<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ವೀರಶೈವ ಲಿಂಗಾಯತ ವಿವಾದಕ್ಕೆ ಈಶ್ವರ ಖಂಡ್ರೆ ಸ್ಪಷ್ಟನೆ : ನಮ್ಮಲ್ಲಿ ಭಿನ್ನತೆ ಇಲ್ಲ

ವೀರಶೈವ ಲಿಂಗಾಯತ ವಿವಾದಕ್ಕೆ ಈಶ್ವರ ಖಂಡ್ರೆ ಸ್ಪಷ್ಟನೆ : ನಮ್ಮಲ್ಲಿ ಭಿನ್ನತೆ ಇಲ್ಲ
Summary: Minister Eshwar Khandre has made an important statement regarding the Veerashaiva Lingayat community. He said, "Veerashaiva Lingayats are like two sides of the same coin, we are one."

Belagavi News:

ವೀರಶೈವ ಮತ್ತು ಲಿಂಗಾಯತ ಸಮುದಾಯಗಳು ಒಂದೇ ಆಗಿದ್ದು, ಯಾವುದೇ ಶಕ್ತಿಯಿಂದಲೂ ಅವುಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನ ವಿಜಯನಗರದ ಸುಜ್ಞಾನ ಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಸ್ವಾರ್ಥದ ಉದ್ದೇಶಕ್ಕಾಗಿ ಧರ್ಮಗಳ ನಡುವೆ ಹಾಗೂ ಜಾತಿಗಳ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

"ವೀರಶೈವ ಮತ್ತು ಲಿಂಗಾಯತರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಾವೆಂದಿಗೂ ಒಂದೇ " ಎಂದು ಹೇಳಿದ ಈಶ್ವರ್ ಖಂಡ್ರೆ, ಸಂಘಟನೆಯಲ್ಲಿ ಶಕ್ತಿ ಇದೆ ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂಬುದನ್ನು ಸಮಾಜ ಅರಿಯಬೇಕು ಎಂದು ಹೇಳಿದರು.

Sponsored

ಕೆಲವರು ಪದೇ ಪದೇ ವೀರಶೈವರೇ ಬೇರೆ, ಲಿಂಗಾಯತರೇ ಬೇರೆ ಎಂಬ ಬಿನಾಭಿಪ್ರಾಯ ಸ್ಪಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಒಡಕು ಮೂಡಿಸುವ ಪ್ರಯತ್ನಗಳ ಬಗ್ಗೆ ಸಮುದಾಯ ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು.

ವೀರಶೈವ ಮತ್ತು ಲಿಂಗಾಯತರು ಬೇರೆ ಬೇರೆ ಅಲ್ಲ, ಒಂದೇ ಎಂಬುದನ್ನು ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರು ಕೂಡ ಹೇಳಿದ್ದಾರೆ. ಅವರ ಮಾರ್ಗದರ್ಶನವನ್ನು ಸಮಾಜ ಪಾಲಿಸಬೇಕು ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸಮುದಾಯದ ಏಕತೆ, ಸಂಘಟನೆ ಹಾಗೂ ಸಾಮಾಜಿಕ ಸಾಮರ್ಥದ ಕುರಿತು ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆ ಇದೀಗ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ವೀರಶೈವ - ಲಿಂಗಾಯತರು ಒಂದೇ ನಾಣ್ಯದ ಎರಡು ಮುಖಗಳು - ಯಾವುದೇ ಶಕ್ತಿಯಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದ ಈಶ್ವರ ಖಂಡ್ರೆ :

Sponsored

ವೀರಶೈವ ಮತ್ತು ಲಿಂಗಾಯತ ಸಮುದಾಯಗಳು ಒಂದೇ ಆಗಿದ್ದು, ಯಾವುದೇ ಶಕ್ತಿಯಿಂದಲೂ ಅವುಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನ ವಿಜಯನಗರದ ಸುಜ್ಞಾನ ಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಕೆಲವರು ಭಾರತದ ಕಾರಣಕ್ಕಾಗಿ ಧರ್ಮಗಳ ನಡುವೆ ಹಾಗೂ ಜಾತಿಗಳ ನಡುವೆ ಒಡಪು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

"ವೀರಶೈವ ಮತ್ತು ಲಿಂಗಾಯತರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಾವೆಂದಿಗೂ ಒಂದೇ " ಎಂದು ಸ್ಪಷ್ಟಪಡಿಸಿದವರು, ಸಮಾಜದ ಸಂಘಟನೆಯಲ್ಲಿ ಶಕ್ತಿ ಇದೆ, ವಿಘಟನೆಯಲ್ಲಿ ದುರ್ಬಲತೆ ಇದೆ ಎಂಬುದನ್ನು ಎಲ್ಲರೂ ಅರಿಯಬೇಕು ಎಂದರು.

ವೀರಶೈವರೇ ಬೇರೆ, ಲಿಂಗಾಯತರೇ ಬೇರೆ ಎಂಬ ರೀತಿಯಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ವಿಭಜನೆಯ ಪ್ರಯತ್ನಗಳ ಬಗ್ಗೆ ಸಮುದಾಯ ಎಚ್ಚರಿಕೆಯಿಂದ ಇರಬೇಕು ಎಂದು ಈಶ್ವರ್ ಖಂಡ್ರೆ ಹೇಳಿಕೆ ನೀಡಿದ್ದಾರೆ.

Sponsored

ವೀರಶೈವ ಮತ್ತು ಲಿಂಗಾಯತರು ಬೇರೆ ಬೇರೆ ಅಲ್ಲ, ಒಂದೇ ಎಂಬುದನ್ನು ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಕೂಡ ಪ್ರತಿಪಾದಿಸಿದರು. ಅವರ ಆಶಯದಂತೆ ಸಮಾಜ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ಅವರು ಹೇಳಿದರು. ಈಶ್ವರ್ ಖಂಡ್ರೆ ಅವರ ಈ ಹೇಳಿಕೆ ವೀರಶೈವ ಲಿಂಗಾಯತ ಸಮುದಾಯದ ಏಕತೆ ಹಾಗೂ ರಾಜ್ಯದ ಸಾಮಾಜಿಕ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ವೀರಶೈವ-ಲಿಂಗಾಯತ ಮಠಗಳ ಕೊಡುಗೆ ಅಪಾರ - ಯುವಕರು ಸಾಧಕರಾಗಬೇಕು ಎಂದ ಈಶ್ವರ್ ಖಂಡ್ರೆ :

ವೀರಶೈವ ಲಿಂಗಾಯತ ಮಠಗಳು ಅನ್ನ , ಅಕ್ಷರ, ಆಶ್ರಯ ಎಂಬ ತ್ರಿವಿಧ ದಾಸೋಹದ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿವಿ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬಸವಣ್ಣವರ ಕಾಯಕ ತತ್ವದಂತೆ ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಯುವಕರು ಐಎಎಸ್, ಐಪಿಎಸ್ ಹುದ್ದೆಗಳನ್ನು ಪಡೆಯಲು ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.

Sponsored

ಯುವಶಕ್ತಿ ಅಪಾರವಾಗಿದ್ದು, ಸರಿಯಾದ ಮಾರ್ಗದರ್ಶನ ದೊರೆತರೆ ಅಸಾಧ್ಯವಾದುದನ್ನು ಸಾಧಿಸಬಹುದು. ಪಾಲಕರು ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online