<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಹಣಕಾಸಿನ ವಿಚಾರಕ್ಕೆ ಭೀಕರ ಸಂಘರ್ಷ: ಹಣದ ವಿಚಾರಕ್ಕೆ ಇಬ್ಬರ ಹತ್ಯೆ, ಮತ್ತಿಬ್ಬರಿಗೆ ಗಾಯ

ಹಣಕಾಸಿನ ವಿಚಾರಕ್ಕೆ ಭೀಕರ ಸಂಘರ್ಷ: ಹಣದ ವಿಚಾರಕ್ಕೆ ಇಬ್ಬರ ಹತ್ಯೆ, ಮತ್ತಿಬ್ಬರಿಗೆ ಗಾಯ
Summary: An argument over money issue turned violent in Nizampur village. The situation became tense due to a scuffle between members of two groups. Here are the details of the incident and the police investigation.

belagavi news :

ಬುಲಂದ್ ಶಹರ್ (ಉತ್ತರ ಪ್ರದೇಶ): ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಿರೋಧಿ ಗುಂಪುಗಳ ನಡುವೆ ನಡೆದ ವಾಗ್ವಾದ ಭೀಕರ ಸಂಘರ್ಷಕ್ಕೆ ತಿರುಗಿದ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯ ಸಿಕಂದರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನಿಜಾಮ್ ಪುರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಘಟನೆಯಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ನಿಜಾಮ್ ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ದಾಳಿ ನಡೆದಿರುವ ಮಾಹಿತಿ ತಿಳಿದ ತಕ್ಷಣ ಪೊಲೀಸ ತಂಡ ಸ್ಥಳಕ್ಕೆ ಧಾವಿಸಿತು ಎಂದು ಎಡಿಜಿ (ಮೀರತ್ ವಲಯ) ಭಾನು ಭಾಸ್ಕರ್ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಂಘರ್ಷದ ಮೇಲೆ ಒಂದು ಗುಂಪಿನ ಸದಸ್ಯರು , ಅಜಬ್ ಸಿಂಗ್ (45) ಎಂಬವರ ಮೇಲೆ ಗುಂಡು ಹಾರಿಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಎದುರಾಳಿ ಗುಂಪಿನ ಸದಸ್ಯರು "ಸೋನು ಅಲಿಯಾಸ್ ಸುನಿಲ್ (40) ಅವರ ಮೇಲೆ ಕಾರು ಹಾಯಿಸಿದ್ದು, ಅವರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಹಣಕಾಸಿನ ವಿವಾದದಿಂದ ಆರಂಭವಾದ ಮಾತಿನ ಚಕಮಕಿ ಹಿಂಸಾಚಾರಕ್ಕೆ ತಿರುಗಿದ್ದು, ಘಟಕ ಬಳಿಕ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಂಘರ್ಷಕ್ಕೆ ಕಾರಣವಾದ ವಿಚಾರ ಹಾಗೂ ಆರೋಪಿಗಳ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವಿವಾದದಿಂದ ಆರಂಭವಾದ ಮಾತಿನ ಚಕಮಕಿ ನಿಜಾಮ್ ಪುರ ಗ್ರಾಮದಲ್ಲಿ 2 ಗುಂಪುಗಳ ನಡುವಿನ ಹಿಂಸಾತ್ಮಕ ಸಂಘರ್ಷಕ್ಕೆ ಕಾರಣವಾಗಿದೆ. ಸಿಕಂದರಾಬಾದ್ ನಿವಾಸಿ 'ಉತ್ತಮ್ ಶರ್ಮಾ' ಮತ್ತು 'ಪ್ರಶಾಂತ್' ಎಂಬವರ ನಡುವೆ ಹಣಕಾಸಿನ ವಿಚಾರವಾಗಿ ಉಂಟಾದ ವಾಗ್ವಾದವೇ ಈ ಸಂಘರ್ಷಕ್ಕೆ ಮೂಲ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು " ಅರವಿಂದ್ ಮತ್ತು ರತನ್"ಎಂಬ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಎಸ್ ಎಸ್ ಪಿ " ದಿನೇಶ್ ಕುಮಾರ್ ಸಿಂಗ್"ಸಂಘರ್ಷದಲ್ಲಿ ಭಾಗಿಯಾದ ಎಲ್ಲರನ್ನು ಗುರುತಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಇನ್ನು ಹಲವರು ಘಟನೆ ಬಳಿಕ ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಸುಮಾರು 10 ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಸಂಘರ್ಷಕ್ಕೆ ನಿಖರ ಕಾರಣ ತಿಳಿಯಲು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ.

ಘಟನೆಯ ಬಳಿಕ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಎಎಸ್ ಪಿ ತಿಳಿಸಿದ್ದಾರೆ. ಪ್ರಕರಣೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online