BELAGAVII NEWS :
"ರಾಹುಲ್ ಗಾಂಧಿ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ರಾಷ್ಟ್ರೀಯ ಭದ್ರತೆ ಅಂತ ಸೂಕ್ಷ್ಮ ವಿಷಯಗಳಲ್ಲಿ ರಾಜಕೀಯವನ್ನು ಬದಿಗಿಟ್ಟು ದೇಶದೊಂದಿಗೆ ನಿಲ್ಲಬೇಕು. ಆದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಇಮೇಜ್ ಗೆ ಧಕ್ಕೆ ತರುವ ಹಾಗೂ ಶತ್ರು ರಾಷ್ಟ್ರಗಳ ನಿರೂಪಣೆಗಳಿಗೆ ಬಲ ನೀಡುವ ರೀತಿಯ ಹೇಳಿಕೆಗಳನ್ನು ನೀಡುವುದು ಖಂಡನೀಯ" ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಫೇಲ್ ಯುದ್ಧ ವಿಮಾನಗಳ ಕುರಿತು ಪಾಕಿಸ್ತಾನದಿಂದ ಹರಡಿದ್ದ ತಪ್ಪು ಮಾಹಿತಿಗೆ ಸಂಬಂಧಿಸಿದಂತೆ ಬಿಜೆಪಿ, ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಪ್ರಶ್ನಿಸಿದ್ದು, ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ದೇಶದ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಅನುಮಾನಿಸುವುದು ಸರಿಯಲ್ಲ ಎಂದು ಹೇಳಿದೆ.
ಈ ವಿಚಾರದಿಂದ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ರಾಷ್ಟ್ರೀಯ ಭದ್ರತೆ,ರಫೇಲ್ ಯುದ್ಧ ವಿಮಾನಗಳು ಮತ್ತು ರಾಜಕೀಯ ನಾಯಕರ ಹೇಳಿಕೆಗಳ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ವಾಕ್ಸಸಮರ್ ಮತ್ತಷ್ಟು ತೀವ್ರಗೊಂಡಿದೆ.
ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದ್ದು, 'ಆಪರೇಷನ್ ಸಿಂಧೂರ' ವೇಳೆ ಅವರ ಹೇಳಿಕೆಗಳು ಪಾಕಿಸ್ತಾನದ ವಿಚಾರಕ್ಕೆ ಹೋಲಿಕೆಯಾಗಿದ್ದವು ಎಂದು ಆರೋಪಿಸಿದೆ.
ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕರು, ದೇಶದ ಭದ್ರತೆ ಮತ್ತು ರಕ್ಷಣಾ ಕಾರ್ಯಾಚರಣೆಗಳಂತಹ ಸೂಕ್ಷ್ಮ ವಿಷಯಗಳಲ್ಲಿ ವಿರೋಧ ಪಕ್ಷದ ನಾಯಕರು ಹೆಚ್ಚು ಜವಾಬ್ದಾರಿಯಿಂದ ವರ್ತಿಸಬೇಕೆಂದು ಹೇಳಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಮಹತ್ವದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಪಾಕಿಸ್ತಾನದ ಭಾರತ ವಿರೋಧಿ ನಿರೂಪಣೆಗಳಿಗೆ ಬಲ ನೀಡುವಂತಿದ್ದವು ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಭಾರತೀಯ ವಾಯುಪಡೆಯ ಅಧಿಕೃತ ಟೆಂಡರ್ ಪ್ರಕ್ರಿಯೆ ಹಾಗೂ ರಕ್ಷಣಾ ದಾಖಲೆಗಳನ್ನು ಉಲ್ಲೇಖಿಸಿದ ಬಿಜೆಪಿ, ದೇಶವು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದ ಸಮಯದಲ್ಲಿ ರಾಷ್ಟ್ರೀಯ ಹಿತಾಸಕ್ತಿಗಿಂತ ರಾಜಕೀಯ ಟೀಕೆಗಳಿಗೆ ಎಂದು ಟೀಕಿಸಿದೆ. "ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದೇಶದೊಂದಿಗೆ ನಿಲ್ಲಬೇಕು" ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಈ ಆರೋಪಗಳಿಗೆ ಕಾಂಗ್ರೆಸ್ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದ್ದು, ರಾಷ್ಟ್ರೀಯ ಭದ್ರತೆ, ಸಶಸ್ತ್ರ ಪಡೆಗಳ ಕಾರ್ಯಾಚರಣೆಗಳು ಮತ್ತು ರಾಜಕೀಯ ನಾಗರಿಕರ ಹೇಳಿಕೆಗಳ ಕುರಿತು ಬಿಜೆಪಿ-ಕಾಂಗ್ರೆಸ್ ನಡುವಿನ ವಾಕ್ ಸಮರ ಮತ್ತಷ್ಟು ತೀವ್ರಗೊಂಡಿದೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ Amit Malviya ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
"ಆಪರೇಷನ್ ಸಿಂಧೂರ ಮೇಲೆ ಭಾರತ ರಾಷ್ಟ್ರೀಯ ಭದ್ರತೆಯ ಗಂಭೀರ ಸವಾಲನ್ನು ಎದುರಿಸುತ್ತಿತ್ತು. ಅಂತಹ ಸೂಕ್ಷ್ಮ ಸಂದರ್ಭದಲ್ಲಿ, ಆ ಭಾರತದ ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನದ ಸುಳ್ಳು ಪ್ರಚಾರಕ್ಕೆ ಹೋಲುವ ಪ್ರಶ್ನೆಗಳು ಮತ್ತು ನಿರೂಪಣೆಗಳನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದರು" ಎಂದು ಅಮಿತ್ ಮಾಳವೀಯ ಆರೋಪಿಸಿದ್ದಾರೆ.
ಇನ್ನಷ್ಟು ಗಂಭೀರ ಆರೋಪ ಮಾಡಿರುವ ಅವರು, "ಪಾಕಿಸ್ತಾನದ ಸುಳ್ಳು ಹೇಳಿಕೆಗಳ ಬಗ್ಗೆ ಇಸ್ಲಾಮಾಬಾದ್ ನಿಂದ ಪುರಾವೆ ಕೇಳುವ ಬದಲು, ರಾಹುಲ್ ಗಾಂಧಿ ಭಾರತ ಸರ್ಕಾರವನ್ನೇ ಪ್ರಶ್ನಿಸಿದರು. ಇದರಿಂದ ಶತ್ರು ರಾಷ್ಟ್ರದ ವಾದಕ್ಕೆ ಜಾಗತಿಕ ಮಟ್ಟದಲ್ಲಿ ಪುಷ್ಟಿ ಸಿಗುವ ವಾತಾವರಣ ನಿರ್ಮಾಣವಾಯಿತು" ಎಂದು ಹೇಳಿದ್ದಾರೆ.
ರಾಷ್ಟ್ರೀಯ ಭದ್ರತೆ ಮತ್ತು ಸಶಸ್ತ್ರ ಪಡೆಗಳ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ವಿರೋಧ ಪಕ್ಷದ ನಾಯಕರು ಹೆಚ್ಚು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದ್ದು, ಈ ವಿಚಾರದ ಸುತ್ತ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ವಾಕ್ಸಮರ್ ಮತ್ತಷ್ಟು ತೀವ್ರಗೊಂಡಿದೆ. ರಫೇಲ್ ಯುದ್ಧ ವಿಮಾನಗಳು, ಆಪರೇಷನ್ ಸಿಂಧೂರು ಹಾಗೂ ರಾಷ್ಟ್ರೀಯ ಭದ್ರತೆ ಕುರಿತ ಚರ್ಚೆಗಳು ಮತ್ತೆ ರಾಜಕೀಯ ಕೇಂದ್ರಬಿಂದು ಆಗಿವೆ.
ಭಾರತೀಯ ವಾಯುಪಡೆಯ ಎಲ್ಲಾ 36 ವಿಮಾನಗಳಿಗೆ ಬೆಂಬಲ ಪ್ಯಾಕೇಜ್ ಒದಗಿಸುವ ಕುರಿತು ಹೊರಬಿದ್ದ ಅಧಿಕೃತ ಟೆಂಡರ್, ಪಾಕಿಸ್ತಾನ ಹರಡಿದ್ದ ಆರೋಪಗಳನ್ನು ಸಂಪೂರ್ಣವಾಗಿ ಸುಳ್ಳು ಎಂದು ಸಾಬೀತುಪಡಿಸಿದೆ ಎಂದು ಬಿಜೆಪಿ ಹೇಳಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಐಟಿ ಸೇಲ್ ಮುಖ್ಯಸ್ಥ ಅಮಿತ್ ಮಾಳವಿಯ, "ದೇಶದ ವೀರಯೋಧರು ಗಡಿಯಲ್ಲಿ ಅಥವಾ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಮಹತ್ವದ ಕಾರ್ಯಾಚರಣೆಗಳನ್ನು ನಡೆಸಿದಾಗಲೆಲ್ಲಾ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಪುರಾವೆಗಳನ್ನು ಕೇಳುವುದು ಅಥವಾ ಕಾರ್ಯಾಚರಣೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವುದು ಅಭ್ಯಾಸ ಮಾಡಿಕೊಂಡಿದ್ದಾರೆ' ಎಂದು ಟೀಕಿಸಿದ್ದಾರೆ.
"ಇಂತಹ ನಿಲುವುಗಳು ಸಶಸ್ತ್ರ ಪಡೆಗಳ ಸಾಧನೆ ಮತ್ತು ತ್ಯಾಗಗಳನ್ನು ಅನುಮಾನಿಸುವಂತಿದ್ದು, ಯೋಧರ ನೈತಿಕ ಸ್ಥೈರ್ಯದ ಮೇಲು ಪರಿಣಾಮ ಬೀರುವ ಸಾಧ್ಯತೆ ಇದೆ" ಎಂದು ಅವರು ಹೇಳಿದ್ದಾರೆ. ರಫೇಲ್ ವಿಮಾನಗಳ ಕುರಿತು ಪಾಕಿಸ್ತಾನ ಹರಡಿದ್ದ ಪ್ರಚಾರ ಸಂಪೂರ್ಣವಾಗಿ ಬಯಲಾಗಿರುವ ಹಿನ್ನೆಲೆಯಲ್ಲಿ, ಪೂರ್ಣ ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ರಾಜಕೀಯ ಮಾಡುವುದನ್ನು ವಿರೋಧ ಪಕ್ಷಗಳು ನಿಲ್ಲಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
Also Read:
ಬಸ್ ಪಾಸ್ ಹಣ ರಿಫಂಡ್ ಗೆ ಸರ್ಕಾರದ ಆದೇಶ : ವಿದ್ಯಾರ್ಥಿಗಳು ಏನು ಮಾಡಬೇಕು?