯಕರ ಮೆಚ್ಚುಗೆ ; ನೈತಿಕ ಹೊಣೆ ಹೊತ್ತ ನಡೆಗೆ ಶ್ಲಾಘನೆ :
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ್ ಅವರು ನಿರ್ಧಾರವನ್ನು ಬಿಜೆಪಿ ಹಾಗೂ ಮೈತ್ರಿಕೂಟದ ನಾಯಕರು ಶ್ಲಾಘಿಸಿದರು.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಹಾಗೂ ಪಕ್ಷದ ತತ್ವಗಳಿಗೆ ಬದ್ಧರಾಗಿ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ರಾಜಿನಾಮೆ ಬೆಳಿಗ್ಗೆ ಮೊದಲ ಬಾರಿಗೆ ಲೋಕಸಭೆಗೆ ಆಗಮಿಸಿದ ಧರ್ಮೇಂದ್ರ ಪ್ರಧಾನ ಅವರಿಗೆ ಎನ್ ಡಿ ಎ ಸಂಸದರು ಜಿಂದಾಬಾದ್ ಘೋಷಣೆಯೊಂದಿಗೆ ಸ್ವಾಗತ ನೀಡಿದ್ದರು. ಈ ವೇಳೆ ನಾಯಕರು ಅವರ ನಡೆಗೆ ಬೆಂಬಲ ವ್ಯಕ್ತಪಡಿಸಿದರು.
ನೀಟ್ ಪ್ರಕರಣದ ಬಳಿಕ ಸರ್ಕಾರ ಕೈಗೊಂಡ ಕ್ರಮಗಳು ಹಾಗೂ ಧರ್ಮೇಂದ್ರ ಪ್ರಧಾನ ಅವರ ನಿರ್ಧಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಇದೀಗ ಬಿಜೆಪಿ ನಾಯಕರು ಅವರ ನೈತಿಕ ಹೊಣೆಗಾರಿಕೆಯನ್ನು ಉಲ್ಲೇಖಿಸಿ ಬೆಂಬಲ ನೀಡಿದ್ದಾರೆ.
ನೀಟ್ ಅಕ್ರಮ ಪ್ರಕರಣ - ಪ್ರತಿಭಟನೆ ನಡುವೆ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜಿನಾಮೆ :
ನೀಡ್ ಯು ಜಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ ಅವರು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಜುಲೈ 25ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್ , ದೇಶದ ಯುವಶಕ್ತಿ ಯಾವುದೇ ಗೊಂದಲಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದು ತಿಳಿಸಿದ್ದರು.
ಜಂತರ್ ಮಂತರ್ ನಲ್ಲಿ ನಡೆದ ನಿರಂತರ ಪ್ರತಿಭಟನೆಗಳ ನಡುವೆ ನೀಟ್ ಪರೀಕ್ಷೆಯ ಪಾರದರ್ಶಕತೆ ಕುರಿತು ಪ್ರಶ್ನೆಗಳು ಎದ್ದಿದ್ದವು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸ ಕಾಪಾಡುವ ನಿಟ್ಟಿನಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ ಎಂದು ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿದ್ದರು.
ಇದೇ ವೇಳೆ, ಪ್ರತಿಭಟನೆಗಳನ್ನು ದೇಶ ವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು ಎಂಬ ಕಾರಣವೂ ತಮ್ಮ ನಿರ್ಧಾರದ ಹಿಂದೆ ಇದೆ ಎಂದು ಅವರು ಹೇಳಿದ್ದರು.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ನೀಟ್ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳು ರಾಷ್ಟ್ರೀಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿವೆ.