<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಉಚಿತ ಬಸ್ ಪಾಸ್ ಯೋಜನ ಘೋಷಣೆ : ವಿದ್ಯಾರ್ಥಿಗಳಿಗೆ ದೊಡ್ಡ ಸಿಹಿ ಸುದ್ದಿ

ಉಚಿತ ಬಸ್ ಪಾಸ್ ಯೋಜನ ಘೋಷಣೆ : ವಿದ್ಯಾರ್ಥಿಗಳಿಗೆ ದೊಡ್ಡ ಸಿಹಿ ಸುದ್ದಿ
Summary: The government has issued an order to distribute free bus passes to students. It has been informed that students who have already paid the fees will be refunded within 15 days. This new decision has reduced the burden of travel for thousands of students.

Belagavi news:

ರಾಜ್ಯದ ಶಾಲಾ ಹಾಗೂ ಕಾಲೇಜುಗಳಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಸಾರಿಗೆ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೂಚಿಸಲಾಗಿದೆ.

ಈ ಹೊಸ ನಿಯಮದ ಪ್ರಕಾರ, ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) , ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC), ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಬಸ್ಗಳಲ್ಲಿ ಪ್ರಯಾಣಿಸುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಸೌಲಭ್ಯ ದೊರೆಯಲಿದೆ.

ಈ ನಿರ್ಧಾರದಿಂದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರಯಾಣದ ವೆಚ್ಚದಲ್ಲಿ ಭಾರಿ ಪರಿಹಾರ ದೊರೆಯಲಿದೆ. ಶಾಲಾ ಹಾಗೂ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವಂತೆ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಸಾರಿಗೆ ಇಲಾಖೆ ಆದೇಶದಂತೆ, ಈಗಾಗಲೇ ಪಾಸ್ ಶುಲ್ಕ ಪಾವತಿಸಿದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಮರುಪಾವತಿ ನೀಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಈ ಯೋಜನೆ ಜಾರಿಗೆ ಬಂದ ನಂತರ ವಿದ್ಯಾರ್ಥಿಗಳ ದಿನನಿತ್ಯದ ಪ್ರಯಾಣ ಸುಲಭ ಹಾಗೂ ಉಚಿತವಾಗಲಿದೆ.

ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಶಿಕ್ಷಣವಲಯದಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಸ್ವಾಗತಿಸಲಾಗಿದ್ದು, ಇದು ದೊಡ್ಡ ಸಾಮಾಜಿಕ ಕಲ್ಯಾಣ ಯೋಜನೆ ಎಂದು ಪರಿಗಣಿಸಲಾಗುತ್ತಿದೆ.

ವಿದ್ಯಾರ್ಥಿ ಉಚಿತ ಬಸ್ ಪಾಸ್: ಹಳೆಯ ನಿಯಮಗಳೇ ಮುಂದುವರಿಕೆ, ಆನ್ಲೈನ್ ಅರ್ಜಿ ಹಾಗೂ ಮರುಪಾವತಿ ವ್ಯವಸ್ಥೆ:

ರಾಜ್ಯ ರಸ್ತೆ ಸಾರಿಗೆ ನಿಯಮಗಳು ಮತ್ತು ಸಂಸ್ಥೆಗಳು ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಇದರ ಪ್ರಕಾರ ವಿದ್ಯಾರ್ಥಿ ಪಾಸ್ ಗೆ ಅಗತ್ಯವಾದ ಶೈಕ್ಷಣಿಕ ಅರ್ಹತೆ, ದೂರದ ಮಿತಿ ಹಾಗೂ ಪಾಸಿನ ಕಾಲಾವಧಿ ಸೇರಿದಂತೆ ಎಲ್ಲ ಮಾನದಂಡಗಳು ಮುಂದುವರೆಯಲಿವೆ.

ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ಶಾಲೆ ಅಥವಾ ಕಾಲೇಜುಗಳಿಂದಲೇ ಆನ್ಲೈನ್ ನಲ್ಲಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮೂಲಕ ಪಾಸ್ ವಿತರಣಾ ಪ್ರಕ್ರಿಯೆಯನ್ನು ಸಂಪೂರ್ಣ ಡಿಜಿಟಲ್ ಆಗಿ ಸರಳಗೊಳಿಸಲಾಗಿದೆ.

ಈಗಾಗಲೇ ವಿತರಿಸಲಾಗಿರುವ ಬಸ್ ಪಾಸ್ಗಳು ಯಥಾವತ್ತಾಗಿ ಮಾನ್ಯ ವಾಗಿದ್ದು, ಅವುಗಳನ್ನು ವಿದ್ಯಾರ್ಥಿಗಳು ಮುಂದುವರಿಸಿಕೊಂಡು ಬಳಸಬಹುದು. ಜೊತೆಗೆ, ಪಾಸ್ ಗಾಗಿ ಈಗಾಗಲೇ ಪಾವತಿಸಿರುವ ಶುಲ್ಕವನ್ನು ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಮರುಪಾವತಿ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಕ್ರಮದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಭಾರ ಕಡಿಮೆಯಾಗುವುದರ ಜೊತೆಗೆ ಸಾರಿಗೆ ಸೇವೆಗಳನ್ನು ಹೆಚ್ಚು ಸುಗಮ ಮತ್ತು ಪಾರದರ್ಶಕವಾಗಿ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ - 15 ದಿನಗಳಲ್ಲಿ ಶುಲ್ಕ ಮರುಪಾವತಿ, ಗಡಿ ವಿದ್ಯಾರ್ಥಿಗಳಿಗೂ ಸೌಲಭ್ಯ ವಿತರಣೆ:

ರಾಜ್ಯದಲ್ಲಿ ವಾಸವಿದ್ದ ಗಡಿ ರಾಜ್ಯಗಳ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಡಿ ಭಾಗದಲ್ಲಿ ವಾಸವಿದ್ದು ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಸೌಲಭ್ಯ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಶುಲ್ಕಪ್ಪ ಪಾವತಿಸಿ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಮೊತ್ತವನ್ನು 15 ದಿನಗಳೊಳಗೆ ಮರುಪಾವತಿ ಮಾಡಲು ಸಂಬಂಧಿತ ಇಲಾಖೆಗಳಿಗೆ ಆದೇಶಿಸಲಾಗಿದೆ.

ಸರ್ಕಾರದ ಮಾಹಿತಿಯ ಪ್ರಕಾರ, ರಾಜ್ಯದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದರಿಂದ ಸುಮಾರು ರೂ. 286.08 ಕೋಟಿಗಳ ಅಂದಾಜು ವೆಚ್ಚ ಉಂಟಾಗಲಿದೆ. ಜೊತೆಗೆ ಪ್ರತಿ ಬಸ್ ಪಾಸ್ ಗೆ ಸಂಸ್ಕರಣಾ ಶುಲ್ಕ ರೂ.100 ಹಾಗೂ ಅಪಘಾತ ಪರಿಹಾರ ನಿಧಿ ರೂ.50 ಸೇರಿ ಸುಮಾರು ರೂ. 15 ಕೋಟಿಗಳ ವೆಚ್ಚವನ್ನು ಸರ್ಕಾರ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಭರಿಸಲಿದೆ.

2026-27ನೇ ಶೈಕ್ಷಣಿಕ ಸಾಲಿನಲ್ಲಿ 30.05.2026 ರಿಂದ 09.06.2026 ರ ಅವಧಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮೂಲಕ ಒಟ್ಟು 19,792 ರಿಯಾಯಿತಿ ದರದ ಪಾಸ್ ಗಳನ್ನು ವಿತರಸಲಾಗಿತ್ತು. ಉಚಿತ ಬಸ್ ಪಾಸ್ ವ್ಯವಸ್ಥೆ ಜಾರಿಗೆ ಬರುವವರೆಗೆ ವಿತರಿಸಲಾದ ಈ ಪಾಸುಗಳ ಮೊತ್ತವನ್ನು ಸಹ ವಿದ್ಯಾರ್ಥಿಗಳಿಗೆ ಮರುಪಾವತಿ ಮಾಡಲು ಸರ್ಕಾರ ಅನುಮೋದನೆ ನೀಡಿದೆ.

ಈ ಯೋಜನೆಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದರು. ಇದೀಗ ಈ ಮಹತ್ವದ ಯೋಜನೆ ಅಧಿಕೃತವಾಗಿ ಜಾರಿಗೆ ಬಂದಿದೆ.

Also Read:

ಕೃಷಿ ಮತ್ತು ಕುಡಿಯುವ ನೀರಿಗೆ ಸಂಕಷ್ಟ ? ತುಂಗಭದ್ರಾ ದಲ್ಲಿ ಕೇವಲ 9 TMC ನೀರು

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online