belagavi news :
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನೆಲು ಈ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದು ಬಹುತೇಕ ನಿಶ್ಚಿತವಾಗಿದ್ದರೂ, ನಿಯಮಾನುಸಾರ ಶಾಸಕಾಂಗ ಪಕ್ಷದ ಸಭೆ ನಡೆಸಿ ಅಧಿಕೃತವಾಗಿ ನಾಯಕತ್ವ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಈ ಸಭೆಯಲ್ಲಿ ಎಲ್ಲಾ ಕಾಂಗ್ರೆಸ್ ಶಾಸಕರ ಒಮ್ಮತದ ಬೆಂಬಲದೊಂದಿಗೆ ಡಿಕೆ ಶಿವಕುಮಾರ್ ಅವರ ಹೆಸರು ಅಂತಿಮಗೊಂಡಿದೆ.
ಈಗಾಗಲೇ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಮೂರು ವರ್ಷಗಳ ಕಾಲ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾಗಿಯೂ ಮಹತ್ವದ ಪಾತ್ರ ವಹಿಸಿದ್ದರು. ಅವರ ಸಂಘಟನಾ ಶಕ್ತಿ ಮತ್ತು ರಾಜಕೀಯ ಅನುಭವವು ಈ ಆಯ್ಕೆಗೆ ಪ್ರಮುಖ ಕಾರಣವಾಗಿದೆ ಎಂದು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.
ಈ ನಿರ್ಧಾರದಿಂದ ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಯ ಆರಂಭವಾಗಿದ್ದು, ಮುಂದಿನ ಸಚಿವ ಸಂಪುಟ ರಚನೆ ಹಾಗೂ ಆಡಳಿತಾತ್ಮಕ ಬದಲಾವಣೆಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP ) ಸಭೆಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಡಿಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ನಿರ್ಣಯವನ್ನು ಜಿ ಪರಮೇಶ್ವರ್ ಅನುಮೋದಿಸಿದ್ದು, ಸಭೆಯಲ್ಲಿ ಹಾಜರಿದ್ದ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ಕೇಂದ್ರದ ವೀಕ್ಷಕರಾಗಿ ಜಯರಾಮ್ ರಮೇಶ್, ಕೆ.ಸಿ.ವೇಣುಗೋಪಾಲ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ದೀಪ್ ಸಿಂಗ್ ಸುರ್ಜೆವಾಲಾ ಭಾಗವಹಿಸಿದ್ದರು.
ಸಭೆಗೆ ಮೊದಲು ವಿಧಾನ ಸೌಧ ಕೊಠಡಿಯಲ್ಲಿ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿ ಡಿಕೆ ಶಿವಕುಮಾರ್ ಆಗಮಿಸಿದ ದೃಶ್ಯ ಗಮನ ಸೆಳೆದಿದೆ. ನಂತರ (CLP) ಸಭೆಯಲ್ಲಿ ಎಲ್ಲಾ ಶಾಸಕರಿಗೆ ಅವರು ಸ್ವತಃ ಕುಳಿತ ಸ್ಥಳಕ್ಕೆ ತೆರಳಿ ಹಸ್ತಲಾಘವ ಮಾಡಿರುವುದು ವಿಶೇಷವಾಗಿತ್ತು.
ಈ ನಿರ್ಧಾರದಿಂದ ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಅಧ್ಯಯ ಆರಂಭವಾಗಿದ್ದು, ಮುಂದಿನ ಆಡಳಿತ ಮತ್ತು ಸಚಿವ ಸಂಪುಟ ರಚನೆ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು , ಡಿಕೆ ಶಿವಕುಮಾರ್ ಅವರು, ಜೂನ್ 3ರಂದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುವ ನಿಶ್ಚಿತವಾಗಿದೆ. ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅಧಿಕೃತವಾಗಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಮಾಹಿತಿ ಪ್ರಕಾರ, ನೊಣವಿನ ಕೆರೆ ಕಾಡು ಸಿದ್ದೇಶ್ವರ ಮಠದ ಸ್ವಾಮೀಜಿಯ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ ಆಧಾರದ ಮೇಲೆ ಪ್ರಮಾಣವಚನ ದಿನಾಂಕವನ್ನು ಅಂತಿಮಗೊಳಿಸಲಾಗಿದೆ. ಜೂನ್ ಮೂರರಂದು ಬುದುವಾರ ಸಂಜೆ ಸರಳ ಹಾಗೂ ಆಡಂಬರವಿಲ್ಲದ ಕಾರ್ಯಕ್ರಮದಲ್ಲಿ ಹೊಸ ಮುಖ್ಯಮಂತ್ರಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.
ಲೋಕಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಬಾರಿ ಆರ್ಭಟವಿಲ್ಲದೆ, ಸರಳವಾಗಿ ಆಯೋಜಿಸಲಾಗಿದೆ ಎಂದು ಬಂದಿದೆ.
ಕಾಂಗ್ರೆಸ್ ಪಕ್ಷದ ಒಳಗಿನ ನಾಯಕರು ಮತ್ತು ಶಾಸಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದ್ದು, ಮುಂದಿನ ಆಡಳಿತದ ದಿಕ್ಕು ಕುರಿತು ಕುತೂಹಲ ಹೆಚ್ಚಾಗಿದೆ.
Also Read: