Belagavi News:
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ತಡೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರ ಕೊನೆ ಕ್ಷಣದಲ್ಲಿ ರೂ .100 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಆದರೆ ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ತೀವ್ರಗೊಂಡಿರುವುದರಿಂದ ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗದೆ ಜಿಲ್ಲಾಡಳಿತ ಇಕ್ಕಟ್ಟಿಗೆ ಸಿಲುಕಿದೆ.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಗುಡ್ಡ ಕುಸಿತದ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿದ್ದರೂ , ಮಳೆಗಾಲ ಆರಂಭವಾದ ನಂತರ ಹಣ ಬಿಡುಗಡೆಗೊಂಡಿರುವುದರಿಂದ ಯೋಜಿತ ಕಾಮಗಾರಿಗಳಿಗೆ ಅಡ್ಡಿಯಾಗಿದೆ. ಪರಿಣಾಮವಾಗಿ ಜಿಲ್ಲಾಡಳಿತ ಸದ್ಯಕ್ಕೆ ಕೇವಲ 40 ಕೋಟಿ ವೆಚ್ಚದ ತುರ್ತು ಕಾಮಗಾರಿಗಳನ್ನು ಮಾತ್ರ ಕೈಗೆತ್ತಿಕೊಳ್ಳಲು ಮುಂದಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಫಲವಡೆ ಕಳೆದ ವರ್ಷಗಳಲ್ಲೂ ಭೂಕುಸಿತ ಹಾಗೂ ರಸ್ತೆ ಹಾನಿ ಪ್ರಕರಣಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ತಡೆಗೋಡೆ ನಿರ್ಮಾಣ ಮತ್ತು ಅಪಾಯ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡಿದೆ. ಆದರೆ ಸರ್ಕಾರದ ವಿಳಂಬ ಧೋರಣೆಯಿಂದ ಕಾಮಗಾರಿ ಅನುಷ್ಠಾನ ಸಾಧ್ಯವಾಗದೆ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.
ಮುಂಗಾರು ಮತ್ತಷ್ಟು ತೀವ್ರ ಗೊಳ್ಳುವ ಮುನ್ನ ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಸವಾಲಾಗಿ ಪರಿಣಮಿಸಿದ್ದು , ಅಪಾಯ ಪ್ರದೇಶಗಳ ನಿವಾಸಿಗಳು ಶೀಘ್ರಕ್ರಮಕ್ಕೆ ಒತ್ತಾಯಿಸಿದ್ದಾರೆ.
ಉತ್ತರ ಕನ್ನಡದ 439 ಸೂಕ್ಷ್ಮ ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ - ₹ 100 ಕೋಟಿ ಬಿಡುಗಡೆಯಾದರೂ ಕಾಮಗಾರಿ ವಿಳಂಬ:
ಭೌಗೋಳಿಕವಾಗಿ ರಾಜ್ಯದ ಅತಿ ದೊಡ್ಡ ಜಿಲ್ಲೆಯಾಗಿರುವ ಉತ್ತರ ಕನ್ನಡದಲ್ಲಿ ಪ್ರತಿವರ್ಷ ಮಳೆಗಾಲದ ವೇಳೆ ಗುಡ್ಡ ಕುಸಿತ ಮತ್ತು ಪ್ರವಾಹ ದಂತಹ ಪ್ರಕೃತಿ ವಿಕೋಪಗಳು ಜನರನ್ನು ಕಾಡುತ್ತಿವೆ. ಜಿಲ್ಲೆಯ ಬಹುಪಾಲು ಪ್ರದೇಶಗಳು ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಇರುವುದರಿಂದ ಭೂಕುಸಿತದ ಅಪಾಯ ಹೆಚ್ಚಾಗಿದ್ದು, ಈ ಬಾರಿ 439 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ.
ಗುಡ್ಡ ಕುಸಿತ ತಡೆಗೋಡೆ ನಿರ್ಮಾಣ ಹಾಗೂ ಶಾಶ್ವತ ಪರಿಹಾರ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರ ಒಂದು ತಿಂಗಳ ಹಿಂದೆ ₹ 100ಕೋಟಿ ಅನುದಾನ ಬಿಡುಗಡೆ ಮಾಡಿದೆ. ಆದರೆ ಕಾಮಗಾರಿ ಆರಂಭಿಸುವ ವೇಳೆಗೆ ಮುಂಗಾರು ಮಳೆ ಚುರುಕುಗೊಂಡಿರುವುದರಿಂದ ಜಿಲ್ಲಾಡಳಿತಕ್ಕೆ ಯೋಜಿತ ಕಾಮಗಾರಿಗಳನ್ನು ಕೈಗೊಳ್ಳುವುದು ಸವಾಲಾಗಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಿಂದಲೂ ಉತ್ತರ ಕನ್ನಡ ಜಿಲ್ಲೆಗೆ ಶಾಶ್ವತ ಪರಿಹಾರಕ್ಕಾಗಿ ಕನಿಷ್ಠ ₹ 100 ಕೋಟಿ ಅನುದಾನ ನೀಡುವ ಭರವಸೆ ಇತ್ತು. ಪ್ರಸ್ತುತ ಸರ್ಕಾರ ಕೊನೆಗೂ ಅನುದಾನ ಬಿಡುಗಡೆ ಮಾಡಿದ್ದರೂ, ಮಳೆಗಾಲ ಆರಂಭವಾದ ಕಾರಣ ಹಣದ ಪೂರ್ಣ ಪ್ರಯೋಜನ ಪಡೆಯಲು ಸಾಧ್ಯವಾಗುತ್ತಿಲ್ಲ.
ಸದ್ಯ ಅತ್ಯಂತ ಅಪಾಯಕಾರಿಯಾದ ಪ್ರದೇಶಗಳಲ್ಲಿ ಮಾತ್ರ ಸುಮಾರು ₹ 40 ಕೋಟಿ ವೆಚ್ಚದಲ್ಲಿ ತುರ್ತು ರಕ್ಷಣಾತ್ಮಕ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಉಳಿದ ಪ್ರಮುಖ ತಡೆಗೋಡೆ ನಿರ್ಮಾಣ ಹಾಗೂ ಭದ್ರತಾ ಕಾಮಗಾರಿಗಳನ್ನು ಮುಂಗಾರು ಮುಗಿದ ಬಳಿಕವೇ ಆರಂಭಿಸಲು ಜಿಲ್ಲಾಡಳಿತ ನಿರ್ಮಾನಿಸಿದೆ.
ಹಣ ಬಿಡುಗಡೆಯಾಗಿದ್ದರೂ, ಕಾಮಗಾರಿ ಪೂರ್ಣಗೊಳ್ಳದ ಕಾರಣ ಅಪಾಯ ಪ್ರದೇಶಗಳ ನಿವಾಸಿಗಳಿಗೆ ಆತಂಕ ಮುಂದುವರೆದಿದ್ದು, ಮಳೆಗಾಲದ ಬಳಿಕ ಯೋಜನೆಗಳನ್ನು ವೇಗವಾಗಿ ಪೂರ್ಣಗೊಳಿಸುವುದು ಆಡಳಿತದ ಮುಂದಿರುವ ದೊಡ್ಡ ಸವಾಲಾಗಿದೆ.
439 ಕಡೆ ಗುಡ್ಡ ಕುಸಿತದ ಭೀತಿ: ಶಿರೂರು ದುರಂತದ ಕಹಿ ನೆನಪು ಇನ್ನೂ ಮಾಸಿಲ್ಲ :
ಉತ್ತರ ಕನ್ನಡ ಜಿಲ್ಲೆಯಲ್ಲಿ 439ಕ್ಕೂ ಹೆಚ್ಚು ಸೂಕ್ಷ್ಮ ಪ್ರದೇಶಗಳಲ್ಲಿ ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ತಜ್ಞರು, ತಂಡ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಎಚ್ಚರಿಕೆ ನೀಡುತ್ತಲೇ ಬಂದಿದೆ. ಆದರೂ ಸರ್ಕಾರಗಳು ಮತ್ತು ಸಂಬಂಧಿತ ಇಲಾಖೆಗಳು ಸಕಾಲದಲ್ಲಿ ಶಾಶ್ವತ ತಡೆ ಕ್ರಮಗಳನ್ನು ಕೈಗೊಳ್ಳದ ಕಾರಣ ಬೂಕುಸಿತದ ಅವಗಡಗಳು ಮರುಕಳಿಸುತ್ತಿವೆ.
ಕಳೆದ ಒಂದೆರಡು ವರ್ಷಗಳಲ್ಲಿ ಶಿರೂರು ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಸಂಭವಿಸಿದ ಭೂಕುಸಿತ ದುರಂತಗಳು ಜನರಲ್ಲಿ ಇನ್ನೂ ಭಯದ ವಾತಾವರಣವನ್ನು ಉಳಿಸಿವೆ. ಈ ಅವಗಡಗಳಲ್ಲಿ ಕನಿಷ್ಠ 14 ಹೆಚ್ಚು ಅಮಾಯಕರು ಜೀವ ಕಳೆದುಕೊಂಡಿದ್ದು,ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು.
ತಜ್ಞರು ಗುರುತಿಸಿರುವ ಅಪಾಯದ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಾಣ, ನೀರು ಹರಿವಿನ ವ್ಯವಸ್ಥೆ ಸುಧಾರಣೆ ಹಾಗೂ ಇತರೆ ಸುರಕ್ಷಿತ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಹಲವು ಬಾರಿ ಶಿಫಾರಸು ಮಾಡಿದ್ದರೂ, ಕಾಮಗಾರಿಗಳ ವಿಳಂಬದಿಂದ ಜನರ ಆತಂಕ ಹೆಚ್ಚಾಗಿದೆ. ಮುಂಗಾರು ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಪಾಯ ಪ್ರದೇಶಗಳ ನಿವಾಸಿಗಳು ಮತ್ತೊಮ್ಮೆ ದುರಂತ ಮರುಕಳಿಸದಂತೆ ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಾರವಾರ-ಮಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಭೀತಿ : ಶಿರೂರಿನಲ್ಲಿ ಮತ್ತೆ ಆತಂಕ, ತಡೆಗೋಡೆ ಕಾಮಗಾರಿ ವಿಳಂಬ:
ಉತ್ತರ ಕನ್ನಡ ಜಿಲ್ಲೆಯ ಮೂಲಕ ಸಾಗುವ ಕಾರವಾರ ಮತ್ತು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಪ್ರತಿ ಮಳೆಗಾಲದಲ್ಲೂ ಮಣ್ಣು ಕುಸಿತದ ಘಟನೆಗಳು ಹೆಚ್ಚುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚಾರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಕಳೆದ ವರ್ಷದ ಭೂಕುಸಿತ ದುರಂತದಿಂದ ಶ್ರುತಿಯಾಗಿದ್ದ ಶಿರೂರು ಭಾಗದಲ್ಲಿ ಮತ್ತೆ ಗುಡ್ಡ ಕುಸಿತದ ಭೀತಿ ಎದುರಾಗಿದ್ದು , ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಗುಡ್ಡೆ ಕುಸಿತ ತಡೆಗೋಡೆ ನಿರ್ಮಾಣ ಸೇರಿದಂತೆ ಸುರಕ್ಷಿತ ಕಾಮಗಾರಿಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದರೂ ನಿರಂತರ ಮಳೆಯ ಕಾರಣದಿಂದ ಕಾಮಗಾರಿ ಆರಂಭಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಅಪಾಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಹಾಗೂ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರು ಭಯದ ನಡುವೆಯೇ ದಿನ ಕಳೆಯುವಂತಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ, ಮುಂಗಾರು ಮಳೆಯ ತೀವ್ರತೆಯ ನಡುವೆಯೂ ಸಾಧ್ಯವಿರುವ ಮಟ್ಟಿಗೆ ರಕ್ಷಣಾತ್ಮಕ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿದ್ದ ಅನುದಾನ ಈ ಬಾರಿ ಲಭ್ಯವಾಗದಿದ್ದರೂ, ಹವಾಮಾನ ವೈಪರೀತ್ಯದಿಂದ ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳುವುದು ಸವಾಲಾಗಿದೆ ಎಂದು ಅವರು ಹೇಳಿದ್ದಾರೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಈ ಬಾರಿ ಜಿಲ್ಲೆಯ ವಾಡಿಕೆ ಗಿಂತ ಕಡಿಮೆ ಮಳೆಯಾದರೆ ಭೂಕುಸಿತ ಮತ್ತು ಇತರ ಪ್ರಕೃತಿ ವಿಕೋಪಗಳ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ. ಆದಾಗ್ಯೂ , 439 ಸೂಕ್ಷ್ಮ ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಮುಂದುವರೆದಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.
Also Read: