<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ರಾಜ್ಯದಲ್ಲಿ ಪೊಲೀಸ್ ನೇಮಕಾತಿ ಸಿಹಿ ಸುದ್ದಿ:ಮುಂದಿನ ತಿಂಗಳು ಅಧಿಸೂಚನೆ ಎಂದ ಪ್ರಿಯಾಂಕ ಖರ್ಗೆ

ರಾಜ್ಯದಲ್ಲಿ ಪೊಲೀಸ್ ನೇಮಕಾತಿ ಸಿಹಿ ಸುದ್ದಿ:ಮುಂದಿನ ತಿಂಗಳು ಅಧಿಸೂಚನೆ ಎಂದ ಪ್ರಿಯಾಂಕ ಖರ್ಗೆ
Summary: Bengaluru: Home Minister Priyanka Kharge has said that significant administrative reforms and recruitment processes are being implemented in the state police department. He called it a "major surgery" in the police system with the aim of increasing the efficiency of the department.

BELAGAVI NEWS :

ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ, ಹುದ್ದೆಗಳ ತರ್ಕಬದ್ದಗೊಳಿಸುವಿಕೆ ಹಾಗೂ ಇಲಾಖೆಯ ಸಮರ್ಪಕ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಸುಧಾರಣಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮಗಳು ಪ್ರಮುಖವಾಗಿವೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನೇಮಕಾತಿ ಪ್ರಕ್ರಿಯೆಗೂ ವೇಗ ನೀಡಲಾಗುತ್ತಿದ್ದು, ಯುವಕರಿಗೆ ಹೆಚ್ಚಿನ ಉದ್ಯೋಗವಕಾಶಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೆಲಸಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಅವರ ವರ್ಗಾವಣೆ ಹಾಗೂ ಹುದ್ದೆಗಳ ಪುನರ್ ವ್ಯವಸ್ಥೆಗೆ ಸರ್ಕಾರ ಮುಂದಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿ ಅವರು ವಿಶೇಷ ಆಸಕ್ತಿ ವಹಿಸಿದ್ದು ,ಇಲಾಖೆಯಲ್ಲಿ ಸಮತೋಲನ ಮತ್ತು ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ನೇಮಕಾತಿ ಕುರಿತು ಮಾತನಾಡಿದರು, ಈಗಾಗಲೇ 7,000 ಸಿಬ್ಬಂದಿ ನೇಮಕಾತಿಗೆ ದಿನಾಂಕ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಮೂಲಕ ಇಲಾಖೆಯ ಕಾರ್ಯ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಕ್ರಮಗಳಿಂದ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕ ಪಾರದರ್ಶಕತೆ ಹೆಚ್ಚುವ ಜೊತೆಗೆ ಯುವಕರಿಗೆ ಉದ್ಯೋಗವಕಾಶಗಳು ವಿಸ್ತಾರಗೊಳ್ಳಲಿವೆ ಎಂದು ಮೂಲಗಳು ತಿಳಿಸಿವೆ.

ಇದರ ಜೊತೆಗೆ ರಾಜ್ಯದಲ್ಲಿ ಪೋಲಿಸ್ ಇಲಾಖೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳ ಅಂತ್ಯದ ವೇಳೆಗೆ ಪಿಎಸ್ಐ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಮತ್ತೊಂದು 5000 ರಿಂದ ಆರು ಸಾವಿರ ಸಿಬ್ಬಂದಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಘೋಷಿಸಿದ್ದಾರೆ. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಮೂಲಕ ಕಾರ್ಯಕ್ಷಮತೆ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಪೊಲೀಸ್ ಠಾಣೆಗಳ ರಚನೆ ಮತ್ತು ವಿಸ್ತರಣೆಯ ಕುರಿತು ಮಹತ್ವದ ಸ್ಪಷ್ಟನೆ ನೀಡಿದವರು, ಇನ್ನು ಮುಂದೆ ಠಾಣೆಗಳ ಸಂಖ್ಯೆಯನ್ನು ಜನಸಂಖ್ಯೆ ಆಧಾರದ ಮೇಲೆ ಅಲ್ಲ,ಬದಲಾಗಿ ಅಪರಾಧ ಪ್ರಮಾಣದ ಆಧಾರದ ಮೇಲೆ ನಿರ್ಬಂಧಿಸಲಾಗುವುದು ಎಂದು ಹೇಳಿದ್ದಾರೆ. ಭಾರತವನ್ನು ಅಪರಾಧ ಕ್ರಮಗಳ ಹೆಚ್ಚಳ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಠಾಣೆಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪರಿತ ಸೇವೆ ಹಾಗೂ ಪರಿಣಾಮಕಾರಿ ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಕ್ರಮಗಳು ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಜೊತೆಗೆ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವತ್ತ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online