"ವಿಜಯೇಂದ್ರನನ್ನು ಕಿತ್ತು ಬಿಸಾಕಿ" ವೈರಲ್ ಆಡಿಯೋದಿಂದ ಬಿಜೆಪಿಯಲ್ಲಿ ರಾಜಕೀಯ ಸಂಚಲನ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ದೆಹಲಿ ನಾಯಕರಿಗೆ ಒತ್ತಾಯ ಮಾಡಿರುವುದಾಗಿ ಹೇಳಲಾಗುತ್ತಿರುವ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ಬಿಜೆಪಿ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಈ ಆಡಿಯೋದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಅವರು ಕೇಂದ್ರದ ಪ್ರಭಾವಿ ನಾಯಕರೊಬ್ಬರೊಂದಿಗೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ತೆರವುಗೊಳಿಸುವ ಕುರಿತು ಮಾತುಕತೆ ನಡೆಸಿದ್ದಾರೆ. ಎನ್ನುವ ಆರೋಪ ಕೇಳಿ ಬಂದಿದೆ. ಆದರೆ, ಈ ಆಡಿಯೋದ ಸತ್ಯಾಸತ್ಯತೆ ಕುರಿತು ಯಾವುದೇ ಅಧಿಕೃತ ದೃಢೀಕರಣ ಇರುವರೆಗೆ ಲಭ್ಯವಾಗಿಲ್ಲ.
ಆಡಿಯೋ ವೈರಲ್ ಆದ ಬೆನ್ನೆಲ್ಲೇ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ಮತ್ತೆ ಜೋರಾಗಿದ್ದು, ಪಕ್ಷದೊಳಗಿನ ಆಂತರಿಕ ಭಿನ್ನಮತದ ಬಗ್ಗೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.
ವೈರಲ್ ಆಗಿರುವ ಆಡಿಯೋದಲ್ಲಿ ಏನಿದೆ? ಯಾರು ಏನು ಮಾತನಾಡಿದ್ದಾರೆ ಎಂಬುದರ ಕುರಿತು ಕುತೂಹಲ ಹೆಚ್ಚಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.