Belagavi News :
ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ರೈತರಲ್ಲಿ ಆತಂಕ ಹೆಚ್ಚಾಗಿದ್ದು, ಉತ್ತಮ ಮಳೆ ಯಾಗಲೆಂದು ದೇವರ ಮೊರೆ ಹೋಗಿರುವ ಮನಕಲುಕುವ ಘಟನೆ ನಡೆದಿದೆ. ಬೆಳೆ ಬಿತ್ತನೆ ಮಾಡಿದರು ಮಳೆ ಕೈಕೊಟ್ಟಿರುವ ಕಾರಣ ಅನ್ನದಾತರು ಭಾವುಕರಾಗಿ ಮಂಡೆ ಊರಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರೈತರು ತಮ್ಮ ಬೆಳೆ ಉಳಿಯಲಿ, ಭೂಮಿ ತೇವಾಂಶ ಪಡೆದು ಉತ್ತಮ ಇಳುವರಿ ದೊರೆಯಲಿ ಎಂಬ ಆಶಯದೊಂದಿಗೆ ಸಾಮೂಹಿಕವಾಗಿ ಪ್ರಾರ್ಥನೆ ನಡೆಸಿದರು. ಕೆಲ ರೈತರು ಕಣ್ಣೀರುಡುತ್ತಾ ದೇವರಲ್ಲಿ ಮಳೆಗಾಗಿ ಬೇಡಿಕೊಂಡ ದೃಶ್ಯ ಸ್ಥಳದಲ್ಲಿದ್ದವರ ಮನ ಕಲಕುವಂತಿತ್ತು.
ರೈತರ ಈ ಭಾವನಾತ್ಮಕ ಪ್ರಾರ್ಥನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಹಲವರು ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ ಶೀಘ್ರದಲ್ಲೇ ಉತ್ತಮ ಮಳೆ ಯಾಗಲಿ ಎಂದು ಹಾರೈಸುತ್ತಿದ್ದಾರೆ.
ಹವಾಮಾನ ಬದಲಾವಣೆ ಕಂಡು ಬಂದರೆ ಕೃಷಿ ಚಟುವಟಿಕೆಗಳಿಗೆ ಚೈತನ್ಯ ಬರಲಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮಳೆ ಕೈ ಹಿಡಿದರೆ ಬಿತ್ತನೆಯಾದ ಬೆಳೆಗಳು ಉಳಿಯಲಿದ್ದು, ಕೃಷಿ ಕ್ಷೇತ್ರಕ್ಕೂ ಹೊಸ ಆಶಾಕಿರಣ ಮೂಡಲಿದೆ.
ಪಕ್ಕದ ರಾಜ್ಯಗಳಲ್ಲಿ ಭಾರಿ ಮಳೆ ಅಬ್ಬರ - ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲೂ ನಿರಂತರ ಮಳೆ :
ಮುಂಗಾರು ಮಳೆ ದಕ್ಷಿಣ ಭಾರತದಲ್ಲಿ ಅಬ್ಬರ ಮುಂದುವರಿಸಿದ್ದು, ಕರ್ನಾಟಕದ ಪಕ್ಕದ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದ ಹಲವು ಪ್ರದೇಶಗಳಲ್ಲಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹ ಹಾಗೂ ಭೂಕುಸಿತದ ಆತಂಕ ಎದುರಾಗಿದೆ.
ಇತ್ತ ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲೂ ನಿರಂತರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಮತ್ತು ಹೊಳೆಗಳು ತುಂಬಿ ಹರಿಯುತ್ತಿದ್ದು, ತಗು ಪ್ರದೇಶಗಳಲ್ಲಿ ನೀರು ನಿಂತಿರುವುದು, ಕೆಲವೆಡೆ ರಸ್ತೆಗಳು ಜಲಾವೃತವಾಗಿರುವುದು ಹಾಗೂ ಭೂಕುಸಿತದ ಘಟನೆಗಳು ವರದಿಯಾಗುತ್ತಿವೆ.
ಭಾರಿ ಮಳೆಯ ಪರಿಣಾಮ ಕೆಲವು ಘಾಟ್ ರಸ್ತೆಗಳಲ್ಲಿ ವಾಹನ ಸಂಚಾರದ ಮೇಲೆ ಪರಿಣಾಮ ಬೀರಿದ್ದು, ಅಧಿಕಾರಿಗಳು ಅಪಾಯದ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಿದ್ದಾರೆ. ನದಿ ತೀರದ ನಿವಾಸಿಗಳು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆ ನೀಡಲಾಗಿದೆ.
ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಕರಾವಳಿ, ಮಲೆನಾಡು ಮತ್ತು ಪಕ್ಕದ ರಾಜ್ಯಗಳ ಹಲವು ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ಸೂಚನೆ ನೀಡಿದೆ. ಹೀಗಾಗಿ ಜನರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ತಳಿಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಗದಗದಲ್ಲಿ ಮುಂಗಾರು ಕೈಕೊಟ್ಟ ಆತಂಕ - ಮಳೆ ಕೊರತೆಯಿಂದ ಒಣಗುತ್ತಿರುವ ಹೆಸರು, ಗೋವಿನ ಜೋಳ, ಮೆಣಸಿನಕಾಯಿ ಬೆಳೆಗಳು :
ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವರುಣನ ಕೃಪೆ ಕಾಣುತ್ತಿಲ್ಲ. ಗದಗ ಜಿಲ್ಲೆಯಲ್ಲೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬಿತ್ತನೆ ಮಾಡಿದ ಬಳೆಗಳು ಒಣಗುವ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯಲ್ಲಿ ಹೆಸರು, ಗೋವಿನ ಜೋಳ, ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದು, ಸಮಯಕ್ಕೆ ಸರಿಯಾಗಿ ಮಳೆಯಾಗದ ಕಾರಣ ಬೆಳೆಗಳ ಬೆಳೆವಣಿಗೆ ಕುಂಠಿತಗೊಂಡಿದೆ. ಫಲಗಳಲ್ಲಿ ತೇವಾಂಶದ ಕೊರತೆ ಉಂಟಾಗಿದ್ದು, ರೈತರು ಆತಂಕದಲ್ಲಿದ್ದಾರೆ.
ಮುಂಗಾರು ಮಳೆಯನ್ನೇ ಅವಲಂಬಿಸಿ ಕೃಷಿ ಚಟುವಟಿಕೆ ಆರಂಭಿಸಿದ್ದ ರೈತರಿಗೆ ಇದೀಗ ಮಳೆ ಕೊರತೆ ದೊಡ್ಡ ಹೊಡೆತ ನೀಡಿದೆ. ಮಳೆ ಕೈಹಿಡಿಯದಿದ್ದರೆ ಬೆಳೆ ನಷ್ಟ ಹೆಚ್ಚಾಗುವ ಭೀತಿ ಎದುರಾಗಿದ್ದು, ಅನ್ನದಾತರು ವರುಣನ ನಿರೀಕ್ಷೆಯಲ್ಲಿದ್ದಾರೆ.
ಇತ್ತ ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದರೆ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಸಮಾನತೆಯಿಂದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ.
ರೈತರ ಉತ್ತಮ ಮಳೆ ಯಾಗಲಿ, ಬೆಳೆಗಳು ಉಳಿಯಲಿ ಎಂದು ಪ್ರಾರ್ಥಿಸುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆ ಬಂದರೆ ಕೃಷಿ ಕ್ಷೇತ್ರಕ್ಕೆ ಚೈತನ್ಯ ಸಿಗುವ ನಿರೀಕ್ಷೆಯಲ್ಲಿದ್ದಾರೆ.
ಮಳೆಗಾಗಿ ಆಕಾಶದತ್ತ ಮುಖ ಮಾಡಿದ ರೈತರು - ಗದಗದಲ್ಲಿ ಮಂಡಿಯೂರಿ ಕಣ್ಣೀರಿಟ್ಟ ಅನ್ನದಾತರು :
ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಬಿತ್ತನೆ ಮಾಡಿದ ಬಳೆಗಳು ಒಣಗುತ್ತಿರುವ ಆತಂಕದ ನಡುವೆ ಉತ್ತಮ ಮಳೆ ಆಗಲಿ ಎಂದು ರೈತರು ಮಂಡಿಯೂರಿ ಕಣ್ಣೀರಿಟ್ಟು ಪ್ರಾರ್ಥಿಸುತ್ತಿರುವ ದೃಶ್ಯಗಳು ಮನಕಲಕುವಂತಿವೆ.
ಮಳೆ ಇಂದು ಬರುತ್ತೆ, ನಾಳೆ ಬರುತ್ತೆ ಎಂಬ ನಿರೀಕ್ಷೆಯಲ್ಲಿ ರೈತರು ಪ್ರತಿದಿನ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದಾರೆ. ಕೃಷಿ ಚಟುವಟಿಕೆಗಳು ಮಳೆಯನ್ನೇ ಅವಲಂಬಿಸಿರುವುದರಿಂದ, ಸಮಯಕ್ಕೆ ಸರಿಯಾಗಿ ಮಳೆಯಾಗದಿರುವುದು ಅನ್ನದಾತರ ಆತಂಕಕ್ಕೆ ಕಾರಣವಾಗಿದೆ.
ಗದಗ ಜಿಲ್ಲೆಯಲ್ಲಿ ಹೆಸರು, ಗೋವಿನ ಜೋಳ, ಮೆಣಸಿನಕಾಯಿ ಸೇರಿದಂತೆ ಹಲವು ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುವ ಸ್ಥಿತಿಗೆ ತಲುಪಿವೆ. ಮಳೆ ಕೈಹಿಡಿಯದಿದ್ದರೆ ಬೆಳೆ ನಷ್ಟ ಉಂಟಾಗುವ ಭೀತಿ ರೈತರನ್ನು ಕಾಡುತ್ತಿದೆ.
ಈ ಸಂಕಷ್ಟದ ಕುರಿತು ಅಳಲು ತೋಡಿಕೊಂಡ ರೈತರು ಪ್ರತಿದಿನ ಮಳೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಮಳೆಯ ನಿರೀಕ್ಷೆಯಲ್ಲಿ ಕಾದಿರುವ ಅನ್ನದಾತರ ನೋವು ಮತ್ತು ವಾಸ್ತವ ಪರಿಸ್ಥಿತಿಯನ್ನು ನಾವು ನಿಖರವಾಗಿ ತಿಳಿಸುತ್ತಿದ್ದೇವೆ.