Belagavi news:
ನವದೆಹಲಿ: ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 3 ರೂಪಾಯಿ ಏರಿಕೆ ಮಾಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಸಿಎನ್ಜಿ ಬೆಲೆಯಲ್ಲೂ 2 ರೂಪಾಯಿ ಹೆಚ್ಚಿಸಲಾಗಿದೆ.
ಈ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಇದನ್ನು ತೀವ್ರವಾಗಿ ಟೀಕಿಸಿದೆ. ಪೆಟ್ರೋಲ್ ಬೆಲೆ ಏರಿಕೆಯಿಂದ ಸಾರ್ವಜನಿಕರ ಮೇಲೆ ಹೊರೆ ಹೆಚ್ಚುತ್ತಿದೆ ಎಂದು ಹೇಳಿದ್ದು, ಚುನಾವಣೆಗಳ ನಂತರ ಇಂತಹ ಬೆಲೆ ಏರಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದೆ.
ಇದು ಕೇಂದ್ರ ಸರ್ಕಾರದ ನೀತಿ ನಿರ್ಧಾರವಾಗಿದ್ದು, ಇದರ ಪರಿಣಾಮವಾಗಿ ದೇಶದ ಇಂಧನ ದರಗಳಲ್ಲಿ ಬದಲಾವಣೆ ಕಂಡು ಬಂದಿದೆ ಎಂದು ವರದಿಗಳು ತಿಳಿಸುತ್ತಿವಿ.
ಕೇಂದ್ರ ಸರ್ಕಾರ ದೇಶಾದ್ಯಂತ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 3 ರೂ. ಹೆಚ್ಚಿಸಿದೆ. ಸಿಎನ್ ಜಿ ಬೆಲೆಯನ್ನು 2 ರೂ. ಹೆಚ್ಚಿಸಲಾಗಿದೆ. ಈ ಬೆಲೆ ಹೆಚ್ಚಳ ಮತ್ತಷ್ಟು ಹಣದುಬ್ಬರಕ್ಕೆ ಕಾರಣವಾಗಲಿದೆ. ಇದು ಬೆಳವಣಿಗೆಯ ಅಂದಾಜುಗಳು ಗಣನೀಯವಾಗಿ ಕಡಿಮೆಯಾಗಲಿವೆ ಎಂದು ಕಳವಳ ವ್ಯಕ್ತಪಡಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ಅಂತಾರಾಷ್ಟ್ರೀಯ ತೈಲ ಬೆಲೆಗಳು ಹಲವು ವರ್ಷಗಳಿಂದ ಕುಸಿಯುತ್ತಿರುವಾಗಲೂ ದೇಶೀಯ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅನಿಲ ಬೆಲೆಗಳನ್ನು ಕಡಿಮೆ ಮಾಡಬೇಕೆಂದು ಕಾಂಗ್ರೆಸ್ ಆಗ್ರಹಿಸುತ್ತಲೇ ಬಂದಿದೆ ಎಂದು ಹೇಳಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಇಳಿಕೆ ನಡೆಯಲಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಇದೀಗ ಅಮೆರಿಕ ಮತ್ತು ಇಸ್ರೇಲ್ ಪಶ್ಚಿಮ ಏಷ್ಯಾದಲ್ಲಿ ನಡೆಸಿದ ಯುದ್ಧ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳು ಮುಗಿದ ನಂತರ ಅಂತಾರಾಷ್ಟ್ರೀಯ ತೈಲ ಬೆಲೆಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಎಲ್ ಪಿಜಿ ಬೆಲೆ ಹೆಚ್ಚಿಸಿದ ಬಳಿಕ ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಳನ್ನು ಕೂಡ ಏರಿಸಲಾಗಿದೆ ಎಂದು ಅವರು ಟೀಕಿಸಿದ್ದಾರೆ.
ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿದ 16 ದಿನಗಳ ನಂತರ ಈ ಇಂಧನ ದರ ಏರಿಕೆ ನಡೆದಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಚುನಾವಣೆ ಸಮಯದಲ್ಲಿ ಇಂಧನ ದರಗಳನ್ನು ಹೆಚ್ಚಿಸಲಾಗಿರಲಿಲ್ಲ. ಆದರೆ ಈಗ ಅಂತಾರಾಷ್ಟ್ರೀಯ ತೈಲ ಬೆಲೆಗಳ ಏರಿಕೆಯನ್ನು ಕಾರಣವಾಗಿ ಇಟ್ಟುಕೊಂಡು ಕೇಂದ್ರ ಸರ್ಕಾರ ದರ ಹೆಚ್ಚಿಸಿದೆ ಎಂದು ಜೈ ರಾಮ್ ರಮೇಶ್ ಆರೋಪಿಸಿದ್ದಾರೆ.
ದೇಶಾದ್ಯಂತ ಈ ಬೆಲೆ ಹೆಚ್ಚಳಗಳು ಪ್ರತಿ ರಾಜ್ಯದಲ್ಲಿ ವ್ಯಾಟ್ ತೆರಿಗೆಯಲ್ಲಿನ ವ್ಯತ್ಯಾಸ ಗಳಿಂದಾಗಿ ಪ್ರತಿ ರಾಜ್ಯದಲ್ಲಿ ದರಗಳು ಬದಲಾಗುತ್ತದೆ.
Also Read:
ಜಾಗತಿಕ ಉದ್ವಿಗ್ನತೆ ನಡುವೆಯೇ ಪ್ರಧಾನಿ ಮೋದಿ 5 ರಾಷ್ಟ್ರಗಳ ಪ್ರವಾಸದ ಮಹತ್ವ ಏನು?