<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸಿ : ಬಿಎಲ್ಒಗಳಿಗೆ ಸಿಎಂ ಸ್ಪಷ್ಟ ನಿರ್ದೇಶನ

ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸಿ : ಬಿಎಲ್ಒಗಳಿಗೆ ಸಿಎಂ ಸ್ಪಷ್ಟ ನಿರ್ದೇಶನ
Summary: Union Minister H.D. Kumaraswamy has accused the Congress government of deliberately trying to sabotage the SIR process in many parts of the state, including Ramanagara. He said that the irregularities taking place in Ramanagara district are proof of this and has strongly opposed the government.

belagavi news :

ಬೆಂಗಳೂರು: ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣಿ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಶಾಸಕರು ಅಥವಾ ಇತರರು ನಮೂನೆಯನ್ನು ವಿತರಿಸುವುದು ನಿಯಮ ಬಹಿರವಾಗಿದ್ದು, ಅಂತಹ ಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್,' ಬಿಎಲ್ಒಗಳೇ ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಬೇಕು. ಭರ್ತಿ ಮಾಡಿದ ನಮೂನೆಗಳನ್ನು ಮಾತ್ರ ಬಿಎಲ್ಒಗಳು ಜನರಿಂದ ಸಂಗ್ರಹಿಸಿ ಬಿಎಲ್ಒ ಗಳಿಗೆ ಸಲ್ಲಿಸಬಹುದು. ಆದರೆ ನಮೂನೆ ವಿತರಣೆಯ ಜವಾಬ್ದಾರಿ ಬಿಎಲ್ಒಗಳದ್ದೇ" ಎಂದು ಖಡಕ್ ಎಚ್ಚರಿಕೆ ನೀಡಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಮನಗರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ,

"ಜಯನಗರದಲ್ಲು ಬಿಜೆಪಿ ಶಾಸಕರು ಇದೇ ರೀತಿಯ ಕೆಲಸ ಮಾಡುತ್ತಿದ್ದಾರೆ ಎಂಬ ದೂರುಗಳಿವೆ. ಎಲ್ಲೇ ಆಗಿದ್ದರೂ ನಿಯಮವೊಂದೇ ಬಿಎಲ್ಒಗಳೇ ಮನೆ-ಮನೆಗೆ ತೆರಳಿ ನಮೂನೆಗಳನ್ನು ವಿತರಿಸಬೇಕು ಎಂದು ಹೇಳಿದರು.

ಇದೆ ವೇಳೆ, ಜುಲೈ 29 ರವರೆಗೆ ಗಣತಿ ನಮೂನೆ ವಿತರಣೆಗೆ ಅವಕಾಶವಿದ್ದು, ಎಲ್ಲಾ ಬಿಎಲ್ಒಗಳು ಕಡ್ಡಾಯವಾಗಿ ಮನೆ-ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ರಾಜ್ಯದ ಅಧಿಕಾರಿಗಳನ್ನು ದುರ್ಬಳಕ್ಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದಾಗ, ವಿರೋಧ ಪಕ್ಷಗಳು ಇರುವದೇ ಆರೋಪ ಮಾಡಲು. ನಾವು ಇರುವುದು ಜನರ ಸೇವೆಗೆ. ನಾವು ನಮ್ಮ ಕರ್ತವ್ಯ ಮಾಡುತ್ತೇವೆ ಎಂದು ತಿಳಿಸಿದರು.

ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಮನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಲಾಗುತ್ತಿದ್ದು, ಅದರ ಸ್ಪಷ್ಟ ಉದಾಹರಣೆ ರಾಮನಗರ ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಎಂದು ಅವರು ಆರೋಪಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, "ರಾಮನಗರ ಜಿಲ್ಲೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಜಿಲ್ಲಾಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಬೇಕು. ಕರ್ತವ್ಯ ಲೋಪ ಎಸೆಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧವು ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದರು.

ಇದೇ ವೇಳೆ, ಮುಖ್ಯಮಂತ್ರಿ ಪ್ರಭಾವ ಬಳಸಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಸೇರಿದಂತೆ ಸಾವಿರಾರು ಮಂದಿಗೆ ಮತದಾರರ ಪಟ್ಟಿಯಲ್ಲಿ ದಾಖಲೆಗಳನ್ನು ಸೂಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ಈ ಸಂದರ್ಭದಲ್ಲಿ ವಿಡಿಯೋ ಸಾಕ್ಷ್ಯಗಳಿವೆ ಎಂದು ಹೇಳಿದರು.

"ಈ ಪ್ರಕರಣದಲ್ಲಿ ಕೇಂದ್ರೀಯ ಚುನಾವಣಾ ಆಯೋಗ ಕೂಡಲೇ ಮಧ್ಯಪ್ರವೇಶಿಸಿ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ನನ್ನ ಬಳಿ ಇರುವ ವಿಡಿಯೋಗಳನ್ನು ಪರಿಶೀಲಿಸಿದರೆ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಹೇಗೆ ದುರ್ಬಳಕೆ ಮಾಡಲಾಗುತ್ತಿದೆ ಎಂಬುವುದು ಗೊತ್ತಾಗುತ್ತದೆ. ಒಂದು ಕೈಯಲ್ಲಿ ಸಂವಿಧಾನ ಹಿಡಿದು ಮಾತನಾಡುವವರು ಮತ್ತೊಂದು ಕಡೆ ಇಂತಹ ಕೆಲಸ ಮಾಡಿರುವುದು ಆತಂಕಕಾರಿ" ಎಂದು ಕುಮಾರಸ್ವಾಮಿ ಆರೋಪಿಸಿದರು.

ಈ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಥವಾ ಚುನಾವಣಾ ಆಯೋಗದಿಂದ ಅಧಿಕೃತ ಪ್ರತಿಕ್ರಿಯೆ ಇನ್ನೂ ಪ್ರಕಟವಾಗಿಲ್ಲ.

ಮುಂದುವರೆದು ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ನಿಯಮದ ಪ್ರಕಾರ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಎಸ್ಐಆರ್ ನಮೂನೆಯನ್ನು ವಿತರಿಸಬೇಕಾಗಿದ್ದರೂ, ರಾಮನಗರದಲ್ಲಿ ಈ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು.

"ಮುಖ್ಯಮಂತ್ರಿಗಳ ಪ್ರಭಾವ ಬಳಸಿ ರಾಮನಗರದ ಟಿಪ್ಪು ನಗರದ ಕಲ್ಯಾಣ ಮಂಟಪದಲ್ಲಿ ಸಾವಿರಾರು ಜನರನ್ನು ಸೇರಿಸಿ ಎಸ್ಐಆರ್ ಜಾತ್ರೆ ನಡೆಸಲಾಗುತ್ತಿದೆ. ದೇಶದ ಭದ್ರತೆಗೆ ಸವಾಲ ಆಗಿರುವ ಬಾಂಗ್ಲಾದೇಶದ ಅಕ್ರಮ ನುಸುಳು ಕೋರರಿಗೆ ಮತದಾರರ ಪಟ್ಟಿಯಲ್ಲಿ ಸ್ಥಾನ ಕಲ್ಪಿಸುವ ವ್ಯವಸ್ಥೆ ನಡೆಯುತ್ತಿದೆ" ಎಂದು ಅವರು ಗಂಭೀರ ಆರೋಪ ಮಾಡಿದರು.

ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಮುಖ್ಯಮಂತ್ರಿಗಳ ನಿವಾಸದಿಂದಲೇ ಆರಂಭವಾಗಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, "ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಯಾವುದೇ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ ಎಂಬ ರೀತಿಯಲ್ಲಿ ಜನರನ್ನು ಬೆದರಿಸುವುದು ಸರಿಯಲ್ಲ ಮುಖ್ಯಮಂತ್ರಿ ಹುದ್ದೆಯಲ್ಲಿರುವವರು ಇಂತಹ ಸಂದೇಶ ನೀಡುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ" ಎಂದು ಟೀಕಿಸಿದರು.

ಅಕ್ರಮದ ವಿರುದ್ಧ ಕೇಂದ್ರ ಮಟ್ಟದಲ್ಲಿ ದೂರು ಸಲ್ಲಿಸುವುದಾಗಿ ತಿಳಿಸಿದ ಅವರು, "ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿರುವ ಈ ಪ್ರಕರಣವನ್ನು ಸುಮ್ಮನೆ ಬಿಡುವುದಿಲ್ಲ. ನನ್ನ ಬಳಿ ಇರುವ ವೀಡಿಯೋಸ್ ಸೇರಿದಂತೆ ಎಲ್ಲಾ ಸಾಕ್ಷ್ಯಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸುತ್ತೇನೆ. ತಕ್ಷಣ ಮಧ್ಯ ಪ್ರವೇಶಿಸಿ ಎಸ್ಐಆರ್ ಪ್ರತಿಕ್ರಿಯೆಯನ್ನು

ಸ್ಥಗಿತಗೊಳಿಸಬೇಕು ಎಂದು ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು" ಎಂದು ಆಗ್ರಹಿಸಿದರು.

ಆದರೆ, ಕುಮಾರಸ್ವಾಮಿ ಮಾಡಿರುವ ಈ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮತ್ತು ಚುನಾವಣಾ ಆಯೋಗದಿಂದ ಅಧಿಕೃತ ಪ್ರತಿಕ್ರಿಯೆ ಇನ್ನು ಪ್ರಕಟವಾಗಿಲ್ಲ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online