belagavi news:
ಜಿಲ್ಲೆಯ ಕಾನೂನು ವ್ಯವಸ್ಥೆ ಹದಿಗೆಟ್ಟಿದ್ದು, ಅಪರಾಧ ಕೃತ್ಯಗಳು ಹೆಚ್ಚುತ್ತಿರುವ ವಿಚಾರವಾಗಿ ಮುಳುಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಅಭ್ಯರ್ಥಿ ಮಂಜುನಾಥ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರನ್ನು ಜಿಲ್ಲಾ ಪಂಚಾಯತ್ ದಿಶಾ ಸಭೆ ಎಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಶಾಸಕರು, ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು, ಡ್ರಗ್ಸ್ ಮತ್ತು ಗಾಂಜಾ ಮಾರಾಟ, ಕ್ರಿಕೆಟ್ ಬೆಟ್ಟಿಂಗ್ ಜಾಲಾ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು.ಇಂತಹ ಗಂಭೀರ ಪ್ರಕರಣಗಳು ಹೆಚ್ಚಾಗುತ್ತಿದ್ದರು ಪೋಲಿಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
"ಪೊಲೀಸ್ ಇಲಾಖೆಗೆ ಅಗತ್ಯ ಸೌಲಭ್ಯಗಳು ಮತ್ತು ಲಕ್ಷಾಂತರ ರೂಪಾಯಿ ಅನುದಾನ ಒದಗಿಸಲಾಗುತ್ತಿದೆ.ಆದರೂ ಜಿಲ್ಲೆಯಲ್ಲಿ ಗಾಂಜಾ ಮಾರಾಟ,ಡ್ರಗ್ಸ್ ಜಾಲ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಚಟುವಟಿಕೆಗಳು ಯಾಕೆ ನಿಲ್ಲುತ್ತಿಲ್ಲ?" ಎಂದು ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನಿಸಿದರು.ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಬೇಕೆಂದು ಅವರು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು,ಪೊಲೀಸ್ ಇಲಾಖೆ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಶಾಸಕರು ತಿಳಿಸಿದರು.ಈ ವೇಳೆ ಸಭೆಯಲ್ಲಿ ಕೆಲಕಾಲ ತೀವ್ರ ಚರ್ಚೆ ನಡೆಯಿತು.ಕಾನೂನು ವ್ಯವಸ್ಥೆ ಕಾಪಾಡಲು ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪರಿಣಾಮಕಾರಿ ಕಾರ್ಯತಂತ್ರ ರೂಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು
ಈ ಘಟನೆಯ ರಾಜಕೀಯ ಮತ್ತು ಆಡಳಿತ ವಲಯಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಜಿಲ್ಲೆಯಲ್ಲಿನ ಅಪರಾಧ ನಿಯಂತ್ರಣ ಕ್ರಮಗಳ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಉದ್ಭವಿಸಿವೆ.
ಜಿಲ್ಲೆಯಲ್ಲಿ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು,ರೌಡಿಸಂ, ಡ್ರಗ್ಸ್ ಹಾಗೂ ಗಾಂಜಾ ಮಾರಾಟಜಾಲ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗಿದೆ ಎಂದು ಮುಳುಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಗಂಭೀರ ಅರೋಪ ಮಾಡಿದರು. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ದಿಶಾ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರನ್ನು ಪ್ರಶ್ನಿಸಿದವರು,ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
"ಕೋಲಾರ ಜಿಲ್ಲೆಯ ಒಂದರಲ್ಲಿ ಬರೋಬ್ಬರಿ 7 ಪ್ರಮುಖ ಕ್ರಿಕೆಟ್ ಬೆಟ್ಟಿಂಗ್ ಕಿಂಗ್ ಪಿನ್ ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.ಇದರ ವಿರುದ್ಧ ಪೊಲೀಸ್ ಇಲಾಖೆ ಇದುವರೆಗೆ ಯಾವ ಕ್ರಮ ಕೈಗೊಂಡಿದೆ?ಎಷ್ಟು ಮಂದಿಯ ವಿರುದ್ಧ ಕಟ್ಟುನಿಟ್ಟಿನ ಪ್ರಕರಣಗಳನ್ನು ದಾಖಲಿಸಲಾಗಿದೆ"?ಎಂದು ಶಾಸಕರು ನೇರವಾಗಿ ಪ್ರಶ್ನಿಸಿದರು.
ಅಕ್ರಮ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದರು ಅವುಗಳನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದವರು, ಡ್ರಗ್ಸ್, ಗಾಂಜಾ ಮಾರಾಟ ಹಾಗೂ ಬೆಟ್ಟಿಂಗ್ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಒತ್ತಾಯಿಸಿದರು.ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಅವರು ತಿಳಿಸಿದರು.
"ಕೋಲಾರವು ಗಡಿ ಜಿಲ್ಲೆಯಾಗಿರುವುದರಿಂದ ಅಪರಾಧ ಚಟುವಟಿಕೆಗಳಿಗೆ ಹೆಚ್ಚು ಅವಕಾಶ ಸಿಗುತ್ತಿದೆ. ಕಳ್ಳತನ ಪ್ರಕರಣಗಳು ಸರಣಿಯಾಗಿ ನಡೆಯುತ್ತಿವೆ.ಇಂಥ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಕಾನೂನು ಹಾಗೂ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಯಾವುದೇ ಪರಿಣಾಮಕಾರಿ ಕಾರ್ಯಕ್ರಮಗಳು ನಡೆಯುತ್ತಿಲ್ಲ," ಎಂದು ಶಾಸಕರು ಹೇಳಿದರು.
ಪೋಲಿಸ್ ಇಲಾಖೆಯ ಅಭಿವೃದ್ಧಿಗಾಗಿ ತಾವು ನೀಡಿರುವ ಸಹಕಾರವನ್ನು ಉಲ್ಲೇಖಿಸಿದವರು, "ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದಡಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಗಳನ್ನು ಒದಗಿಸಲಾಗಿದೆ.ಅಲ್ಲದೆ ಇಲಾಖೆಯ ಒಳಕೆಗೆ ಎರಡು ಕಾರುಗಳನ್ನು ನೀಡಲಾಗಿದೆ.ಇಷ್ಟೆಲ್ಲಾ ಸೌಲಭ್ಯಗಳು ಮತ್ತು ಅನುದಾನ ಒದಗಿಸಿದರು ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಯಾಕೆ ನಿಯಂತ್ರಣಕ್ಕೆ ಬರುತ್ತಿಲ್ಲ?" ಎಂದು ಎಸ್ ಪಿ ಕನ್ನಿಕಾ ಸಿಕ್ರಿವಾಲ್ ಅವರನ್ನು ಪ್ರಶ್ನಿಸಿದರು.
ಶಾಸಕರ ಈ ಖಡಕ್ ಪ್ರಶ್ನೆಗಳಿಂದ ಸಭೆಯಲ್ಲಿ ಕೆಲಕಾಲ ಗಂಭೀರ ವಾತಾವರಣ ನಿರ್ಮಾಣವಾಗಿದ್ದು,ಅಧಿಕಾರಿಗಳು ಸಮರ್ಪಕ ಉತ್ತರ ನೀಡಲು ತಡಕಾಡಿದ ಪ್ರಸಂಗವು ನಡೆಯಿತು.ಜಿಲ್ಲೆಯಲ್ಲಿನ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹಾಗೂ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಲು ಪೊಲೀಸ್ ಇಲಾಖೆ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕೆಂದು ಶಾಸಕರು ಒತ್ತಾಯಿಸಿದರು.ಈ ಘಟನೆ ಸಭೆಯಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿ ಪರಿಣಮಿಸಿತು.
Also Read:
ಅಥಣಿ ಬೆಚ್ಚಿಬೀಳಿಸಿದ ಘಟನೆ: ಧಾರಾಕಾರ ಮಳೆಗೆ ಕಟ್ಟಡ ಕುಸಿದು ಬಾರಿ ದುರಂತ ತಪ್ಪಿತು