belagavi news :
ಬೆಂಗಳೂರು ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರು ಇಂದು ಬೆಂಗಳೂರಿನ ಕೋರಮಂಗಲ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ನಡೆಯ ಕುರಿತು ಸ್ಪಷ್ಟನೇ ನೀಡಿದ್ದಾರೆ.
"ನನ್ನ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್, ಸುರ್ಜೆವಾಲ್ ತಿಳಿಸಿದ್ದಾರೆ. ನಾನು ನನ್ನ ಸ್ಪಷ್ಟ ಅಭಿಪ್ರಾಯವನ್ನು ನಾಯಕರ ಮುಂದೆ ಇಟ್ಟಿದ್ದೇನೆ" ಎಂದು ಅವರು ಹೇಳಿದರು.
ಖಾತೆ ಹಂಚಿಕೆ ಸಂಬಂಧ ಉಂಟಾದ ಅಸಮಾಧಾನ ಮತ್ತು ರಾಜೀನಾಮೆ ವಿಚಾರ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬೆಳವಣಿಗೆಗೆ ಸಂಬಂಧಿಸಿದಂತೆ ಮುಂದಿನ ರಾಜಕೀಯ ನಿರ್ಧಾರಗಳತ್ತ ಎಲ್ಲರ ಗಮನ ಹರಿದಿದೆ.
ಇದೇ ವೇಳೆ ಖಾತೆ ಹಂಚಿಕೆ ಕುರಿತು ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ತಮ್ಮ ಅಸಮಾಧಾನವನ್ನು ವೈಯಕ್ತಿಕ ಮಟ್ಟದಲ್ಲಿ ವ್ಯಕ್ತಪಡಿಸಿದರು.
"ನನಗೆ ನೀರಾವರಿ ಇಲಾಖೆಯ ಬಗ್ಗೆ ಹೆಚ್ಚಿನ ತಿಳಿವು ಇಲ್ಲ. ನಾನು ಯಾವತ್ತೂ ಜಲ ಸಂಪನ್ಮೂಲ ಖಾತೆಯನ್ನು ಕೇಳಿರಲಿಲ್ಲ. ಸಚಿವ ಸ್ಥಾನ ಅಥವಾ ನಿರ್ದಿಷ್ಟ ಖಾತೆ ಬೇಕು ಎಂದು ನಾನು ಎಂದಿಗೂ ಹಠ ಹಿಡಿದವನಲ್ಲ,"ಎಂದು ಅವರು ಹೇಳಿದರು.
ಅವರು ಮುಂದುವರಿಸಿ, "2023ರಲ್ಲಿ ಮನೆಗೆ ಬಂದು ಮಾತು ಕೊಟ್ಟಂತೆ ನಾಯಕರು ನಡೆದುಕೊಳ್ಳಲಿಲ್ಲ ಎಂದು ಬೇಸರವಷ್ಟೇ ನನಗಿದೆ. ರಣದೀಪ್ ಸಿಂಗ್ ಸುರ್ಜೆವಾಲ್ ಅವರು ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸುತ್ತಿದ್ದಾರೆ. ನಾಯಕರು ಏನು ತೀರ್ಮಾನ ಮಾಡುತ್ತಾರೋ ನೋಡೋಣ. ನಾನು ಯಾರ ಮೀನು ಆರೋಪ ಮಾಡುವುದಿಲ್ಲ ಮತ್ತು ತಾಳ್ಮೆಯನ್ನು ಕಳೆದುಕೊಂಡಿಲ್ಲ," ಎಂದು ಮಾರ್ಮಿಕವಾಗಿ ನುಡಿದರು.
ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದ್ದು ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಹರಿದಿದೆ.
Also Read: