<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಬೆಳಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ ? ಅಧ್ಯಕ್ಷರ ಆಯ್ಕೆ ವೇಳೆ ಕಾರ್ಯಕರ್ತರ ನಡುವೆ ಗಲಾಟೆ

ಬೆಳಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ ? ಅಧ್ಯಕ್ಷರ ಆಯ್ಕೆ ವೇಳೆ ಕಾರ್ಯಕರ್ತರ ನಡುವೆ ಗಲಾಟೆ
Summary: A clash broke out between workers during the president election meeting at the Belgaum Congress office. The hysteria that erupted in the meeting has led to a debate in the political circles.

Belagavi News:

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಗರ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಅಭಿಪ್ರಾಯ ಸಂಗ್ರಹ ಸಭೆ ಗಲಾಟೆಗೆ ತಿರುಗಿದೆ. ಮನೋಜ್ ಚವ್ಹಾಣ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಹೈಡ್ರಾಮಾ ಸೃಷ್ಟಿಯಾಗಿದೆ.

ನಗರದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಅಭಿಪ್ರಾಯ ಸಂಗ್ರಹ ನಡೆಯುತ್ತಿದ್ದ ವೇಳೆ ಕೆಲ ಕಾರ್ಯಕರ್ತರು ಪರಸ್ಪರ ಆರೋಪ ಮತ್ತು ಪ್ರತ್ಯಾರೋಪ ನಡೆಸಿದ್ದು, ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ.

ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಸಭೆ ಆಯೋಜಿಸಲಾಗಿತ್ತು. ಆದರೆ ಸಭೆಯಲ್ಲಿ ಉಂಟಾದ ಗೊಂದಲ ಕಾಂಗ್ರೆಸ್ ಆಂತರಿಕ ಬೆಳವಣಿಗೆಗಳ ಕುರಿತು ಚರ್ಚೆಗೆ ಕಾರಣವಾಗಿದೆ.

ಘಟನೆ ಬಳಿಕ ಮುಖಂಡರು ಕಾರ್ಯಕರ್ತರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸಿದ್ದು, ನಗರ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಂದಿನ ಹಂತಗಳಲ್ಲಿ ಸಾಗಲಿದೆ.

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ - ಮಾಜಿ ಶಾಸಕ ರಮೇಶ್ ಕುಡಚಿ ಆಪ್ತನ ಮೇಲೆ ಹಲ್ಲೆ ಆರೋಪ :

ಕಾಂಗ್ರೆಸ್ ನಗರ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಮತ್ತೆ ಗದ್ದಲ ಉಂಟಾಗಿದೆ. ವೀಕ್ಷಕರ ಎದುರಲ್ಲೇ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಗಲಾಟೆ ನಡೆಸಿದ್ದು, ಪರಿಸ್ಥಿತಿ ಬಿಗುವಿನ ವಾತಾವರಣಕ್ಕೆ ತಿರುಗಿದೆ.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಭಿಪ್ರಾಯ ಸಂಗ್ರಹ ಸಭೆ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಾಜಿ ಶಾಸಕ ರಮೇಶ್ ಕುಡಚಿ ಅವರ ಆಪ್ತ ಹೇಮಂತ್ ಲಿಂಗ ಅವರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದಾಗಲೇ ಈ ಘಟನೆ ನಡೆದಿದ್ದು, ನಗರ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ಒಳಜಗಳ ಮತ್ತಷ್ಟು ಬಹಿರಂಗವಾಗಿದೆ.

ಸಭೆಯಲ್ಲಿ ಉಂಟಾದ ಗೊಂದಲದಿಂದ ಕೆಲಕಾಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಕುರಿತು ಕಾಂಗ್ರೆಸ್ ಮುಖಂಡರಿಂದ ಯಾವುದೇ ಅಧಿಕೃತ ಸ್ಪಷ್ಟನೆ ಇನ್ನೂ ಹೊರಬಂದಿಲ್ಲ.

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ - ಪೊಲೀಸರ ಮಧ್ಯ ಪ್ರದೇಶದಿಂದ ಪರಿಸ್ಥಿತಿ ಗಂಭೀರ :

ಬೆಳಗಾವಿ ನಗರ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಉಂಟಾದ ಗಲಾಟೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಗದ್ದಲ ಉಂಟಾಗಿತ್ತು. ಈ ಹೈಡ್ರಾಮಾ ಬಳಿಕ ಪರಿಸ್ಥಿತಿ ಬಿಗುವಿಗೆ ತಿರುಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಮಾರ್ಕೆಟ್ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಸಮಾಧಾನಪಡಿಸುವ ಮೂಲಕ ಗೊಂದಲವನ್ನು ತಿಳಿಗೊಳಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ನಡೆದ ಬೆಳವಣಿಗೆ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online