<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಟೊಮೆಟೊ ಬೆಲೆ ಕುಸಿತದಿಂದ ಕಂಗಾಲಾದ ರೈತರು : ಕೋಲಾರದಲ್ಲಿ ಬೃಹತ್ ಪ್ರತಿಭಟನೆ

ಟೊಮೆಟೊ ಬೆಲೆ ಕುಸಿತದಿಂದ ಕಂಗಾಲಾದ ರೈತರು : ಕೋಲಾರದಲ್ಲಿ ಬೃಹತ್ ಪ್ರತಿಭಟನೆ
Summary: Farmers, who were affected by the fall in tomato prices, protested demanding support price. Here is the complete information about the problems of the growers and the market situation.

Belagavi News:

ಟೊಮೆಟೊ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿದಿರುವ ಹಿನ್ನೆಲೆಯಲ್ಲಿ ಸಂಕಷ್ಟಕೀಡಾದ ರೈತರು ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಕೋಲಾರದ ಟೊಮ್ಯಾಟೊ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಿಂದ ಬೆಳೆಗಾರರು ಆತಂಕಗೊಂಡಿದ್ದು, ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಟೊಮ್ಯಾಟೊ ಬೆಳೆಗೆ ಹಾಕಿದ ಖರ್ಚು ಕೂಡ ಮರಳಿ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ಮಾರುಕಟ್ಟೆಯಲ್ಲಿ ಬೆಲೆ ಕೂಸಿತದಿಂದ ರೈತರಿಗೆ ಭಾರಿ ಕಷ್ಟವಾಗುತ್ತಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹಲವು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಟೊಮೇಟೊ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಹಾಗೂ ಬೆಲೆ ಸ್ಥಿರತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಕೋಲಾರ ಜಿಲ್ಲೆ ಟೊಮ್ಯಾಟೋ ಬೆಳೆಗೆ ರಾಜ್ಯದಲ್ಲೇ ಪ್ರಮುಖ ಕೇಂದ್ರವಾಗಿದ್ದು, ಇಲ್ಲಿನ ಬೆಲೆ ಏರುಳಿತವು ಸಾವಿರಾರು ರೈತರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಹೀಗಾಗಿ ಸರ್ಕಾರ ರೈತರ ಹಿತ ದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಕೋಲಾರದಲ್ಲಿ ಟೊಮ್ಯಾಟೋ ಬೆಲೆ ಕುಸಿತ - ನಷ್ಟದಿಂದ ಕಂಗಾಲಾದ ರೈತರ ಪ್ರತಿಭಟನೆ :

ಕೋಲಾರ ಜಿಲ್ಲೆಯಲ್ಲಿ ಟೊಮೇಟೊ ಬೆಲೆ ತೀವ್ರ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ರೈತ ಸಮುದಾಯದಲ್ಲಿ ಆತಂಕ ಹೆಚ್ಚಾಗಿದೆ. ಒಡ್ಡಳ್ಳಿ ಮಾರುಕಟ್ಟೆಯಲ್ಲಿ ಟೊಮ್ಯಾಟೋ ದರ ಎಣಿಕೆಯಿಂದಾಗಿ ಭಾರಿ ನಷ್ಟ ಅನುಭವಿಸಿರುವ ರೈತರು, ಸರ್ಕಾರದ ನಿರ್ಲಕ್ಷ್ಮೀ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಟೊಮೆಟೊ ಬೆಳಗಾಗಿ ಮಾಡಿರುವ ಖರ್ಚಿಗು ಮಾರುಕಟ್ಟೆ ಬೆಲೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ರೈತರು, ತಮ್ಮ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.

ಪ್ರತಿಭಟನೆ ವೇಳೆ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ, ಕೆಲ ರೈತರು ಟೊಮೇಟೊವನ್ನು ರಸ್ತೆಗಳಲ್ಲಿ ಸುರಿಯುವಂತಹ ದುಃಸ್ಥಿತಿ ಎದುರಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಟೊಮೆಟೊ ಬೆಳೆಗಾರರ ಹಿತ ದೃಷ್ಟಿಯಿಂದ ಬೆಂಬಲ ಬೆಲೆ ನಿಗದಿ ಮಾಡಬೇಕು, ಮಾರುಕಟ್ಟೆ ವ್ಯವಸ್ಥೆ, ಸುಧಾರಿಸಬೇಕು ಹಾಗೂ ರೈತರ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೋಲಾರ ಜಿಲ್ಲೆ ರಾಜ್ಯದ ಪ್ರಮುಖ ಟೊಮೇಟೋ ಉತ್ಪಾದನಾ ಪ್ರದೇಶವಾಗಿದ್ದು, ಬೆಲೆ ಏರಳಿತವು ಸಾವಿರಾರು ರೈತರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ರೈತರ ನೆರವಿಗೆ ಬರಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಕೋಲಾರ ಟೊಮೆಟೊ ರೈತರ ಸಂಕಷ್ಟ - ಕೆಜಿಗೆ ₹ 30 ಬೆಂಬಲ ಬೆಲೆಗೆ ಆಗ್ರಹ - ಸರ್ಕಾರದ ವಿರುದ್ಧ ಆಕ್ರೋಶ :

ಟೊಮೆಟೊ ಬೆಲೆ ತೀವ್ರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬೆಳೆಗಾರರ ನೆರವಿಗೆ ತಕ್ಷಣ ಭಾವಿಸುವಂತೆ ಆಗ್ರಹಿಸಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಟೊಮೆಟೊಗೆ ಸೂಕ್ತ ಬೆಲೆ ಸಿಗದೇ ರೈತರು ನಷ್ಟ ಅನುಭವಿಸುತ್ತಿದ್ದು, ಸರ್ಕಾರ ಕನಿಷ್ಠ ಕೆಜಿಗೆ ₹ 30 ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಟೊಮೆಟೊ ಬೆಳೆ ಬೆಳೆಯಲು ರೈತರು ಬೀಜ, ಗೊಬ್ಬರ, ಔಷಧಿ, ಕೂಲಿ ಸೇರಿದಂತೆ ಹಲವು ವೆಚ್ಚಗಳನ್ನು ಭರಿಸಿದ್ದಾರೆ. ಕೆಲ ರೈತರು ಜಮೀನು ಹಾಗೂ ಒಡವೆಗಳನ್ನು ಅಡವಿಟ್ಟು ಸಾಲ ಪಡೆದು ಬೆಳೆ ಬೆಳೆದಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ದರ ಕುಸಿತ ಪರಿಣಾಮ ಬೆಳೆ ಖರ್ಚು ಕೂಡ ವಾಪಸ್ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮಾರುಕಟ್ಟೆ ವ್ಯವಸ್ಥೆ ಬಗ್ಗೆ ರೈತರ ಅಸಮಾಧಾನ :

ಕೋಲಾರ ಜಿಲ್ಲೆಯ ಟೊಮೆಟೊ ಮಾರುಕಟ್ಟೆಗಳಲ್ಲಿ ಅವಕ ಹೆಚ್ಚಾದ ಸಂದರ್ಭದಲ್ಲಿ ಬೆಲೆ ಕುಸಿತ ಸಾಮಾನ್ಯವಾಗಿದ್ದು, ಇದರಿಂದ ರೈತರು ಪ್ರತಿ ಬಾರಿ ನಷ್ಟ ಅನುಭವಿಸುತ್ತಿದ್ದಾರೆ. ಮಾರುಕಟ್ಟೆಗೆ ಬರುತ್ತಿರುವ ಟೊಮ್ಯಾಟೋ ಪ್ರಮಾಣ, ಬಾಕ್ಸ್ ಗಳ ಬೆಲೆ ಹಾಗೂ ರೈತರ ವಾಸ್ತವ ಪರಿಸ್ಥಿತಿಯ ಬಗ್ಗೆ ಸರ್ಕಾರ ಸಮರ್ಪಕ ಮಾಹಿತಿ ಹೊಂದಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಮಾರುಕಟ್ಟೆಯಲ್ಲಿನ ಬೆಲೆ ಏರಳಿದ ನಿಯಂತ್ರಿಸಲು ಸರ್ಕಾರ ವೈಜ್ಞಾನಿಕ ವ್ಯವಸ್ಥೆ ರೂಪಿಸಬೇಕು. ಬೆಲೆಕುಸಿತದ ಸಂದರ್ಭದಲ್ಲಿ ರೈತರ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತಕ್ಷಣ ಕ್ರಮಕ್ಕೆ ಆಗ್ರಹ :

ಟೊಮೆಟೊ ಬೆಳೆಗಾರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ರೈತರ ಹಿತದೃಷ್ಟಿಯಿಂದ ಕೆಜಿಗೆ ₹ 30 ಬೆಂಬಲ ಬೆಲೆ ಘೋಷಿಸಿ, ಮಾರುಕಟ್ಟೆಯಲ್ಲಿ ಸ್ಥಿರತೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಬೆಳೆ ಬೆಳೆದ ರೈತರಿಗೆ ನಷ್ಟವಾಗದಂತೆ ಸೂಕ್ತ ಬೆಲೆ ಭರವಸೆ ನೀಡುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿರುವ ರೈತರು, ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online