<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಎಲೆಕ್ಷನ್ ಡೇ ಫಿಕ್ಸ್ ! ಕರ್ನಾಟಕ ರಾಜಕೀಯದಲ್ಲಿ ಕುತೂಹಲ

ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಎಲೆಕ್ಷನ್ ಡೇ ಫಿಕ್ಸ್ ! ಕರ್ನಾಟಕ ರಾಜಕೀಯದಲ್ಲಿ ಕುತೂಹಲ
Summary: The date for the Karnataka Legislative Council elections has been fixed, and voting for 7 seats will be held on June 18. As soon as the election schedule is announced, activities in state politics are in full swing.

Belagavi news:

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಧಿಕೃತವಾಗಿ ದಿನಾಂಕ ಘೋಷಣೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ನ 3, ಬಿಜೆಪಿ 3, ಹಾಗೂ ಜೆಡಿಎಸ್ 1 ಸದಸ್ಯರ ಅವಧಿ ಜೂನ್ 26ರಂದು ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ತೆರವಾಗಲಿರುವ ಏಳು ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ. ಅಂದೇ ಫಲಿತಾಂಶವು ಪ್ರಕಟಗೊಳ್ಳಲಿದೆ.

ಈ ಬೆಳವಣಿಗೆಯೊಂದಿಗೆ ರಾಜ್ಯದಲ್ಲಿ ಮತ್ತೊಂದು ಪ್ರಮುಖ ರಾಜಕೀಯ ಸಮರ ಆರಂಭವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ತನ್ನ ಸದಸ್ಯರ ಬಲವನ್ನು ಹೆಚ್ಚಿಸಿಕೊಳ್ಳುವ ನೀರಿಕ್ಷೆಯಲ್ಲಿದೆ. ಇತ್ತ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳುವ ಜೊತೆಗೆ ಕನಿಷ್ಠ ಒಂದು ಸ್ಥಾನ ಕಳೆದುಕೊಳ್ಳದಂತೆ ತಂತ್ರಗಾರಿಕೆ ರೂಪಿಸುತ್ತಿವೆ.

ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ವಿಧಾನಪರಿಷತ್ ಚುನಾವಣೆಯ ದಿನಾಂಕ ಪ್ರಕಟವಾಗಿರುವುದು ರಾಜಕೀಯ ವಾತಾವರಣವನ್ನು ಮತ್ತಷ್ಟು ಉತ್ಕಟಗೊಳಿಸಿದೆ. ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಆಕಾಂಕ್ಷಿಗಳು ಅಲರ್ಟ್ ಆಗಿದ್ದು, ಟಿಕೆಟ್ ಪಡೆಯಲು ಲಾಬಿ ಹಾಗೂ ತಂತ್ರಗಾರಿಕೆ ಆರಂಭಿಸಿದ್ದಾರೆ.

Sponsored

ಮೂರು ಪ್ರಮುಖ ಪಕ್ಷಗಳಿಗೂ ಈ ಚುನಾವಣೆ ರಾಜಕೀಯವಾಗಿ ಮಹತ್ವದ್ದಾಗಿದ್ದು, ವಿಧಾನ ಪರಿಷತ್ ನಲ್ಲಿ ಬಲಾಬಲದ ಸಮೀಕರಣದಲ್ಲಿ ಬದಲಾವಣೆ ತರಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಹಾಗೂ ಮೈತ್ರಿ ಸಮೀಕರಣಗಳು ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಲಿವೆ.

ಈ ಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ಮಹತ್ವದ ರಾಜಕೀಯ ಪೈಪೋಟಿಗೆ ಕಾರಣವಾಗುವ ಸಾಧ್ಯತೆ ಇದೆ. ತೆರವಾಗಲಿರುವ ಸ್ಥಾನಗಳ ಹಿನ್ನೆಲೆಯಲ್ಲಿ ಮೂರು ಪ್ರಮುಖ ಪಕ್ಷಗಳು ತಮ್ಮ ತಂತ್ರಗಾರಿಕೆಯನ್ನು ಈಗಾಗಲೇ ಆರಂಭಿಸಿವೆ.

ಚುನಾವಣಾ ವೇಳಾಪಟ್ಟಿಯ ಪ್ರಕಾರ ಜೂನ್ 1ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಜೂನ್ 8 ಆಗಿದ್ದು, ಜೂನ್ 9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನ ಜೂನ್ 11 ಎಂದು ಘೋಷಿಸಲಾಗಿದೆ. ನಂತರ ಜೂನ್ 18ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶವು ಪ್ರಕಟವಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ರಾಜಕೀಯ ವಲಯದಲ್ಲಿ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ವಿಧಾನಪರಿಷತ್ ನಲ್ಲಿ ಬಲಾಬಲದ ಸಮೀಕರಣವನ್ನು ಬದಲಾಯಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಹಾಗೂ ಪಕ್ಷಗಳ ಒಳ ರಾಜಕೀಯ ಚರ್ಚೆಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಗೊಳ್ಳುವ ನೀರಿಕ್ಷೆ ಇದೆ.

Sponsored

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಸದಸ್ಯರ ಅವಧಿ ಮುಕ್ತಾಯವಾಗುತ್ತಿರುವುದರಿಂದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಬಿ.ಕೆ. ಹರಿಪ್ರಸಾದ್, ನಾಸಿರ್ ಅಹಮದ್, ತಿಪ್ಪಣ್ಣ, ಪ್ರತಾಪ್ ಸಿಂಹ ನಾಯಕ್, ಎನ್. ನಾಗರಾಜು ಸುನಿಲ್ ವಲ್ಯಾಪುರ, ಮತ್ತು ಗೋವಿಂದರಾಜು ಅವರ ಅಧಿಕಾರಾವಧಿ ಜೂನ್ ತಿಂಗಳಲ್ಲಿ ಮುಕ್ತಾಯವಾಗಲಿದೆ.

ಈ ಹಿನ್ನೆಲೆಯಲ್ಲಿ ತೆರವಾಗಲಿರುವ ಏಳು ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದ್ದು, ಫಲಿತಾಂಶವು ಅದೇ ದಿನ ಪ್ರಕಟವಾಗಲಿದೆ. ರಾಜ್ಯದ ಹಾಲಿ ರಾಜಕೀಯ ಬಲಾಬಲವನ್ನು ಗಮನಿಸಿದರೆ, ಈ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಬಿಜೆಪಿ ಎರಡು ಸ್ಥಾನಗಳಿಗೆ ಸೀಮಿತವಾಗುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಸಾಧ್ಯತೆಯಿದ್ದು, ಬಿಜೆಪಿ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನ ಕಳೆದುಕೊಳ್ಳುವ ಸ್ಥಿತಿ ಎದುರಾಗಬಹುದು ಎಂದು ಹೇಳಲಾಗುತ್ತಿದೆ. ವಿಧಾನ ಪರಿಷತ್ ನಲ್ಲಿ ಬಲಾಬಲದ ಈ ಬದಲಾವಣೆ ರಾಜ್ಯ ರಾಜಕೀಯ ಸಮೀಕರಣಗಳ ಮೇಲೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.

ಚುನಾವಣೆ ಘೋಷಣೆಯೊಂದಿಗೆ ಪಕ್ಷದಲ್ಲಿ ಟಿಕೆಟ್ ಲಾಬಿ, ಆಂತರಿಕ ಚರ್ಚೆಗಳು ಹಾಗೂ ಅಭ್ಯರ್ಥಿ ಆಯ್ಕೆ ಗಳು ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ಪೈಪೋಟಿ ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆ ಇದೆ.

Sponsored

Also Read:

ಹೈವೋಲ್ಟೇಜ್ ಕಾಂಗ್ರೆಸ್ ಮೀಟಿಂಗ್:ದಿಲ್ಲಿಯಲ್ಲಿ ನಾಲ್ಕು ವಿಚಾರಗಳ ಮೇಲೆ ಚರ್ಚೆ,ಸಿದ್ದು-ಡಿಕೆಶಿ ಪ್ಲಾನ ಏನು?

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online