Belagavi news:
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಚೀನಾಕ್ಕೆ ಅಧಿಕೃತ ಭೇಟಿ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ವಾಷಿಂಗ್ಟನ್ ನಿಂದ ಬೀಜಿಂಗ್ ಕಡೆಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರವಾಸದ ಪ್ರಮುಖ ಉದ್ದೇಶವಾಗಿ ಅಮೆರಿಕ ಚೀನಾ ನಡುವಿನ ಪರಸ್ಪರ ಸುಂಕ ನೀತಿಗಳು ಹಾಗೂ ವ್ಯಾಪಾರ ಸಂಬಂಧಗಳನ್ನು ಸುಗಮಗೊಳಿಸುವ ಕುರಿತು ಉನ್ನತ ಮಟ್ಟದ ಮಾತು ಕಥೆಗಳು ನಡೆಯಲಿವೆ. ಅಧ್ಯಕ್ಷ ಟ್ರಂಪ್ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊಂದಿಗೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಚೀನಾ ಪ್ರವಾಸ ಆರಂಭಿಸುವ ಮುನ್ನ ಮಾತನಾಡಿದ ಟ್ರಂಪ್ " ನಾವು ಅಧ್ಯಕ್ಷ ಕ್ಸಿ ಅವರೊಂದಿಗೆ ವಿವಿಧ ವಿಷಯಗಳ ಬಗ್ಗೆ ಮಾತನಾಡಲಿದ್ದೇವೆ. ವಿಶೇಷವಾಗಿ ವ್ಯಾಪಾರ ಅಭಿವೃದ್ಧಿ ಮತ್ತು ಪರಸ್ಪರ ಸಂಬಂಧಗಳನ್ನು ಬಲಪಡಿಸುವ ಕುರಿತು ಚರ್ಚೆ ನಡೆಯಲಿದೆ" ಎಂದು ತಿಳಿಸಿದ್ದಾರೆ.
" ಕ್ಸಿ ನನ್ನ ಸ್ನೇಹಿತ, ಅವರು ಸಹಕಾರ ಮನೋಭಾವದ ನಾಯಕ. ಇದು ರೋಮಾಂಚಕಾರಿ ಪ್ರವಾಸವಾಗಿದ್ದು ಉತ್ತಮ ಫಲಿತಾಂಶಗಳು ಹೊರಬರುವ ವಿಶ್ವಾಸವಿದೆ" ಎಂದು ಟ್ರಂಪ್ ಹೇಳಿದ್ದಾರೆ.
ಪಶ್ಚಿಮ ಏಷ್ಯಾ ಉದ್ವಿಗ್ನತೆ: ಚೀನಾ ಭೇಟಿ ವೇಳೆ ಟ್ರಂಪ್ ಹೇಳಿಕೆಗಳು:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಭೇಟಿ ಸಂದರ್ಭದಲ್ಲಿ ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ಕುರಿತು ದೀರ್ಘವಾಗಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಚೀನಾ ದೇಶ ಕ್ಸಿ ಜಿನ್ ಪಿಂಗ್ ಅವರನ್ನು ಅವರು "ಒಳ್ಳೆಯ ನಾಯಕ" ಎಂದು ಕರೆದಿದ್ದು, ಇಬ್ಬರ ನಡುವೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮಾತುಕತೆ ನಡೆಯಲಿದೆ ಎಂದಿದ್ದಾರೆ.
ಇದೇ ವೇಳೆ ಇರಾನ್ ವಿಚಾರದ ಬಗ್ಗೆ ಮಾತನಾಡಿದ ಟ್ರಂಪ್, "ಈಗಾಗಲೇ ನಾವು ಇರಾನ್ ವಿರುದ್ಧ ಗೆಲವು ಸಾಧಿಸಿದ್ದೇವೆ. ಆ ವಿಷಯವನ್ನು ಚರ್ಚೆಯ ಪ್ರಮುಖ ಭಾಗವನ್ನಾಗಿ ಮಾಡಲು ಬಯಸುವುದಿಲ್ಲ" ಎಂದು ಹೇಳಿದ್ದಾರೆ.
"ಇರಾನ್ ವಿಚಾರದಲ್ಲಿ ನಮಗೆ ಯಾವುದೇ ಸಹಾಯದ ಅಗತ್ಯವಿಲ್ಲ. ನಾವು ಒಂದೆಲ ಒಂದು ರೀತಿಯಲ್ಲಿ ಗೆಲ್ಲುತ್ತೇವೆ. ಅವರ ನೌಕಾಪಡೆ ಮತ್ತು ವಾಯುಪಡೆಗಳನ್ನು ಈಗಾಗಲೇ ನಾಶಪಡಿಸಲಾಗಿದೆ. ಅವರು ಯುದ್ಧದಲ್ಲಿ ಬಹುತೇಕ ಎಲ್ಲವನ್ನು ಕಳೆದುಕೊಂಡಿದ್ದಾರೆ" ಎಂದು ಟ್ರಂಪ್ ಹೇಳಿದ್ದಾರೆ ಎಂಬುದಾಗಿ ವರದಿಯಾಗಿದೆ.
ಟ್ರಂಪ್ ಅವರು ಏರ್ ಫೋರ್ಸ್ ಒನ್ ವಿಮಾನದಲ್ಲಿ ಬೀಜಿಂಗ್ ಕಡೆ ಪ್ರಯಾಣ ಬೆಳೆಸಿದ್ದು, ಅವರೊಂದಿಗೆ ವಿದೇಶಾಂಗ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಮಾರ್ಕೊ ರುಬಿಯೋ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, ಯುಎಸ್ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್ , ಜೊತೆಗೆ ಏರಿಕ್ ಟ್ರಂಪ್ ಮತ್ತು ಲಾರಾ ಟ್ರಂಪ್ ಸಹ ಇದ್ದರು ಎಂದು ತಿಳಿದುಬಂದಿದೆ.
Also Read: