Belagavi News:
ಉತ್ತರ ಬಂಗಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ಮಹತ್ವದ ಸಂಪರ್ಕ ಸೇತುವೆಯಾದ ದುಧಿಯಾ ಸೇತುವೆ ಕೊಚ್ಚಿ ಹೋಗಿದ್ದು, ಡಾರ್ಜಿಲಿಂಗ್ ಮತ್ತು ಸಿಲಿಗೂರಿ ನಡುವಿನ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.
ನಿರಂತರ ಮಳೆಯಿಂದ ನದಿಯ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿದ್ದು, ಹರಿವಿನ ಒತ್ತಡವನ್ನು ತಡೆಯಲಾಗದೆ ಸೇತುವೆ ಕುಸಿತಗೊಂಡಿದೆ ಎಂದು ತಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬಳಿಕ ಆ ಪ್ರದೇಶದಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರವಾಸಿಗರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಡಾರ್ಜಿಲಿಂಗ್ - ಸಿಲಿಗುರಿ ಮಾರ್ಗವು ಉತ್ತರ ಬಂಗಾಳದ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಸೇತುವೆ ಕುಸಿತದಿಂದ ಸರಕು ಸಾಗಾಣೆ ಮತ್ತು ಸಾರ್ವಜನಿಕ ಸಂಚಾರಕ್ಕೂ ದೊಡ್ಡ ಹೊಡೆತ ಬಿದ್ದಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸಲು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳು ಆರಂಭವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಬಾರಿ ಮಳೆಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲೂ ಸಂಚಾರ ವ್ಯತ್ಯಯ ಮುಂದುವರೆಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಸ್ಥಳದಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳು ಆರಂಭವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲೂ ಸಂಚಾರ ವ್ಯತ್ಯಯ ಮುಂದುವರೆಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
ಡಾರ್ಜಿಲಿಂಗ್ ನಲ್ಲಿ ದಿಢೀರ್ ಪ್ರಕೃತಿ ವಿಕೋಪ - 200 ಮಿಮೀ ಭಾರಿ ಮಳೆಗೆ ನದಿಗಳು ಅಪಾಯದ ಮಟ್ಟ ಮೀರಿದ ಹರಿವು:
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಸುತ್ತಮುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ದಿಡೀರ್ ಪ್ರಕೃತಿ ವಿಕೋಪ ಸಂಭವಿಸಿದೆ. ಒಂದೇ ಸಮನೆ ಸುರಿದ ಸುಮಾರು 200 ಮಿಮೀ ಭಾರಿ ಮಳೆಯ ಪರಿಣಾಮವಾಗಿ ಗುಡ್ಡಗಾಡು ಪ್ರದೇಶದ ನದಿಗಳು ಹಾಗೂ ಹಳ್ಳಗಳು ಅಪಾಯದ ಮಟ್ಟವನ್ನು ಮೀರಿಸಿ ಹರಿಯುತ್ತಿವೆ.
ನಿರಂತರ ಮಳೆಯ ಕಾರಣದಿಂದ ಹಲವಡೆ ನೀರಿನ ಅರಿವು ತೀವ್ರಗೊಂಡಿದ್ದು, ಭೂಕುಸಿತ ಹಾಗೂ ಪ್ರವಾಹದ ಆತಂಕ ಹೆಚ್ಚಾಗಿದೆ. ಸ್ಥಳೀಯ ನಿವಾಸಿಗಳು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚಿಸಿದ್ದಾರೆ.
ಸಂಕಟ ಪೂರ್ಣ ಪ್ರದೇಶಗಳಲ್ಲಿನ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ಕೆಲ ಗಂಟೆಗಳಲ್ಲೂ ಭಾರಿ ಮಳೆಯ ಮುಂದುವರೆಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಘೋಷಿಸಲಾಗಿದೆ.
ಗುಡ್ಡಗಾಡು ಪ್ರದೇಶಗಳಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಜನಜೀವನ ಆಸ್ತವ್ಯಸ್ತಗೊಂಡಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.
ಡಾರ್ಜಿಲಿಂಗ್ ಭೀಕರ ಮಳೆ - ದುಧಿಯಾ ಸೇತುವೆ ಕೊಚ್ಚಿ ಹೋಗಿ, ಸಿಲಿಗುರಿ - ಮಿರಿಕ್ ಸಂಪರ್ಕ ಕಡಿತ :
ಪಶ್ಚಿಮ ಬಂಗಾಳದ ಡಾರ್ಜಲಿಂಗ್ ತುತ್ತ ಮುತ್ತಲಿನ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದ ನೀರಿನ ತೀವ್ರ ರಭಸ ಹೆಚ್ಚಾಗಿ ಹಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಕಡೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.
ಸಿಲಿಗುರಿ ಮತ್ತು ಮಿರಿಕ್ - ಡಾರ್ಜಿಲಿಂಗ್ ಅನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಲ್ಲಿರುವ "ದುಧಿಯಾ ಸೇತುವೆ " ಪ್ರವಾಹದ ರಭಸಕ್ಕೆ ಸಿಲುಕಿ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಈ ಮಾರ್ಗದ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ವಾಹನ ಸಂಚಾರಕ್ಕೆ ತೀವ್ರ ಆಡಚಣೆ ಉಂಟಾಗಿದೆ.
ನಿರಂತರ ಮಳೆಯ ಪರಿಣಾಮವಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಗ್ರಾಮಗಳಲ್ಲಿ ನೀರನ್ನು ನುಗ್ಗುವ ಆತಂಕವು ಹೆಚ್ಚಾಗಿದೆ. ತಳಿ ಆಡಳಿತ ಮತ್ತು ವಿಪತ್ತು ನಿರ್ವಹಣಾ ತಂಡಗಳು ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.
ಮುಂದಿನ ಗಂಟೆಗಳಲ್ಲೂ ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಎಚ್ಚರಿಕೆ ಘೋಷಿಸಿದ್ದಾರೆ. ಪ್ರವಾಸಿಗರು ಹಾಗೂ ಸ್ಥಳೀಯರು ಸುರಕ್ಷಿತ ಸ್ಥಳಗಳಲ್ಲಿ ಉಳಿಯುವಂತೆ ಸೂಚಿಸಲಾಗಿದೆ.
ಭಾರಿ ಮಳೆಗೆ ದುಧಿಯಾ ಸೇತುವೆ ಕೊಚ್ಚಿ ಹೋಯಿತು - ಡಾರ್ಜಿಲಿಂಗ್ - ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ, ನೂರಾರು ಪ್ರವಾಸಿಗರು ಸಿಲುಕಿಕೊಂಡರು:
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಬೆಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದಿದೆ. ಸುಮಾರು 200 ಮಿಮೀ ಮಳೆ ದಾಖಲಾಗಿರುವ ಹಿನ್ನೆಲೆಯಲ್ಲಿ ನದಿಗಳು ಮತ್ತು ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದೆ.
ಈ ನಡುವೆ ಸಿಲಿಗುರಿ ಮತ್ತು ಮಿರಿಕ್ - ಡಾರ್ಜಿಲಿಂಗ್ ಸಂಪರ್ಕಿಸುವ ಪ್ರಮುಖ ದುಧಿಯಾ ಸೇತುವೆ ಪ್ರವಾಹದ ರಭಸಕ್ಕೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಸೇತುವೆ ಕುಸಿತದ ಜೊತೆಗೆ ಹೆದ್ದಾರಿಯ ಹಲವೆಡೆ ಭಾರಿ ಬೂಕುಸಿತ ಸಂಭವಿಸಿರುವುದರಿಂದ ಡಾರ್ಜಿಲಿಂಗ್ - ಸಿಲಿಗುರಿ ನಡುವಿನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಸಂಚಾರ ಸ್ಥಗಿತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ನೂರಾರು ವಾಹನಗಳು ಸಿಲುಕಿಕೊಂಡಿವೆ. ಪ್ರವಾಸಿ ತಾಣವಾದ ಡಾರ್ಜಿಲಿಂಗ್ ಭೇಟಿ ನೀಡಿದ್ದ ಅನೇಕ ಪ್ರವಾಸಿಗರು ಕೂಡ ರಸ್ತೆ ಸಂಪರ್ಕ ಕಡಿತಗೊಂಡ ಕಾರಣ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಳಿಯ ಆಡಳಿತ ಮತ್ತು 20 ನಿರ್ವಹಣಾ ತಂಡಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಕಾರ್ಯಾಚರಣೆ ನಡೆಸುತ್ತಿವೆ.
ತಗ್ಗು ಪ್ರದೇಶಗಳು ಜಲಾವೃತಗೊಂಡಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕೆಲವು ಗ್ರಾಮಗಳಲ್ಲಿ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವು ನಡೆಯುತ್ತಿದೆ. ಭೂಕುಸಿತದ ಭೀತಿಯಿಂದ ಹಲವೆಡೆ ರಸ್ತೆಗಳನ್ನು ಮುಚ್ಚಲಾಗಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಅಧಿಕಾರಿಗಳು ಪ್ರವಾಸಿಗರಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಸದ್ಯಕ್ಕೆ ಡಾರ್ಜಿಲಿಂಗ್ - ಸಿಲಿಗುರಿ ಮಾರ್ಗದಲ್ಲಿ ಪ್ರಯಾಣಿಸಿದಂತೆ ಸೂಚಿಸಲಾಗಿದ್ದು, ಅಗತ್ಯವಿಲ್ಲದ ಪ್ರಯಾಣಗಳನ್ನು ಮುಂದೂಡುವಂತೆ ಮನವಿ ಮಾಡಿದ್ದಾರೆ.
ಹವಾಮಾನ ಇಲಾಖೆ ಮುಂದಿನ 24 ಗಂಟೆಗಳ ಕಾಲವೂ ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವುದರಿಂದ ಸ್ಥಳೀಯ ಆಡಳಿತ ಘೋಷಿಸಿದೆ. ರಕ್ಷಣಾ ತಂಡಗಳು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
Also Read:
ಸಂಕಷ್ಟದಿಂದ ಪಾರಾದ LNG ಹಡಗು: ಹಾರ್ಮುಜ್ ಜಲಸಂಧಿಯಿಂದ ಭಾರತಕ್ಕೆ ಸುರಕ್ಷಿತ ಪ್ರವೇಶ