Belagavi News:
ವಿಶ್ವ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಭಕ್ತರ ಭಾವನೆಗೆ ದಕ್ಕೆ ಉಂಟು ಮಾಡುವಂತಹ ಘಟನೆ ಬೆಳಕಿಗೆ ಬಂದಿದೆ. ಭಾರಿ ಮಳೆಯ ಪರಿಣಾಮ ದೇಗುಲದ ಒಳಭಾಗಕ್ಕೆ ಕೊಳಚೆ ನೀರು ನುಗ್ಗಿ, ಪವಿತ್ರ ಆತ್ಮಲಿಂಗವನ್ನು ಆವರಿಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ.
ಈ ಘಟನೆ ಭಕ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ದೇಗುಲದ ನಿರ್ವಹಣೆ ಹಾಗೂ ಮೂಲಸೌಕರ್ಯಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಮಳೆಯ ನೀರು ಮತ್ತು ಒಳಚರಂಡಿ ವ್ಯವಸ್ಥೆಯ ಅವ್ಯವಸ್ಥೆಯಿಂದ ಈ ಪರಿಸ್ಥಿತಿ ಉಂಟಾಗಿದೆ ಎನ್ನಲಾಗುತ್ತಿದೆ.
ಘಟನೆಯ ವೀಡಿಯೋ ಹಾಗೂ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾವಿರಾರು ಭಕ್ತರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪವಿತ್ರ ಕ್ಷೇತ್ರದ ಗರ್ಭಗುಡಿಯವರೆಗೂ ನೀರು ನುಗ್ಗಿರುವ ಘಟನೆ ಭಕ್ತರಲ್ಲಿ ಬೇಸರ ಉಂಟು ಮಾಡಿದೆ.
ದೇಗುಲ ಆಡಳಿತದ ವಿರುದ್ಧ ಆಕ್ರೋಶ :
ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಇಂತಹ ಘಟನೆ ನಡೆಯುವುದು ಆತಂಕಕಾರಿ ಎಂದು ಭಕ್ತರು ಅಭಿಪ್ರಾಯಪಟ್ಟಿದ್ದಾರೆ. ಮಳೆಗಾಲದ ಸಂದರ್ಭದಲ್ಲಿ ನೀರು ನುಗ್ಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದಕ್ಕೆ ದೇಗುಲ ಆಡಳಿತದ ವಿರುದ್ಧ ಟೀಕೆ ವ್ಯಕ್ತವಾಗಿದೆ.
ಘಟನೆಯ ಕುರಿತು ಸಂಬಂಧಿಸಿದ ಅಧಿಕಾರಿಗಳು ಹಾಗೂ ದೇಗುಲ ಆಡಳಿತ ತಕ್ಷಣ ಕ್ರಮ ಕೈಗೊಂಡು ಸ್ವಚ್ಛತೆ ಹಾಗೂ ನೀರು ಹರಿದು ಹೋಗುವ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ. ಪವಿತ್ರ ಕ್ಷೇತ್ರವನ್ನು ಕಾಪಾಡಲು ಶಾಶ್ವತ ಪರಿಹಾರ ಕಂಡುಕೊಳ್ಳ ಬೇಕೆಂಬ ಆಗ್ರಹವು ಕೇಳಿ ಬರುತ್ತಿದೆ.
ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಆತಂಕಕಾರಿ ಪರಿಸ್ಥಿತಿ: ಆತ್ಮಲಿಂಗ ಬನ್ನಿ ಆವರಿಸಿದ ಕೊಳಚೆ ನೀರು, ಭಕ್ತರ ಆಕ್ರೋಶ :
ರಾಜ್ಯದಲ್ಲಿ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಐತಿಹಾಸಿಕ ಮಹಾಬಲೇಶ್ವರ ದೇಗುಲದಲ್ಲಿ ಆತಂಕ ಕಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ದೇಗುಲದ ಗರ್ಭಗುಡಿಗೆ ಕೊಳಚೆ ನೀರು ನುಗ್ಗಿ ,ಮಹಾಬಲೇಶ್ವರನ ಪವಿತ್ರ ಆತ್ಮ ಲಿಂಗವನ್ನು ಸಂಪೂರ್ಣವಾಗಿ ನೀರಿನಲ್ಲಿ ಮುಳಗಿರುವ ದೃಶ್ಯಭಕ್ತರಲ್ಲಿ ತೀವ್ರ ಸಮಾಧಾನವನ್ನು ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ಭರಿ ಮಳೆಯ ಹಿನ್ನೆಲೆಯಲ್ಲಿ ದೇಗುಲದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಂತಿದ್ದು, ಅಕ್ಕಪಕ್ಕದ ಶೌಚಾಲಯಗಳು ಹಾಗೂ ಒಳಚರಂಡಿ ವ್ಯವಸ್ಥೆಯಿಂದ ಹರಿದು ಬಂದ ಕೊಳಚೆ ನೀರು ಗರ್ಭಗುಡಿಗೆ ನುಗ್ಗಿರುವುದಾಗಿ ತಿಳಿದುಬಂದಿದೆ. ಈ ಘಟನೆ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು , ಭಕ್ತರ ಆಕ್ರೋಶ ಮತ್ತಷ್ಟು ಹೆಚ್ಚಿಸಿವೆ.
ಇದು ಮೊದಲ ಬಾರಿಗೆ ಅಲ್ಲ , ಮತ್ತೆ ಮರುಕಳಿಸಿದ ಸಮಸ್ಯೆ :
ಸ್ಥಳೀಯರ ಪ್ರಕಾರ , ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ಕೊಳಚೆ ನೀರು ನುಗ್ಗಿರುವುದು ಇದೇ ಮೊದಲ ಘಟನೆ ಅಲ್ಲ, ಹಿಂದೆಯೂ ಇದೇ ರೀತಿಯ ಸಮಸ್ಯೆ ಉಂಟಾಗಿತ್ತು ,ಶಾಶ್ವತ ಪರಿಹಾರ ಕಂಡುಕೊಳ್ಳದ ಕಾರಣ ಮತ್ತೆ ಇಂಥ ಪರಿಸ್ಥಿತಿ ಎದುರಾಗಿದೆ ಎನ್ನಲಾಗಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಪವಿತ್ರ ಕ್ಷೇತ್ರದಲ್ಲಿ ಇಂತಹ ಘಟನೆ ಮರುಕಳಿಸುತ್ತಿರುವುದು ದೇಗುಲದ ಮೂಲಸೌಕರ್ಯ ಮತ್ತು ನಿರ್ವಹಣೆಯ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಹುಟ್ಟು ಹಾಕಿದೆ.
ಭಕ್ತರಿಂದ ತೀವ್ರ ಆಕ್ರೋಶ :
ಆತ್ಮಲಿಂಗದವರೆಗೆ ಕೊಳಚೆ ನೀರು ತಲುಪಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಸ್ವಚ್ಛತಾ ಕಾರ್ಯ ಕೈಗೊಂಡು , ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ದೇಗುಲದ ಒಳಚರಂಡಿ ವ್ಯವಸ್ಥೆ ಸುಧಾರಣೆ, ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಅಭಿವೃದ್ಧಿ ಹಾಗೂ ಗರ್ಭಗುಡಿಯ ರಕ್ಷಣೆಗೆ ವಿಶೇಷ ಯೋಜನೆಯ ರೂಪಿಸುವಂತೆ ಭಕ್ತರು ಮತ್ತು ಸ್ಥಳೀಯರು ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದೇವಸ್ಥಾನ ಪಾವಿತ್ರ್ಯಕ್ಕೆ ಧಕ್ಕೆ - ಒತ್ತುವರಿ ಮತ್ತು ಶೌಚಾಲಯದ ನೀರು ಸಮುದ್ರಕ್ಕೆ ಹರಿವು ಆರೋಪ :
ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಣಿಜ್ಯ ಕಟ್ಟಡಗಳ ಒತ್ತುವರಿ ಹಾಗೂ ಶೌಚಾಲಯದ ನೀರನ್ನು ನೇರವಾಗಿ ಸಮುದ್ರಕ್ಕೆ ಹರಿಸುತ್ತಿರುವುದು ಪರಿಸರ ಮತ್ತು ಧಾರ್ಮಿಕ ಪವಿತ್ರದ ಸಮಸ್ಯೆಗೆ ಮೂಲ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಅನಧಿಕೃತ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿದ್ದು , ಇದರಿಂದ ದೇವಾಲಯದ ಸ್ವಚ್ಛತೆ ಮತ್ತು ಪವಿತ್ರಕ್ಕೆ ಧಕ್ಕೆ ಉಂಟಾಗಿದೆ ಎಂದು ಭಕ್ತರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಚೌಚಾಲಯಗಳ ತ್ಯಾಜ್ಯ ನೀರನ್ನು ಯಾವುದೇ ಸಂಸ್ಕರಣೆ ಇಲ್ಲದೆ ನೇರವಾಗಿ ಸಮುದ್ರಕ್ಕೆ ಬಿಡಲಾಗುತ್ತಿರುವುದು ಪರಿಸರ ಮಾಲಿನ್ಯಕ್ಕೂ ಕಾರಣವಾಗಿದೆ ಎನ್ನಲಾಗಿದೆ.
ಈ ಗಂಭೀರ ಸಮಸ್ಯೆಗಳ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮೇಲುಸ್ತುವಾರಿ ಸಮಿತಿ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಮತ್ತು ಭಕ್ತರು ಆರೋಪಿಸಿದ್ದಾರೆ. ಹಲವು ಬಾರಿ ಗಮನ ಸೆಳೆದರು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದ್ದಾರೆ.
ದೇವಸ್ಥಾನದ ಪಾವಿತ್ರ್ಯ ಕಾಪಾಡುವ ಜೊತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ. ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿ, ತ್ಯಾಜ್ಯ ನೀರಿನ ಸಮರ್ಪಕ ನಿರ್ವಹಣೆಗೆ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸ್ಥಳೀಯರ ಆಕ್ರೋಶದ ನಡುವೆ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಗೆ ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎಂಬುವುದರ ಬಗ್ಗೆ ಸಾರ್ವಜನಿಕರು ಕಾತುರದಿಂದ ಎದುರು ನೋಡುತ್ತಿದ್ದಾರೆ.
Also Read:
ಕರ್ನಾಟಕದಲ್ಲಿ ಮಳೆರಾಯನ ಆರ್ಭಟ : ಚಿಕ್ಕಮಗಳೂರು ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್