Belagavi News:
ಮಲೆನಾಡು ಮತ್ತು ಕರಾವಳಿ ಭಾಗದ ಜನತೆಯ ಬಹುಕಾಲದ ರೈಲು ಸಂಪರ್ಕದ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಬಹು ನಿರೀಕ್ಷಿತ ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಕೇಂದ್ರ ರೈಲ್ವೆ ಇಲಾಖೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ,'ಅಮೃತ್ ಭರತ್' ಯೋಜನೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಹೊಸ ರೈಲು ಮಾರ್ಗ ಮಲೆನಾಡು ಹಾಗೂ ಕರಾವಳಿ ಭಾಗದ ಜನರಿಗೆ ವೇಗವಾದ ಮತ್ತು ಸುಗಮ ಸಂಪರ್ಕ ಕಲ್ಪಿಸುವುದರ ಜೊತೆಗೆ ಶೃಂಗೇರಿ ಶಾರದಾಂಬೆ ದರ್ಶನಕ್ಕೆ ತೆರಳುವ ಸಾವಿರಾರು ಭಕ್ತರಿಗೆ ಹೆಚ್ಚಿನ ಅನುಕೂಲ ಒದಗಿಸಲಿದೆ ಎಂದು ಅವರು ಹೇಳಿದರು.
ಇದೆ ವೇಳೆ, ಹಾಸನ ಮಂಗಳೂರು ರೈಲು ಹಳಿ, ಜಿಗುಣಗೊಳಿಸುವ 8,300 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಯ ಸಮೀಕ್ಷೆಯು ಪ್ರಗತಿಯಲ್ಲಿದೆ ಎಂದು ಸಚಿವರು ಮಾಹಿತಿ ನೀಡಿದ್ದರು. ಈ ಯೋಜನೆ ಪೂರ್ಣಗೊಂಡ ಬಳಿಕ ಕರಾವಳಿ ಭಾಗದ ರೈಲು ಸಂಚಾರ ಮತ್ತಷ್ಟು ವೇಗ ಪಡೆಯಲಿದ್ದು, ವ್ಯಾಪಾರ, ಪ್ರವಾಸೋದ್ಯಮ ಹಾಗೂ ಸರಕು ಸಾಗಣೆಗೆ ಹೊಸ ಉತ್ತೇಜನ ಸಿಗಲಿದೆ.
ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲ್ವೆ ಮಾರ್ಗ ಯೋಜನೆ ಜಾರಿಯಾದರೆ ಮಲೆನಾಡು ಭಾಗದ ಜನರ ದಶಕಗಳ ಬೇಡಿಕೆ ಈಡೇರಲಿದ್ದು, ಪ್ರವಾಸೋದ್ಯಮ ಕ್ಷೇತ್ರಕ್ಕೂ ದೊಡ್ಡ ಮಟ್ಟದ ಲಾಭವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
3,300 ಕೋಟಿ ರೂ. ಭಾರಿ ಯೋಜನೆ - ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲ್ವೆ ಮಾರ್ಗಕ್ಕೆ ಗ್ರೀನ್ ಸಿಗ್ನಲ್ :
ಮಲೆನಾಡು ಮತ್ತು ಕರಾವಳಿ ಭಾಗದ ಜನರು ಬಹುಕಾಲದ ಕನಸಾಗಿದ್ದ ಶಿವಮೊಗ್ಗ ಶೃಂಗೇರಿ ಮತ್ತು ಮಂಗಳೂರು ಹೊಸ ರೈಲ್ವೆ ಮಾರ್ಗ ಯೋಜನೆಗೆ ಮಹತ್ವದ ಮುನ್ನಡೆ ಸಿಕ್ಕಿದೆ. ಒಟ್ಟು 332 ಕಿಲೋಮೀಟರ್ ಉದ್ದದ ಈ ಹೊಸ ರೈಲು ಮಾರ್ಗಕ್ಕೆ ಅಂದಾಜು 3300 ಕೋಟಿ ರೂಪಾಯಿ ವೆಚ್ಚ ನಿಗದಿಯಾಗಿದ್ದು, ಯೋಜನೆಯ ಫೈನಲ್ ಲೊಕೇಶನ್ ಸರ್ವೆ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಕೇಂದ್ರ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಅವರ ಪ್ರಕಾರ, ಯೋಜನೆಗೆ ಇಲಾಖೆಯಿಂದ ಈಗಾಗಲೇ ಅನುಮೋದನೆ ದೊರೆತಿದ್ದು, ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ತಕ್ಷಣವೇ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗುವುದು. ಈ ಘೋಷಣೆಯಿಂದ ಮಲೆನಾಡು ಹಾಗೂ ಕರಾವಳಿ ಭಾಗದ ಜನರಲ್ಲಿ ಭಾರಿ ನಿರೀಕ್ಷೆ ಮೂಡಿದೆ.
ಈ ಹೊಸ ರೈಲು ಮಾರ್ಗ ಜಾರಿಗೆ ಬಂದರೆ ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ತೆರಳುವ ಸಾವಿರಾರು ಭಕ್ತರಿಗೆ ವೇಗವಾದ ಹಾಗೂ ಸುಲಭ ಸಂಪರ್ಕ ಲಭ್ಯವಾಗಲಿದೆ. ಜೊತೆಗೆ ಕರಾವಳಿ ಮತ್ತು ಮಲೆನಾಡು ಭಾಗಗಳ ನಡುವಿನ ವಾಣಿಜ್ಯ , ಪ್ರವಾಸೋದ್ಯಮ ಹಾಗೂ ಸರಕು ಸಾಗಾಣೆಗೆ ದೊಡ್ಡಮಟ್ಟದ ಉತ್ತೇಜನ ಸಿಗಲಿದೆ ಎಂದು ಅಂದಾಜಿಸಲಾಗಿದೆ.
ಪ್ರಮುಖವಾಗಿ, ಮಂಗಳೂರು ಮತ್ತು ಶಿವಮೊಗ್ಗ ನಡುವಿನ ಸಂಪರ್ಕ ಮತ್ತಷ್ಟು ಬಲಪಡಿಸಲಿದ್ದು, ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೊಸ ಚೈತನ್ಯ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಈ ಯೋಜನೆ ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಕರಾವಳಿ ಕರ್ನಾಟಕದ ರೈಲು ಸಂಪರ್ಕ ವ್ಯವಸ್ಥೆಗೆ ಮತ್ತೊಂದು ಭಾರಿ ಉತ್ತೇಜನ ಸಿಕ್ಕಿದ್ದು, ಹಾಸನ ಮಂಗಳೂರು ರೈಲು ಹಳಿ, ಭಿಗುಣಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ವೇಗ ನೀಡಿದೆ. ಹಾಸನ ಮತ್ತು ಮಂಗಳೂರು ನಡುವಿನ 247 ಕಿಲೋಮೀಟರ್ ರೈಲು ಮಾರ್ಗವನ್ನು ವಿಗುಣಗೊಳಿಸಲು ಒಟ್ಟು 8300 ಕೋಟಿ ರೂಪಾಯಿ ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಈ ಯೋಜನೆಯ ಫೈನಲ್ ಲೊಕೇಶನ್ ಸರ್ವೆ ಸದ್ಯ ಪರಿಶೀಲನ ಹಂತದಲ್ಲಿದ್ದು, ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕಾಮಗಾರಿಗೆ ವೇದ ಸಿಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ರೈಲ್ವೆ ಹಳಿ ವಿಜ್ಞಾನ ಗೊಂಡ ಬಳಿಕ ಕರಾವಳಿ ಭಾಗದ ರೈಲು ಸಂಚಾರ ಮತ್ತಷ್ಟು ವೇಗವಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ.
ಪ್ರಮುಖವಾಗಿ, ಸರಕು ಸಾಗಣೆ, ವಾಣಿಜ್ಯ ಚಟುವಟಿಕೆಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ಈ ಯೋಜನೆ ಹೊಸ ಚೈತನ್ಯ ನೀಡಲಿದೆ. ಮಂಗಳೂರು ಬಂದರು ಸಂಪರ್ಕವು ಮತ್ತಷ್ಟು ಬಲವಾಗಲಿದ್ದು, ಕೈಗಾರಿಕಾ ಹಾಗೂ ಆರ್ಥಿಕ ಬೆಳವಣಿಗೆಗೆ ದೊಡ್ಡ ಮಟ್ಟದ ಉತ್ತೇಜನ ಸಿಗುವ ನಿರೀಕ್ಷೆ ಇದೆ.
ಇದೆ ವೇಳೆ, ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಯೋಜನೆಯು ವೇಗ ಪಡೆದುಕೊಂಡಿರುವ ಹಿನ್ನೆಲೆ, ಈ ಎರಡು ಮೆಗಾ ಯೋಜನೆಗಳು ಕರಾವಳಿ ಕರ್ನಾಟಕದ ಸಾರಿಗೆ ಇತಿಹಾಸದಲ್ಲೇ ಹೊಸ ಕ್ರಾಂತಿ ಸೃಷ್ಟಿ ಕಲಿವೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
Also Read:
ಬಂಗಾಳದಲ್ಲಿ ಹೇಳಿದ್ದು,ಕೇರಳದಲ್ಲಿ ಉಲ್ಟಾ:ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತಿರುಗೇಟು