Belagavi news:
ಮಂತ್ರಾಲಯದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಕಾರ್ಮಿಕರ ಶೆಡ್ ಗಳಲ್ಲಿ ಬಾರಿ ಅಗ್ನಿ ಅವಘಡ ಸಂಭವಿಸಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿ ಹಲವಾರು ಶೆಡ್ ಗಳು ಸಂಪೂರ್ಣ ಭಸ್ಮವಾಗಿವೆ. ಘಟನೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತ ಕಾರ್ಮಿಕರಿಗೆ ಧೈರ್ಯ ತುಂಬಿ ಶ್ರೀಗಳು ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ಮಂತ್ರಾಲಯದ ಈ ಅಗ್ನಿ ಅವಘಡ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,ಭಾರಿ ದುರಂತ ಕಂಡುಬಂದಿದೆ.
ಮಂತ್ರಾಲಯದ ಶ್ರೀ ಮಠದ ಆವರಣದಲ್ಲಿರುವ ಕಾರ್ಮಿಕರ ಶೆಡ್ ಗಳಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಭಾರಿ ಆತಂಕ ಸೃಷ್ಟಿಯಾದ ಘಟನೆ ಬುಧವಾರ ನಡೆದಿದೆ. ನರಹರಿ ತೀರ್ಥ ವಸತಿ ಗ್ರಹಗಳ ಸಮೀಪ ನಿರ್ಮಾಣ ಕಾಮಗಾರಿಗಾಗಿ ತಂಗಿದ್ದ ಕಾರ್ಮಿಕರ ಶೆಡ್ ಗಳಲ್ಲಿ ಅತಿಯಾದ ಬಿಸಿಲಿನ ತಾಪಕೆ ಎರಡು- ಮೂರು ಸಿಲಿಂಡರ್ ಗಳು ಏಕಾಏಕಿ ಸ್ಪೋಟಗೊಂಡಿದೆ. ತೋಟದ ಪರಿಣಾಮ ಷೆಡ್ ಗಳಲ್ಲಿ ಬೆಂಕಿ ವ್ಯಾಪಿಸಿ ಸಾಮಗ್ರಿಗಳು ಸುಟ್ಟು ಭಸ್ಮವಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಿಯಂತ್ರಣಕ್ಕೆ ಹರಸಾಹಸ ಪಟ್ಟರು. ಶ್ರೀ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಮಿಕರಿಗೆ ಧೈರ್ಯ ತುಂಬಿದರು.
ಮಂತ್ರಾಲಯದ ಶ್ರೀಮಠದ ಆವರಣದಲ್ಲಿದ್ದ ಕಾರ್ಮಿಕರ ಶೆಡ್ ಗಳಲ್ಲಿ ಗ್ಯಾಸ್ ಸಿಲಿಂಡರ್ ಪರಿಣಾಮ ಭಾರಿ ಅಗ್ನಿ ದುರಂತ ಸಂಭವಿಸಿದೆ. ಅತಿಯಾದ ಬಿಸಿಲಿನ ತಾಪಕ್ಕೆ ಸಿಲಿಂಡರ್ ಗಳು ಸ್ಫೋಟಗೊಂಡಿದ್ದು, ಶೆಡ್ ಗಳು ಹೊತ್ತಿ ಉರಿದು ಕಾರ್ಮಿಕರ ದವಸಧಾನ್ಯ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಈ ಘಟನೆ ಸಂಭವಿಸಿದ ವೇಳೆ ಕಾರ್ಮಿಕರು ಕೆಲಸಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಮಂತ್ರಾಲಯ ಪೀಠಾಧಿಪತಿಗಳಾದ ಸುಬುಧೇಂದ್ರ ತೀರ್ಥ ಶ್ರೀಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕರು ಶೆಡ್ ನಲ್ಲಿ ಇಲ್ಲದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ನಷ್ಟಕ್ಕೆ ಒಳಗಾದವರಿಗೆ ಶ್ರೀ ಮಠದ ವತಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಶ್ರೀಗಳು ಸಾಂತ್ವಾನ ಹೇಳಿದರು.
ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆ ಮರೆತು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
Also Read: