<?= $pageTitle ?>
Logo
ಮುಖಪುಟ ಓದುವುದು ಕೇಳು
Entertainment

'ಕರಾವಳಿ' ಸಿನಿಮಾದ ಡಬ್ಬಿಂಗ್ ಕುರಿತು ಹರಿದಾಡಿದ ಸುದ್ದಿಗೆ ನಿರ್ದೇಶಕರ ಸ್ಪಷ್ಟನೆ

'ಕರಾವಳಿ' ಸಿನಿಮಾದ ಡಬ್ಬಿಂಗ್ ಕುರಿತು ಹರಿದಾಡಿದ ಸುದ್ದಿಗೆ ನಿರ್ದೇಶಕರ ಸ್ಪಷ್ಟನೆ
Summary: After news that Prajwal Devaraj did not dub for the movie 'Karavali' was circulating on social media, the director has clarified. He has cleared up the confusion surrounding the dubbing of the movie and revealed the truth behind the viral news.

Belagavi News :

' ಕರಾವಳಿ' ಟ್ರೈಲರ್ ಬಿಡುಗಡೆಗೆ ಪ್ರಜ್ವಲ್ ದೇವರಾಜ್ ಗೈರು: ಅಭಿಮಾನಿಗಳ ಆಕ್ರೋಶಕ್ಕೆ ನಿರ್ದೇಶಕ ಗುರುದತ್ ಗಾಣಿಗ ಸ್ಪಷ್ಟನೆ

' ಕರಾವಳಿ' ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಅವರ ಅನುಪಸ್ಥಿತಿ ಅಭಿಮಾನಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕಾರ್ಯಕ್ರಮಕ್ಕೆ ಆಗಮಿಸಬೇಕಿದ್ದ ನಟ ಗೈರಾಗಿದ್ದರಿಂದ ಕೆಲ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಚಿತ್ರದ ನಿರ್ದೇಶಕ ಗುರುದತ್ ಗಾಣಿಗ, ಪ್ರಜ್ವಲ್ ದೇವರಾಜ್ ಅವರು ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಮುನ್ನಾದಿನ ರಾತ್ರಿ ತಿಳಿಸಿದ್ದರು ಎಂದು ಹೇಳಿದ್ದಾರೆ. ಅಲ್ಲದೆ, ಅವರ ಅಭಿಮಾನಿಗಳ ಸುಮಾರು 100 ಮಂದಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂಬ ಮಾಹಿತಿಯ ಮೇರೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

ಆದರೆ, ಕೊನೆಯ ಕ್ಷಣದಲ್ಲಿ ಪ್ರಜ್ವಲ್ ದೇವರಾಜ್ ಅವರು ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ. ಇದರಿಂದ ಅಭಿಮಾನಿಗಳಲ್ಲಿ ನಿರಾಸೆ ಮೂಡಿದ್ದು, ' ಕರಾವಳಿ' ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.

' ಕರಾವಳಿ' ಚಿತ್ರದ ಡಬ್ಬಿಂಗ್ ವಿಚಾರವಾಗಿ ನಿರ್ದೇಶಕ ಗುರುದತ್ ಗಾಣಿಗ ಅವರು ಸ್ಪಷ್ಟನೆ ನೀಡಿದ್ದಾರೆ. ಚಿತ್ರದಲ್ಲಿ ಮಂಗಳೂರು ಶೈಲಿಯ ಭಾಷೆ ಬಳಸಲಾಗಿರುವುದರಿಂದ, ನಟ ಪ್ರಜ್ವಲ್ ದೇವರಾಜ್ ಅವರ ಧ್ವನಿ ಆ ಭಾಷಾ ಶೈಲಿಗೆ ಹೊಂದಿಕೆಯಾಗುತ್ತದೆಯೇ ಎಂಬ ಕುರಿತು ಚಿತ್ರತಂಡದಲ್ಲಿ ಚರ್ಚೆ ನಡೆದಿತ್ತು ಎಂದು ಅವರು ತಿಳಿಸಿದ್ದಾರೆ.

ಡಬ್ಬಿಂಗ್ ಕೆಲಸಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಮಾಹಿತಿ ನೀಡಿರುವ ಗುರುದತ್, ಚಿತ್ರದ ಡಬ್ಬಿಂಗ್ ಗಾಗಿ ಸ್ಟುಡಿಯೋವನ್ನು ಕಾಯ್ದಿರಿಸಲಾಗಿದ್ದು, ಕೆಲಸಗಳು ಶೀಘ್ರದಲ್ಲೇ ಮುಂದುವರಿಯಲಿವೆ ಎಂದಿದ್ದಾರೆ.

' ಕರಾವಳಿ' ಸಿನಿಮಾ ಇದೆ ಡಿಸೆಂಬರ್ 24ರಂದು ತೆರೆಗೆ ಬರಲು ಸಿದ್ಧವಾಗಿದ್ದು, ಚಿತ್ರದ ಡಬ್ಬಿಂಗ್ ಹಾಗೂ ಬಿಡುಗಡೆಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಗುರುದತ್ ಗಾಣಿಗ ಅಸಮಾಧಾನ: ' ಕರಾವಳಿ' ಸಿನಿಮಾ ವಿವಾದಕ್ಕೆ ಕಾರಣವೇನು?

ಕನ್ನಡ ಚಿತ್ರರಂಗದಲ್ಲಿ ಆರಂಭದಿಂದಲೂ ಕುತೂಹಲ ಮೂಡಿಸಿರುವ ' ಕರಾವಳಿ' ಸಿನಿಮಾ ಇದೀಗ ವಿವಾದದ ಕಾರಣದಿಂದ ಸುದ್ದಿಯಲ್ಲಿದೆ. ಸಿನಿ ಪ್ರೇಮಿಗಳು ನಿರೀಕ್ಷೆಯಿಂದ ಎದುರು ನೋಡುತ್ತಿರುವ ಈ ಚಿತ್ರದ ಬಿಡುಗಡೆ ದಿನ ಈಗಾಗಲೇ ಘೋಷಣೆಯಾಗಿದ್ದು, ಚಿತ್ರತಂಡ ಬಿಡುಗಡೆ ಸಿದ್ಧತೆಯಲ್ಲಿ ತೊಡಗಿದೆ.

ಆದರೆ ಸಿನಿಮಾ ತೆರೆಗೆ ಬರುವ ಮುನ್ನವೇ ನಟ ಪ್ರಜ್ವಲ್ ದೇವರಾಜ್ ಹಾಗು ನಿರ್ದೇಶಕ ಗುರುದತ್ ಗಾಣಿಗ ಅವರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಆಗಮಿಸಿ ಗಲಾಟೆ ಹಾಗೂ ವಾಗ್ವಾದ ನಡೆಸಿದ ಘಟನೆ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ನಿರ್ದೇಶಕ ಗುರುದತ್ ಗಾಣಿಗ, ಕೆಲ ಅಭಿಮಾನಿಗಳ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದ ವೇಳೆ ನಡೆದ ಘಟನೆ ಹಾಗೂ ತಮ್ಮ ನಿಲುವಿನ ಬಗ್ಗೆ ಅವರು ಮಾತನಾಡಿದ್ದು, ಇದರ ವಿಡಿಯೋ ಇದೀಗ ಚರ್ಚೆಗೆ ಗ್ರಾಸವಾಗಿದೆ.

' ಕರಾವಳಿ' ಚಿತ್ರದ ಟ್ರೈಲರ್ ಬಿಡುಗಡೆ, ಪ್ರಜ್ವಲ್ ದೇವರಾಜ್ ಅಭಿಮಾನಿಗಳ ಆಕ್ರೋಶ ಹಾಗೂ ನಿರ್ದೇಶಕ ಗುರುದತ್ ಗಾಣಿಗ ಅವರ ಪ್ರತಿಕ್ರಿಯೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online