Belagavi News:
ಬೆಂಗಳೂರು: ನಗರದ ಕೆ.ಆರ್.ಸರ್ಕಲ್ ಸಮೀಪ ಇಂದು ಬೆಳಗ್ಗೆ ಬಿಎಂಟಿಸಿಯ ಎರಡು ಬಸ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿದ್ದು. ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಮಾಹಿತಿ ಪ್ರಕಾರ, ಸಿಗ್ನಲ್ ನಲ್ಲಿ ನಿಂತಿದ್ದ ವಾಯು ವಜ್ರ (vayu vajra) ಬಸ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎಲೆಕ್ಟ್ರಿಕ್ ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು. ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ವೇಳೆ ಬಸ್ ನ ಮುಂಭಾಗದಲ್ಲಿ ಕುಳಿತಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ತುರ್ತು ಸೇವಾ ಸಿಬ್ಬಂದಿಯ ನೆರವಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಚಿಕಿತ್ಸೆ ಮುಂದುವರಿದಿದೆ.
ಅಪಘಾತದ ತೀವ್ರತೆಗೆ ಬಸ್ ನ ಮುಂಭಾಗ ಅಪ್ಪಚ್ಚಿಯಾಗಿದ್ದರಿಂದ ಚಾಲಕ ಸೇರಿದಂತೆ ಕೆಲ ಪ್ರಯಾಣಿಕರ ಕಾಲುಗಳು ವಾಹನದೊಳಗೆ ಸಿಲುಕಿಕೊಂಡಿದ್ದವು. ಮಾಹಿತಿ ತಿಳಿದ ಕೊಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಕ್ರೇನ್ ಸಹಾಯದಿಂದ ರಕ್ಷಣಾ ಕಾರ್ಯಚರಣೆ ನಡೆಸಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದರು .
ಘಟನೆ ಸಂಭಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಬೆಳಗಿನ ವಾಹನ ದಟ್ಟಣೆ ವೇಳೆ ಈ ಅಪಘಾತ ಸಂಭವಿಸಿದ್ದರಿಂದ ಕೆ.ಆರ್.ಸರ್ಕಲ್ ಸುತ್ತಮುತ್ತ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ಪ್ರಾಥಮಿಕ ಮಾಹಿತಿ ಪ್ರಕಾರ, ಸಿಗ್ನಲ್ ನಲ್ಲಿ ಸಾಗುತ್ತಿದ್ದ ಬಿಎಂಟಿಸಿ ವಾಯುವಜ್ರ ಬಸ್ ಏಕಾಏಕಿ ನಿಂತ ಪರಿಣಾಮ, ಅದರ ಹಿಂಬದಿಯಿಂದ ಬರುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎಲೆಕ್ಟ್ರಿಕ್ ಬಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ, ಮುಂದೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಹಠಾತ್ ನಿಲ್ಲಿಸಿದ್ದರಿಂದ ಹಿಂದಿನಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಆದರೆ, ಅಪಘಾತಕ್ಕೆ ನಿಖರ ಕಾರಣ ತನಿಖೆ ಬಳಿಕವೇ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.
ಘಟಣೆಯಲ್ಲಿ ಒಟ್ಟು ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಗಾಯಗೊಂಡವರಲ್ಲಿ ಮಹಿಳೆಯೊಬ್ಬರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು, ಕಾಲಿಗೂ ಗಂಭೀರ ಗಾಯಗಳಾಗಿರುವುದರಿಂದ ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.
ಅಪಘಾತದ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಕಾಲು ಬಸ್ ನೊಳಗೆ ಸಿಲುಕಿಕೊಂಡಿತ್ತು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ನಡೆಸಿ ಆಕೆಯನ್ನು ಸುರಕ್ಷಿತವಾಗಿ ಹೊರತೆಗೆದರು.
ಅಪಘಾತದಿಂದ ಕೆ. ಆರ್ . ಸರ್ಕಲ್ ನಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ಬಸ್ ಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು.
ಪ್ರಕರಣ ಸಂಬಂಧ ಪಶ್ಚಿಮ ವಲಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.