<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಧಾರಾಕಾರ ಮಳೆಯಿಂದ ಬೆಳಗಾವಿಯಲ್ಲಿ ಪ್ರವಾಹದ ಆತಂಕ : ನದಿಗಳು ಮೈದುಂಬಿ ಹರಿವು

ಧಾರಾಕಾರ ಮಳೆಯಿಂದ ಬೆಳಗಾವಿಯಲ್ಲಿ ಪ್ರವಾಹದ ಆತಂಕ : ನದಿಗಳು ಮೈದುಂಬಿ ಹರಿವು
Summary: The heavy rains that have been pouring in the Western Ghats region for the past few days have caused major rivers in Belgaum district to overflow. The water level of many rivers including Malaprabha, Ghataprabha, and Markandeya has risen, causing concern among the people of the riverside villages.

BELAGAVI NEW S:

ಪಶ್ಚಿಮ ಘಟ್ಟ ಪ್ರದೇಶದ ಹಾಗೂ ಖಾನಾಪುರ ತಾಲೂಕಿನ ಅಧ್ಯಯನಂತ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ಪ್ರಮುಖ ನದಿಗಳು ಮತ್ತೆ ಮೈದುಂಬಿ ಹರಿಯಲಾರಂಭಿಸಿವೆ. ಕೆಲವೇ ದಿನಗಳ ಹಿಂದೆ ಸಂಪೂರ್ಣ ಬತ್ತಿ ಹೋಗಿದ್ದ ಮಲಪ್ರಭಾ ನದಿ ಇದೀಗ ಸಮೃದ್ಧ ನೀರಿನಿಂದ ತುಂಬಿ ಹರಿಯುತ್ತಿದ್ದು, ರೈತರು ಮತ್ತು ಸಾರ್ವಜನಿಕರಲ್ಲಿ ಹೊಸ ಬರವಸೆ ಮೂಡಿಸಿದೆ.

ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಬಾರಿ ಮಳೆಯ ನೀರು, ನದಿಗಳಿಗೆ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಜಲಾಶಯಗಳ ಒಳಹರಿವು ಸಹ ಹೆಚ್ಚುತ್ತಿದ್ದು, ನೀರಿನ ಸಂಗ್ರಹದಲ್ಲಿ ಏರಿಕೆ ಕಂಡು ಬಂದಿದೆ.

ಮಳೆ ಮುಂದುವರೆದರೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ರೈತರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಆದರೆ ನದಿ ತೀರದ ತಂಬು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ.

ಆದರೆ, ಕಳೆದ ನಾಲ್ಕು ದಿನಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಮಲಪ್ರಭಾ ನದಿ ಮತ್ತೆ ಮೈದುಂಬಿ ಹರಿಯುತ್ತಿದೆ. ಪ್ರಸ್ತುತ ನದಿಯಲ್ಲಿ ಸುಮಾರು 15,00 ರಿಂದ 2000 ಕ್ಯುಸೆಕ ನೀರು ಹರಿಯುತ್ತಿದ್ದು, ನೀರಿನ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೆಲವೇ ದಿನಗಳ ಹಿಂದೆ ಸಂಪೂರ್ಣ ಬತ್ತಿ ಹೋಗಿದ್ದ ನದಿಯಲ್ಲಿ ಇದೀಗ ನೀರು ತುಂಬಿ ಹರಿಯುತ್ತಿರುವ ದೃಶ್ಯ ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

ಮಲಪ್ರಭಾ ನದಿಯ ನೀರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೀರ್ಥ ಜಲಾಶಯವನ್ನು ಸೇರುತ್ತಿದೆ. ಈ ಹಿಂದೆ ನೀರಿನ ಕೊರತೆಯಿಂದ ಬಹುತೇಕ ಖಾಲಿಯಾಗಿದ್ದ ಜಲಾಶಯಕ್ಕೆ ಇದೀಗ ನಿರಂತರವಾಗಿ ಒಳಹರಿವು ಹೆಚ್ಚಾಗಿದ್ದು,ನೀರಿನ ಸಮಗ್ರ ಪ್ರಮಾಣ ಏರಿಕೆಯಾಗುತ್ತಿದೆ.

ಇದರಿಂದ ಕುಡಿಯುವ ನೀರಿನ ಪೂರೈಕೆ, ಕೃಷಿ ಚಟುವಟಿಕೆಗಳು ಹಾಗೂ ನೀರಾವರಿ ಯೋಜನೆಗಳಿಗೆ ಹೊಸ ಆಶಾಕಿರಣ ಮೂಡಿದೆ.

ಪಶ್ಚಿಮ ಘಟ್ಟದಲ್ಲಿ ಮಳೆ ಇದೇ ರೀತಿ ಮುಂದುವರಿದರೆ ಮಲಪ್ರಭಾ ನದಿ ಮತ್ತು ನವಿಲು ತೀರ್ಥ ಜಲಾಶಯದ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲಪ್ರಭಾ ನದಿ ಮಾತ್ರವಲ್ಲದೆ, ಘಟಪ್ರಭಾ, ಕೃಷ್ಣ, ದೂದ್ ಗಂಗಾ, ವೇದ್ ಗಂಗಾ ಸೇರಿದಂತೆ ಬೆಳಗಾವಿ ಜಿಲ್ಲೆಯ ಪ್ರಮುಖ ಸಪ್ತ ನದಿಗಳಲ್ಲೂ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಪಶ್ಚಿಮ ಘಟ್ಟದ ಬಾರಿ ಮಳೆಯ ಪರಿಣಾಮ ನೀರಿನ ಹರಿವು ಗಣನೀಯವಾಗಿ ಹೆಚ್ಚಾಗಿದೆ. ಕೆಲವೇ ದಿನಗಳ ಹಿಂದೆ ನೀರಿನ ಕೊರತೆಯಿಂದ ಬತ್ತಿ ಹೋಗಿದ್ದ ಅಥವಾ ಅಲ್ಪ ಪ್ರಮಾಣದ ಹರಿವಿದ್ದ ನದಿಗಳು ಇದೀಗ ಮೈದುಂಬಿ ಹರಿಯುತ್ತಿತ್ತು, ಜಿಲ್ಲಾಧ್ಯಂತ ಜಲ ಮೂಲಗಳು ಪುನಶ್ಚೇತನಗೊಂಡಿವೆ.

ಪಶ್ಚಿಮ ಘಟ್ಟದಲ್ಲಿ ಮುಂದುವರೆದಿರುವ ಉತ್ತಮ ಮಳೆಯ ಪರಿಣಾಮ ನದಿಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು,ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚುತ್ತಿದೆ. ಇದರಿಂದ ರೈತರಲಿ ಆಶಾ ಭಾವನೆ ಮೂಡಿದ್ದು, ಮುಂಗಾರು ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ. ಆದರೆ ನದಿ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಮಳೆಯ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಇದೇ ರೀತಿ ಮುಂದುವರಿದರೆ,ಬೆಳಗಾವಿ ಜಿಲ್ಲೆಯ ನದಿಗಳ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.ಇದರಿಂದ ನದಿ ತೀರದ ತಗ್ಗು ಪ್ರದೇಶಗಳು,ಕೃಷಿ ಜಮೀನುಗಳು ಹಾಗೂ ಕೆಲ ಗ್ರಾಮಗಳಿಗೆ ನೀರು ನುಗುವ ಆತಂಕವು ಹೆಚ್ಚಾಗಿದೆ.ಈಗಾಗಲೇ ಹಲವು ಕಡೆ ನದಿಗಳು ಮೈದುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು,ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.ಸಾರ್ವಜನಿಕರು ನದಿ ತೀರಗಳಿಗೆ ಅನಗತ್ಯವಾಗಿ ತೆರಳದಂತೆ ಹಾಗೂ ರೈತರು ಮತ್ತು ತಗ್ಗು ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online